ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಪೋಸ್ಟ್ ಮಾಡಿದ್ದು, ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸುತ್ತೇವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ತಿಳಿಸಿದೆ. ಶನಿವಾರ ಒಂಬತ್ತನೇ ದಿನಕ್ಕೆ ಕಾರ್ಯಾಚರಣೆ ಕಾಲಿಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಸೇನಾ ವಾಹನ ಅಪಘಾತ; ಮೃತ ಐವರು ಯೋಧರಲ್ಲಿ ಮೂವರು ಕನ್ನಡಿಗರು
ದಕ್ಷಿಣ ಕಾಶ್ಮೀರ ಜಿಲ್ಲೆಯ ಅಖಾಲ್‌ನಲ್ಲಿರುವ ಕಾಡಿನಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಲಭಿಸಿತ್ತು. ಇದರ ಆಧಾರದಲ್ಲಿ ಆಗಸ್ಟ್ 1ರಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗಾಗಲೇ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಭಯೋತ್ಪಾದಕರ ಗುರುತು ಇನ್ನೂ ಬಹಿರಂಗವಾಗಿಲ್ಲ.
Update: OP AKHAL, Kulgam
— Chinar Corps🍁 – Indian Army (@ChinarcorpsIA) August 9, 2025
Chinar Corps honours the supreme sacrifice of the Bravehearts, L/Nk Pritpal Singh and Sep Harminder Singh, in line of duty for the Nation. Their courage and dedication will forever inspire us. #IndianArmy expresses deepest condolences and stand in… pic.twitter.com/La4i49Ov2h
ಶನಿವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಚಿನಾರ್ ಕಾರ್ಪ್ಸ್, “ದೇಶಕ್ಕಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಧೈರ್ಯಶಾಲಿಗಳಾದ ಎಲ್/ಎನ್ ಕೆ ಪ್ರೀತ್‌ಪಾಲ್ ಸಿಂಗ್ ಮತ್ತು ಹರ್ಮಿಂದರ್ ಸಿಂಗ್ ಅವರ ತ್ಯಾಗವನ್ನು ಚಿನಾರ್ ಕಾರ್ಪ್ಸ್ ಗೌರವಿಸುತ್ತದೆ. ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ. ಕಾರ್ಯಾಚರಣೆ ಮುಂದುವರೆದಿದೆ” ಎಂದು ಹೇಳಿದೆ.
