ಜಮ್ಮು ಕಾಶ್ಮೀರ | ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ; ಇಬ್ಬರು ಯೋಧರು ಹುತಾತ್ಮ

Date:

ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಪೋಸ್ಟ್ ಮಾಡಿದ್ದು, ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸುತ್ತೇವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ತಿಳಿಸಿದೆ. ಶನಿವಾರ ಒಂಬತ್ತನೇ ದಿನಕ್ಕೆ ಕಾರ್ಯಾಚರಣೆ ಕಾಲಿಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕನ್ನಡ ವಿಚಾರ ಪರಂಪರೆಗೆ ಕೆವಿಎನ್...

ನಮ್ಮೊಳಗಿನ ತಾಕಲಾಟ, ಹೊಯ್ದಾಟ, ತೀರಗಳೇ ತಲುಪದ ಭಾರಿ ಅಲೆಗಳ ಏರಾಟದಲ್ಲಿ ಸಿಲುಕಿ ಒದ್ದಾಡುವಾಗ ಒಮ್ಮೆ ಕೆವಿಎನ್‌ ಜತೆ ಮಾತನಾಡಿದರೆ ಸಾಕು… ಕಂಡ ಆಪ್ತರು “ ಏನೋ ಇವತ್ತು ನಿನಗೆ ಬಂಪರ್‌ ಲಾಟರಿ ಹೊಡೀತಾ’’...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ...

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್‌ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್‌ನಲ್ಲಿ 20%ರ...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ ಸಮಸ್ಯೆ ಇಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನಗರದ ರಸ್ತೆಗಳಲ್ಲಿ ಆಟೋಗಳ ಸಂಖ್ಯೆ ಹೆಚ್ಚುತ್ತಿರುವುದು, ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಕೇಳುವುದು,...

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಸೇನಾ ವಾಹನ ಅಪಘಾತ; ಮೃತ ಐವರು ಯೋಧರಲ್ಲಿ ಮೂವರು ಕನ್ನಡಿಗರು

ದಕ್ಷಿಣ ಕಾಶ್ಮೀರ ಜಿಲ್ಲೆಯ ಅಖಾಲ್‌ನಲ್ಲಿರುವ ಕಾಡಿನಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಲಭಿಸಿತ್ತು. ಇದರ ಆಧಾರದಲ್ಲಿ ಆಗಸ್ಟ್ 1ರಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗಾಗಲೇ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಭಯೋತ್ಪಾದಕರ ಗುರುತು ಇನ್ನೂ ಬಹಿರಂಗವಾಗಿಲ್ಲ.

ಶನಿವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಚಿನಾರ್ ಕಾರ್ಪ್ಸ್, “ದೇಶಕ್ಕಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಧೈರ್ಯಶಾಲಿಗಳಾದ ಎಲ್/ಎನ್ ಕೆ ಪ್ರೀತ್‌ಪಾಲ್ ಸಿಂಗ್ ಮತ್ತು ಹರ್ಮಿಂದರ್ ಸಿಂಗ್ ಅವರ ತ್ಯಾಗವನ್ನು ಚಿನಾರ್ ಕಾರ್ಪ್ಸ್ ಗೌರವಿಸುತ್ತದೆ. ಧೈರ್ಯ ಮತ್ತು ಸಮರ್ಪಣೆ ನಮಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ. ಕಾರ್ಯಾಚರಣೆ ಮುಂದುವರೆದಿದೆ” ಎಂದು ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಬಿಐಗೆ ₹12,668 ಕೋಟಿ ವಂಚನೆ: ವಿಡಿಯೊಕಾನ್‌ ಮಾಜಿ ಪ್ರವರ್ತಕ ವೇಣುಗೋಪಾಲ್ ಧೂತ್‌ ‘ದಿವಾಳಿ’

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ನೇತೃತ್ವದ ಪ್ರಬಲ ಬ್ಯಾಂಕ್‌ಗಳ ಒಕ್ಕೂಟಕ್ಕೆ...

SIR | 7 ರಾಜ್ಯಗಳ ಅಳಿಸಲಾದ ಮತದಾರರಿಗೆ ‘ಫಾರ್ಮ್‌-6’ ಇಲ್ಲದೆಯೇ ಮರುನೋಂದಣಿಗೆ ಅವಕಾಶ; ಕರ್ನಾಟಕಕ್ಕೆ ಮಾತ್ರ ಏಕಿಲ್ಲ?

ಮತಪಟ್ಟಿಯಿಂದ ಹೊರಗುಳಿದವರಿಗೆ ಹಳೆಯ ಗುರುತಿನ ಚೀಟಿಯಲ್ಲೇ ಮರುಸೇರ್ಪಡೆಗೆ ಚುನಾವಣಾ ಆಯೋಗ ಅವಕಾಶ...

ಕೇರಳ ಮೂಲದ ನಿತ್ಯಾ ರಾಮನ್; ದೆಹಲಿಯ ಕೊಳೆಗೇರಿ ಹೋರಾಟದಿಂದ ಲಾಸ್ ಏಂಜಲೀಸ್ ಮೇಯರ್ ಪಟ್ಟದವರೆಗೆ

ಅಮೆರಿಕದ ಎರಡನೇ ಅತಿದೊಡ್ಡ ನಗರವಾದ ಲಾಸ್ ಏಂಜಲೀಸ್‌ನ ನೂತನ ಮೇಯರ್ ಆಗಿ...

‘ಕೋಲ್ಕತ್ತಾ ಪೊಲೀಸರ ಕಾವಲಿನಲ್ಲೇ ನನ್ನ ಮನೆ ಮೇಲೆ ದಾಳಿ’ – ಬಿಜೆಪಿ ವಿರುದ್ಧ ಅಭಿಷೇಕ್ ಬ್ಯಾನರ್ಜಿ ಆರೋಪ

ತೃಣಮೂಲ ಕಾಂಗ್ರೆಸ್ (TMC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ...