ಪುರಿ ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು: ಒಬ್ಬ ಸಾವು, 200ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

Date:

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆಯ ಮೊದಲ ದಿನವಾದ ಗುರುವಾರ ಭಾರಿ ಜನದಟ್ಟಣೆಯಿಂದಾಗಿ ನೂಕುನುಗ್ಗಲು ಉಂಟಾಗಿದ್ದು, ಉಸಿರುಗಟ್ಟುವಿಕೆಯಿಂದ ಓರ್ವ ಭಕ್ತ ಮೃತಪಟ್ಟಿದ್ದಾರೆ. ಕನಿಷ್ಠ 200ಕ್ಕೂ ಹೆಚ್ಚು ಭಕ್ತರು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ.

- Advertisement -

ಹನ್ನೆರಡನೇ ಶತಮಾನದ ಐತಿಹಾಸಿಕ ಶ್ರೀಮಂದಿರದಿಂದ ಭಗವಾನ್ ಜಗನ್ನಾಥ, ಅಣ್ಣ ಬಲಭದ್ರ ಮತ್ತು ತಂಗಿ ಸುಭದ್ರಾ ದೇವಿಯ ರಥಗಳು ಗುಂಡಿಚಾ ದೇವಾಲಯದತ್ತ ವಾರ್ಷಿಕ ಪ್ರಯಾಣ ಬೆಳೆಸುವ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಪುರಿಯ ‘ಬಡಾ ದಂಡಾ’ ರಥಬೀದಿಯಲ್ಲಿ ಜಮಾಯಿಸಿದ್ದರು. ಈ ವೇಳೆ ಉಂಟಾದ ಭಾರಿ ಜನಸಂದಣಿಯೇ ಈ ಅವಾಂತರಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಥಯಾತ್ರೆಯ ಪ್ರಮುಖ ವಿಧಿಯಾದ ‘ಪಹಂಡಿ’ ಆಚರಣೆಯ ವೇಳೆ, ಹೊರ ಭದ್ರತಾ ವಲಯದಿಂದ ಸುಮಾರು 500 ಮೀಟರ್ ದೂರದಲ್ಲಿ ಭಕ್ತರ ನಿಯಂತ್ರಣ ತಪ್ಪಿ ಗೊಂದಲದ ವಾತಾವರಣ ನಿರ್ಮಾಣವಾಯಿತು. ಜನದಟ್ಟಣೆಯ ನಡುವೆ ಸಿಲುಕಿದ 120ಕ್ಕೂ ಹೆಚ್ಚು ಭಕ್ತರು ಏಕಾಏಕಿ ಉಸಿರಾಟದ ತೊಂದರೆ ಅನುಭವಿಸಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ವಿಶೇಷ ರಕ್ಷಣಾ ಪಡೆ ಹಾಗೂ ಸ್ವಯಂಸೇವಕರು ಅಸ್ವಸ್ಥರನ್ನು ರಕ್ಷಿಸಿ ತಾತ್ಕಾಲಿಕ ವೈದ್ಯಕೀಯ ಶಿಬಿರಗಳಿಗೆ ರವಾನಿಸಿದರು.

ಇವರಲ್ಲಿ ಉಸಿರುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದ ಒಬ್ಬ ಭಕ್ತನನ್ನು ಪುರಿ ಜಿಲ್ಲಾ ಮುಖ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಆದರೆ, ಈ ಸಾವಿನ ಕುರಿತು ಜಿಲ್ಲಾಡಳಿತದಿಂದ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರಬರಬೇಕಿದೆ. ಪ್ರಸ್ತುತ 200ಕ್ಕೂ ಹೆಚ್ಚು ಭಕ್ತರು ಪುರಿ ವೈದ್ಯಕೀಯ ಕಾಲೇಜು ಸೇರಿದಂತೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದುರ್ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಒಡಿಶಾ ಸರ್ಕಾರ ಮತ್ತು ಪೊಲೀಸ್ ಇಲಾಖೆ, ರಥಬೀದಿಯಲ್ಲಿ ಮತ್ತಷ್ಟು ಅನಾಹುತಗಳು ಸಂಭವಿಸದಂತೆ ತಡೆಯಲು ಜನಸಂದಣಿ ನಿಯಂತ್ರಣ ವ್ಯವಸ್ಥೆಯನ್ನು ತೀವ್ರಗೊಳಿಸಿದೆ. ರಥ ಸಾಗುವ ಮಾರ್ಗದಲ್ಲಿ ಉಂಟಾಗಿದ್ದ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಭಕ್ತರ ಸುಗಮ ಸಂಚಾರ ಹಾಗೂ ತುರ್ತು ವಾಹನಗಳ ಓಡಾಟಕ್ಕಾಗಿ ಪ್ರತ್ಯೇಕ ಹಾದಿಗಳನ್ನು ನಿರ್ಮಿಸಲಾಗಿದೆ.

ಕಳೆದ ವರ್ಷ ಅಂದರೆ 2025ರ ರಥಯಾತ್ರೆಯ ವೇಳೆಯೂ ಶ್ರೀ ಗುಂಡಿಚಾ ದೇವಾಲಯದ ಬಳಿ ಉಂಟಾದ ಭೀಕರ ನೂಕುನುಗ್ಗಲಿಗೆ ಮೂವರು ಭಕ್ತರು ಬಲಿಯಾಗಿದ್ದರು ಹಾಗೂ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಪವಿತ್ರ ವಿಧಿವಿಧಾನಗಳ ಸಾಮಗ್ರಿಗಳನ್ನು ಹೊತ್ತೊಯ್ಯುತ್ತಿದ್ದ ಎರಡು ಟ್ರಕ್‌ಗಳು ಜನದಟ್ಟಣೆಯ ಪ್ರದೇಶಕ್ಕೆ ಏಕಾಏಕಿ ಪ್ರವೇಶಿಸಿದ್ದರಿಂದ ಕಳೆದ ಬಾರಿ ದುರಂತ ಸಂಭವಿಸಿತ್ತು. ಆ ಕಹಿ ನೆನಪು ಮಾಸುವ ಮುನ್ನವೇ ಈ ಬಾರಿಯೂ ಭದ್ರತಾ ಲೋಪ ಹಾಗೂ ಸಮರ್ಪಕ ಜನಸಂದಣಿ ನಿರ್ವಹಣೆಯ ಕೊರತೆಯಿಂದಾಗಿ ಮತ್ತೊಂದು ದುರಂತ ಸಂಭವಿಸಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಅಂಕಿತಾ ಹತ್ಯೆ ಶಂಕಿತರಿಗೆ ಸಾಂವಿಧಾನಿಕ ಹುದ್ದೆ ಸರಿಯೇ?

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿದ್ದ ವಿಐಪಿ ದುಶ್ಯಂತ್‌ ಅವರ ಮೇಲಿನ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...