ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಶನಿವಾರ ಸಂಜೆ ಭಾರೀ ಬೆಂಕಿ ಅವಘಡವೊಂದು ಸಂಭವಿಸಿದ್ದು, ಈವರೆಗೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದಾಗಿ ವರದಿಯಾಗಿದೆ.
ಘಟನೆಯಲ್ಲಿ ಈವರೆಗೆ 20 ಮಂದಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತಪಟ್ಟವರ ಪೈಕಿ ಹೆಚ್ಚಿನವರು ಗೇಮಿಂಗ್ ಝೋನ್‌ನಲ್ಲಿ ಆಡಲು ಬಂದಿದ್ದ ಮಕ್ಕಳು ಎಂದು ತಿಳಿದುಬಂದಿದೆ. ಮೃತಪಟ್ಟವರ ವಿವರ ಇನ್ನೂ ಲಭ್ಯವಾಗಿಲ್ಲ.
At least 20 persons including children were killed in a massive fire that broke out at a game zone in Gujarat’s Rajkot city on May 25 evening, officials said. 📸 Special Arrangement. https://t.co/KpcBtf8BLV pic.twitter.com/x3xRR5AhNp
— The Hindu (@the_hindu) May 25, 2024
ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ಗಾಳಿಯ ವೇಗದಿಂದಾಗಿ ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.
Horrible horrible fire in a gaming zone in Rajkot in which more than 20 people have been killed. Many of them were children. Extremely heart wrenching tragedy. #fire #Rajkot pic.twitter.com/Iwuo4cDsw9
— Mahesh Langa (@LangaMahesh) May 25, 2024
ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.

In a heart wrenching incident, as many as 20 persons have died in a massive fire in a gaming zone in #Rajkot.
The identity of deceased are not known yet.
Who will take the Responsibility ?
No official statement from CM of Gujarat @Bhupendrapbjp ?pic.twitter.com/QIYs6lp4rK— ✎𝒜 πundhati🌵🍉🇵🇸 (@Polytikles) May 25, 2024
“ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡಲು ಸೂಚನೆ ನೀಡಲಾಗಿದೆ” ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ.
#WATCH | Rajkot, Gujarat: Raju Bhargava, Police Commissioner, Rajkot, says, “Fire broke out in the TRP gaming zone in the afternoon. The rescue operations are on. The fire is under control. We are trying to retrieve as many bodies as possible. As of now, around 20 bodies have… https://t.co/Gd9N1Pd8ka pic.twitter.com/zKwIyaABHF
— ANI (@ANI) May 25, 2024
