ಕೇರಳದಲ್ಲಿ ಅಪರೂಪದ ಮೆದುಳಿನ ಸೋಂಕಿಗೆ ಮತ್ತಿಬ್ಬರು ಬಲಿ

Date:

Advertisements

ಕೇರಳದಲ್ಲಿ ಅಪರೂಪದ ಮೆದುಳಿನ ಸೋಂಕಿಗೆ ಮತ್ತಿಬ್ಬರು ಬಲಿಯಾಗಿದ್ದಾರೆ. ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂರು ತಿಂಗಳ ಶಿಶು ಸೇರಿದಂತೆ ಇಬ್ಬರು ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಎಂಬ ಅಪರೂಪದ ಮತ್ತು ಮಾರಕ ಮೆದುಳಿನ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಈ ಮೂಲಕ ಆಗಸ್ಟ್ ತಿಂಗಳಲ್ಲಿ ಕೇರಳದಲ್ಲಿ ಅಮೀಬಿಕ್ ಮೆದುಳು ಜ್ವರದಿಂದ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಶಿಶು ಈ ಜಿಲ್ಲೆಯ ಓಮಸ್ಸೇರಿಯ ಅಬೂಬಕರ್ ಸಿದ್ದಿಕ್ ಅವರ ಮಗನಾಗಿದ್ದು, ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ಭಾನುವಾರ ಬಾಲಕನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ | ಮೆದುಳು ತಿನ್ನುವ ಅಮೀಬಾದಿಂದ 5 ವರ್ಷದ ಬಾಲಕಿ ಸಾವು

ಮಲಪ್ಪುರಂ ಜಿಲ್ಲೆಯ ಕಪ್ಪಿಲ್‌ನ ರಮ್ಲಾ (52) ಎಂಬವರು ಜುಲೈ 8ರಿಂದ ರೋಗ ಲಕ್ಷಣಗಳನ್ನು ಹೊಂದಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ನಂತರ ಅವರ ಸ್ಥಿತಿ ಹದಗೆಟ್ಟ ಕಾರಣ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದ್ದು ಮೃತಪಟ್ಟಿದ್ದಾರೆ.

ಆರೋಗ್ಯ ಅಧಿಕಾರಿಗಳ ಪ್ರಕಾರ, ಕೋಝಿಕ್ಕೋಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳ ಇತರ ಎಂಟು ರೋಗಿಗಳು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಕ್ಕೂ ಮೊದಲು, ಆಗಸ್ಟ್ 14ರಂದು, ತಮರಸ್ಸೇರಿಯ ಒಂಬತ್ತು ವರ್ಷದ ಬಾಲಕಿ ಇದೇ ಸೋಂಕಿನಿಂದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು.

ಪ್ರಾಥಮಿಕವಾಗಿ ಕಲುಷಿತ ನೀರಿನಲ್ಲಿ ಈಜುವುದು ಅಥವಾ ಸ್ನಾನ ಮಾಡುವುದರಿಂದ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಸೋಂಕಿಗೆ ಒಳಗಾಗುತ್ತಿದ್ದಾರೆ ಎನ್ನಲಾಗಿದೆ. ಈ ವರ್ಷ ಕೇರಳದಾದ್ಯಂತ ಒಟ್ಟು 42 ಪ್ರಕರಣಗಳು ವರದಿಯಾಗಿವೆ.

ಆರೋಗ್ಯ ಇಲಾಖೆ ಕೋಝಿಕ್ಕೋಡ್, ವಯನಾಡು ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಬಾವಿಗಳು ಮತ್ತು ನೀರು ಸಂಗ್ರಹ ಟ್ಯಾಂಕ್‌ಗಳ ಸ್ವಚ್ಛತೆಯನ್ನು ಪ್ರಾರಂಭಿಸಿದೆ. ಹೊಸ ಪ್ರಕರಣಗಳನ್ನು ತಡೆಗಟ್ಟಲು ಜಾಗೃತಿ ಅಭಿಯಾನಗಳನ್ನು ಸಹ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

Download Eedina App Android / iOS

X