2013ರ ಲೈಂಗಿಕ ದೌರ್ಜನ್ಯ ಪ್ರಕರಣ: ಶಿಕ್ಷೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತರುಣ್ ತೇಜ್‌ಪಾಲ್

Date:

2013ರ ಕಿರಿಯ ಸಹೋದ್ಯೋಗಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಮಗೆ ಬಾಂಬೆ ಹೈಕೋರ್ಟ್ ವಿಧಿಸಿರುವ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಪ್ರಶ್ನಿಸಿ ‘ತೆಹಲ್ಕಾ’ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

- Advertisement -

ಆಗಸ್ಟ್ 6ರಂದು ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ತೇಜ್‌ಪಾಲ್ ಅವರನ್ನು ತಪ್ಪಿತಸ್ಥ ಎಂದು ನಿರ್ಣಯಿಸಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ವಿಚಾರಣಾ ನ್ಯಾಯಾಲಯವು 2021ರಲ್ಲಿ ತೇಜ್‌ಪಾಲ್ ಅವರನ್ನು ದೋಷಮುಕ್ತಗೊಳಿಸಿ ನೀಡಿದ್ದ ಆದೇಶವನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ತೇಜ್‌ಪಾಲ್ ಅವರು ಅಡ್ವೊಕೇಟ್ ಆದಿತ್ಯ ಸಮದ್ದಾರ್ ಅವರ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ‘ತೆಹಲ್ಕಾ’ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಜೈಲು ಶಿಕ್ಷೆ

ಇನ್ನೊಂದೆಡೆ, ತರುಣ್ ತೇಜ್‌ಪಾಲ್‌ಗೆ ವಿಧಿಸಲಾಗಿರುವ 10 ವರ್ಷಗಳ ಜೈಲು ಶಿಕ್ಷೆ ಅಪರಾಧದ ತೀವ್ರತೆಗೆ ಹೋಲಿಸಿದರೆ ಅತ್ಯಂತ ಕಡಿಮೆಯಾಗಿದೆ ಎಂದು ಗೋವಾ ಸರ್ಕಾರ ವಾದಿಸಿದೆ. ಹೀಗಾಗಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಕೋರಿ ಗೋವಾ ಸರ್ಕಾರವೂ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

2013ರ ನವೆಂಬರ್‌ನಲ್ಲಿ ಗೋವಾದಲ್ಲಿ ನಡೆದ ಕಾರ್ಯಕ್ರಮವೊಂದರ ವೇಳೆ ಹೋಟೆಲ್ ಒಂದರ ಲಿಫ್ಟ್‌ನಲ್ಲಿ ತಮ್ಮ ಮೇಲೆ ತೇಜ್‌ಪಾಲ್ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರ ಕಿರಿಯ ಸಹೋದ್ಯೋಗಿ ಆರೋಪಿಸಿದ್ದರು. ಈ ದೂರಿನ ಆಧಾರದ ಮೇಲೆ ಗೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 2021ರಲ್ಲಿ ಗೋವಾ ಸೆಷನ್ಸ್ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿತ್ತು.

ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಪರಿಶೀಲನೆ ನಡೆಸಿದ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ರದ್ದುಗೊಳಿಸಿ ತೇಜ್‌ಪಾಲ್ ತಪ್ಪಿತಸ್ಥ ಎಂದು ತೀರ್ಪು ನೀಡಿತು. ಅಲ್ಲದೆ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡುವ ಸಲುವಾಗಿ ಗೋವಾ ಪೊಲೀಸರ ಮುಂದೆ ಶರಣಾಗಲು ತೇಜ್‌ಪಾಲ್‌ಗೆ ನಾಲ್ಕು ವಾರಗಳ ಕಾಲಾವಕಾಶವನ್ನೂ ನೀಡಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ‘ಫಾರ್ಮ್-7’ ದುರ್ಬಳಕೆ – BJP ಅಕ್ರಮ ಎಕ್ಸ್‌ಪೋಸ್ಡ್‌; ಸಮಗ್ರ ವರದಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಈ ಕಡೆಯ...

SIR | ಅ.8 ರಂದು ಬೆಂಗಳೂರಿನಲ್ಲಿ ‘ಜನತಾ ನ್ಯಾಯಾಲಯ’: ಮತ ಕಾವಲು ಸಮಿತಿ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

ಸಾಗರ | ಚಿಕ್ಕಮತ್ತೂರು ಗ್ರಾಮವನ್ನು ಶರಾವತಿ ವನ್ಯಜೀವಿ ಅಭಯಾರಣ್ಯದಿಂದ ಕೈಬಿಡಲು ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಚಿಕ್ಕಮತ್ತೂರು...