ಆಂಧ್ರ ಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ; 20 ಮಂದಿ ಸಾವು

Date:

ಪಟಾಕಿ ತಯಾರಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 20 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಸಾಮರ್ಲಕೋಟ ಮಂಡಲದ ವೆಟ್ಲಪಾಲೆಂ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೃತದೇಹಗಳು ಛಿದ್ರಗೊಂಡು ಪಕ್ಕದ ಭತ್ತದ ಗದ್ದೆಗೆ ಬಿದ್ದಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಘಟನೆಯ ಕುರಿತು ಅಲ್ಲಿನ ಗೃಹ ಸಚಿವೆ ಅನಿತಾ ಮಾತನಾಡಿ, ಕಾಕಿನಾಡ ಜಿಲ್ಲೆಯ ವೆಟ್ಲಪಾಲೆಂನಲ್ಲಿರುವ ಬಾಣಸಂಚ ಪಟಾಕಿ ಉತ್ಪಾದನಾ ಕೇಂದ್ರದಲ್ಲಿ ಸಂಭವಿಸಿದ ಸ್ಫೋಟ ತೀವ್ರ ಆಘಾತವನ್ನುಂಟುಮಾಡಿದೆ. ಘಟನೆಯಲ್ಲಿ ಹಲವರು ಮೃತಪಟ್ಟಿರುವುದು ಬೇಸರದ ಸಂಗತಿ. ಘಟನೆ ಬಗ್ಗೆ ನಾನು ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ಹಾಗೂ ಗಾಯಗೊಂಡಿರುವವರಿಗೆ ಬೇಕಾದ ನೆರವನ್ನು ತಕ್ಷಣವೇ ಒದಗಿಸಲು ಸೂಚಿಸಿದ್ದೇನೆ ಎಂದರು.

ಇದನ್ನು ಓದಿದ್ದೀರಾ? ಎಪ್‌ಸ್ಟೀನ್‌ ಪ್ರಕರಣ: ಟ್ರಂಪ್ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಕಡತಗಳೇ ನಾಪತ್ತೆ

ಇನ್ನು ದುರಂತದಲ್ಲಿ ಮೃತಪಟ್ಟವರಿಗೆ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕಾಕಿನಾಡ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಘಟನೆ ನನಗೆ ತೀವ್ರ ನೋವುಂಟುಮಾಡಿದೆ. ಘಟನೆಯಲ್ಲಿ ಹಲವಾರು ಮಂದಿ ಮೃತಪಟ್ಟಿದ್ದಾರೆ ಎಂದು ಬೇಸರಿಸಿದ್ದಾರೆ. ಅಲ್ಲದೇ ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಸಂತ್ರಸ್ತರಿಗೆ ಬೇಕಾದ ನೆರವನ್ನು ಒದಗಿಸುವಂತೆ ಸೂಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...