ಉತ್ತರ ಪ್ರದೇಶದಲ್ಲಿ ಮತ್ತೆ ಶೂಟೌಟ್; ವಿದ್ಯಾರ್ಥಿನಿ ಹತ್ಯೆ

Date:

  • 2 ದಿನಗಳ ಹಿಂದಷ್ಟೆ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್, ಆತನ ಸಹೋದರನನ್ನು ಹತ್ಯೆ ಮಾಡಿದ್ದ ದುಷ್ಕರ್ಮಿಗಳು
  • ಶೂಟೌಟ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು  

ಉತ್ತರ ಪ್ರದೇಶದಲ್ಲಿ ಒಂದು ವಾರದ ಅವಧಿಯಲ್ಲಿಯೇ ಮತ್ತೊಂದು ಶೂಟೌಟ್‌ ನಡೆದಿದೆ. ಜಲೌನ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾಲೇಜು ಪರೀಕ್ಷೆ ಮುಗಿಸಿ ಹಿಂತಿರುಗುತ್ತಿದ್ದ ಯುವತಿಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

- Advertisement -

ಸ್ಥಳೀಯ ಪೊಲೀಸ್ ಠಾಣೆಯಿಂದ ಕೇವಲ 200 ಮೀಟರ್ ದೂರದಲ್ಲಿರುವ ಜನನಿಬಿಡ ಸ್ಥಳದಲ್ಲೇ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಹತ್ಯೆಗೆ ಬಳಸಿದ ಗನ್‌ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಂತ್ರಸ್ತೆಯನ್ನು 21 ವರ್ಷದ ರೋಶ್ನಿ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಈಕೆ ಬಿಎ ವ್ಯಾಸಂಗ ಮಾಡುತ್ತಿದ್ದಳು. ವಿದ್ಯಾರ್ಥಿನಿ ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ಮುಗಿಸಿ ರಾಮ್ ಲಖನ್ ಪಟೇಲ್ ಮಹಾವಿದ್ಯಾಲಯದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಜಾಜ್ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಆಕೆಯ ತಲೆಗೆ ಗುಂಡು ಹಾರಿಸಿದ್ದು, ರೋಶ್ನಿ ಸ್ಥ ಳದಲ್ಲೇ ಸಾವನ್ನಪ್ಪಿದ್ದಾಳೆ.

ಗುಂಡು ಹಾರಿಸಿದ ತಕ್ಷಣ ಸ್ಥಳೀಯರು ದುಷ್ಕರ್ಮಿಗಳನ್ನು ಹಿಡಿಯಲು ಯತ್ನಿಸಿದ್ದು, ಆದರೆ, ಅವರು ಗನ್‌ ಎಸೆದು ಪರಾರಿಯಾಗಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ರಾಜ್ ಅಹಿರ್ವಾರ್ ಎಂಬುವನ ವಿರುದ್ಧ ದೂರು ನೀಡಿದ್ದು , ಇದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸ್ಥಳೀಯರು ಮತ್ತು ಪೊಲೀಸರು ನೋಡುತ್ತಿದ್ದಂತೆ ವಿದ್ಯಾರ್ಥಿನಿ ರಕ್ತದ ಮಡುವಿನಲ್ಲಿ ನೆಲದ ಮೇಲೆ ನರಳಾಡಿ ಸಾವನ್ನಪ್ಪಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹಲವಾರು ನೆಟ್ಟಿಗರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚಿಗಷ್ಟೆ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನ ಪತ್ರಕರ್ತರ ವೇಷದಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....