‌ವಿಪಕ್ಷಗಳ ಒಗ್ಗೂಡಿಸಲು ʻಸಾಮಾಜಿಕ ನ್ಯಾಯ ಸಮ್ಮೇಳನʼ; ಸ್ಟಾಲಿನ್ ನೇತೃತ್ವ

Date:

ಬಿಜೆಪಿ ವಿರೋಧಿ ಮತ್ತು ವಿರೋಧ ಪಕ್ಷಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಪ್ರಯತ್ನಕ್ಕೆ ಡಿಎಂಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮುಂದಾಗಿದ್ದಾರೆ.

ʻಅಖಿಲ ಭಾರತ ಸಾಮಾಜಿಕ ನ್ಯಾಯ ವೇದಿಕೆʼಯ ಬ್ಯಾನರ್ ಅಡಿಯಲ್ಲಿ ಸೋಮವಾರ ಚೆನ್ನೈನಲ್ಲಿ ʻಸಾಮಾಜಿಕ ನ್ಯಾಯ ಸಮ್ಮೇಳನʼ ಆಯೋಜಿಸಲಾಗಿದೆ. ಈ  ಸಮಾವೇಶದಲ್ಲಿ 20ಕ್ಕೂ ವಿಪಕ್ಷಗಳ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಾಗಿ ಎದುರಿಸಲು ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ವಿರೋಧಿ ಮೈತ್ರಿಕೂಟ ರಚಿಸಲು ಸ್ಟಾಲಿನ್‌ ಮುಂದಾಗಿದ್ದಾರೆ. ಸೋಮವಾರ ನಡೆಯುವ  ಸಮಾವೇಶದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಮತ್ತು ಹಿರಿಯ ತೃಣಮೂಲ ಕಾಂಗ್ರೆಸ್ ನಾಯಕ, ಸಂಸದ ಡೆರೆಕ್ ಒ’ಬ್ರಿಯಾನ್, ಎಡ ಪಕ್ಷಗಳ ನಾಯಕರಾದ ನಾಯಕರಾದ ಸೀತಾರಾಮ್ ಯೆಚೂರಿ, ಡಿ ರಾಜಾ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮೋದಿ ಉಪನಾಮ ಹೇಳಿಕೆಗೆ ಜೈಲು ಶಿಕ್ಷೆ ಪ್ರಶ್ನಿಸಿ ರಾಹುಲ್‌ ಗಾಂಧಿ ಮೇಲ್ಮನವಿ

ಕೇರಳದ ವೈಕಂ ಬೀಚ್‌ನಲ್ಲಿ ಶನಿವಾರ ನಡೆದಿದ್ದ ʻವೈಕಂ ಸತ್ಯಾಗ್ರಹದ ಶತಮಾನೋತ್ಸವ ಸಮಾರಂಭʼದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವೇದಿಕೆ ಹಂಚಿಕೊಂಡಿದ್ದರು. ಆ ಮೂಲಕ ಸ್ಟಾಲಿನ್‌ ಕೇರಳ ಮತ್ತು ಸಿಪಿಐ(ಎಂ) ಜೊತೆಗೆ ತಾವು ಗಟ್ಟಿಯಾದ ಸಂಬಂಧ ಹೊಂದಿರುವುದನ್ನು ಸಾರಿದ್ದರು.

ಕೇಂದ್ರ ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 14 ವಿರೋಧ ಪಕ್ಷಗಳ ನಾಯಕರು ಸಹಿ ಹಾಕಿರುವ ಅರ್ಜಿಯನ್ನು ಏಪ್ರಿಲ್ 5 ರಂದು ಸುಪ್ರೀಂ ಕೋರ್ಟ್ ಆಲಿಸಲಿದೆ. ಇದಕ್ಕೂ ಮುನ್ನುಡಿಯಾಗಿ ಸ್ಟಾಲಿನ್‌ ಕರೆದಿರುವ ಸಭೆ ಕುತೂಹಲ ಮೂಡಿಸಿದೆ.

ʻಮತಾಂಧತೆ ಮತ್ತು ಧಾರ್ಮಿಕ ಪ್ರಾಬಲ್ಯʼದ ವಿರುದ್ಧ ಜನರನ್ನು ಜಾಗೃತಗೊಳಿಸುವ ಉದ್ದೇಶದೊಂದಿಗೆ 2022ರ ಫೆಬ್ರವರಿಯಲ್ಲಿ ʻಅಖಿಲ ಭಾರತ ಸಾಮಾಜಿಕ ನ್ಯಾಯ ವೇದಿಕೆʼಗೆ ಸ್ಟಾಲಿನ್‌ ಚಾಲನೆ ನೀಡಿದ್ದರು.    

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್ | ಅಕಾಲಿಕ ಮಳೆಯಿಂದ ಸಿಡಿಲು ಬಡಿದು 20 ಮಂದಿ ಸಾವು

ಗುಜರಾತ್‌ನ 251 ತಾಲೂಕುಗಳ ಪೈಕಿ 230ಕ್ಕೂ ಹೆಚ್ಚು ತಾಲೂಕುಗಳಲ್ಲಿ ಗುಡುಗು ಸಹಿತ...

ಉತ್ತರ ಪ್ರದೇಶ: ದಲಿತ ಬಾಲಕನಿಗೆ ಹಲ್ಲೆ ನಡೆಸಿ ಮೂತ್ರ ಕುಡಿಯುವಂತೆ ಒತ್ತಾಯ

ಹದಿನಾಲ್ಕು ವರ್ಷದ ದಲಿತ ಸಮುದಾಯದ ಬಾಲಕನೊಬ್ಬನಿಗೆ ಅಮಾನುಷವಾಗಿ ಹಲ್ಲೆ ನಡೆಸಿ ಮೂತ್ರ...

ಗುಜರಾತ್ : ಬುಡಕಟ್ಟು ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಅಮಾನುಷ ಹಲ್ಲೆ

ಬುಡಕಟ್ಟು ಸಮುದಾಯದ ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನ ಕುಟುಂಬದವರು ಅಪಹರಿಸಿ, ಅಮಾನುಷವಾಗಿ...

ರಾಜಸ್ಥಾನ ಚುನಾವಣೆಗೆ ಕರ್ನಾಟಕ ರೈಲು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಭಾವ?

2019ರ ಲೋಕಸಭೆ ಚುನಾವಣೆಯಲ್ಲಿ ರೈಲ್ವೆ ಇಲಾಖೆಯನ್ನು ಬೇಕಾಬಿಟ್ಟಿ ಬಳಸಿಕೊಂಡಿದ್ದ ಬಿಜೆಪಿ ಈ...