2018ರ ಪ್ರಕರಣ: ಸಿಜೆಪಿ ಪ್ರತಿಭಟನೆ ಹೊತ್ತಿನಲೇ ಧೃವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್

Date:

ಡಿಜಿಟಲ್ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ ಸಂಬಂಧಿಸಿದಂತೆ, ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ ಸಮನ್ಸ್ ಜಾರಿಗೊಳಿಸಿದೆ. ಹಲವು ವರ್ಷಗಳಿಂದ ವಿದೇಶದಲ್ಲಿದ್ದ ಧೃವ್ ರಾಠಿ ಅವರು ಸಿಜೆಪಿ ಪ್ರತಿಭಟನೆ ಹಿನ್ನೆಲೆ ದೆಹಲಿ ಬಂದಿದ್ದಾರೆ. ಸಿಜೆಪಿ ಪ್ರತಿಭಟನೆಯಲ್ಲಿ ಅವರು ಸಕ್ರಿಯವಾಗಿ ತೊಡಗಿಕೊಂಡಿರುವ ಹೊತ್ತಿನಲ್ಲೇ, ಅವರಿಗೆ ನ್ಯಾಯಾಲಯವು ಸಮನ್ಸ್‌ ನೀಡಿದೆ.

- Advertisement -

2018ರಲ್ಲಿ ಧೃವ್ ರಾಠಿ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಕಟಿಸಿದ್ದ ‘BJP IT Cell Part II’ ಶೀರ್ಷಿಕೆಯ ವಿಡಿಯೋ ಪ್ರಕಟಿಸಿದ್ದರು. “ಬಿಜೆಪಿ ಐಟಿ ಸೆಲ್ ವಿರುದ್ಧದ ಆರೋಪಗಳನ್ನು ಹಿಂಪಡೆಯಲು ಮಹಾವೀರ್ ಪ್ರಸಾದ್ ಎಂಬುವವರಿಗೆ ಮಧ್ಯವರ್ತಿಯೊಬ್ಬರ ಮೂಲಕ 50 ಲಕ್ಷ ರೂ. ಲಂಚದ ಆಮಿಷ ಒಡ್ಡಲಾಗಿತ್ತು” ಎಂದು ವಿಡಿಯೋದಲ್ಲಿ ಧೃವ್‌ ರಾಠಿ ಆರೋಪಿಸಿದ್ದರು. ಇದರ ವಿರುದ್ಧ ‘ಐ ಸಪೋರ್ಟ್ ನರೇಂದ್ರ ಮೋದಿ’ ಸಾಮಾಜಿಕ ಜಾಲತಾಣ ಪುಟದ ಸಂಸ್ಥಾಪಕ ವಿಕಾಸ್ ಸಂಕೃತ್ಯಾಯನ್ (ವಿಕಾಸ್ ಪಾಂಡೆ) ಎಂಬಾತ ದೆಹಲಿ ಕೋರ್ಟ್‌ನಲ್ಲಿ ಮಾನನಷ್ಟ ಮೊಕದಮೆ ದಾಖಲಿಸಿದ್ದರು. ಈ ವಿಡಿಯೋದಲ್ಲಿ ತಮ್ಮ ವಿರುದ್ಧ ಸುಳ್ಳು, ಆಧಾರರಹಿತ ಹಾಗೂ ನಿಂದನೀಯ ಆರೋಪಗಳನ್ನು ಮಾಡಲಾಗಿದೆ ಎಂದು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಈ ಪ್ರಕರಣದಲ್ಲಿ ಸಾಕೇತ್ ನ್ಯಾಯಾಲಯವು ಮೊದಲ ಬಾರಿಗೆ 2019ರ ಜುಲೈ 23 ರಂದೇ ಧೃವ್ ರಾಠಿ ಅವರಿಗೆ ಸಮನ್ಸ್ ಹೊರಡಿಸಿತ್ತು. ಆದರೆ, ಅವರು ವಿದೇಶದಲ್ಲಿ ನೆಲೆಸಿದ್ದರಿಂದ ಸಾಂಪ್ರದಾಯಿಕ ಮಾರ್ಗಗಳಲ್ಲಿ ನೋಟಿಸ್ ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ಇದರಿಂದಾಗಿ ನ್ಯಾಯಾಂಗ ಪ್ರಕ್ರಿಯೆ ವಿಳಂಬವಾಗುತ್ತಾ ಬಂದಿತ್ತು. ಆದರೆ, ಇತ್ತೀಚೆಗೆ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಭಾಗಿಯಾಗಲು ಧ್ರುವ್ ರಾಠಿ ಭಾರತಕ್ಕೆ ಬಂದಿದ್ದಾರೆ.

ಈ ಹಿನ್ನೆಲೆಯಲ್ಲಿ ದೂರುದಾರರ ಪರ ವಕೀಲರು ನವೆಂಬರ್ 20ಕ್ಕೆ ನಿಗದಿಯಾಗಿದ್ದ ವಿಚಾರಣೆಯನ್ನು ಮುಂಚಿತವಾಗಿಯೇ ಕೈಗೆತ್ತಿಕೊಳ್ಳಬೇಕೆಂದು ಕೋರ್ಟ್‌ಗೆ ಮನವಿ ಮಾಡಿದ್ದರು.

 ಪ್ರಕರಣದ ವಿಚಾರಣೆ ನಡೆಸಿರುವ ಸಾಕೇತ್ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ರಾಹುಲ್ ಜೈನ್ ಅವರಿಗೆ ದೂರುದಾರರು ಖುದ್ದಾಗಿ ಸಮನ್ಸ್ ನೀಡಲು, ಅಂದರೆ ‘ದಸ್ತಿ ಸಮನ್ಸ್’ ಜಾರಿ ಮಾಡಲು ಅವಕಾಶ ಕಲ್ಪಿಸಿದ್ದಾರೆ.

ನ್ಯಾಯಾಲಯದ ಹೊಸ ಆದೇಶದಂತೆ, ದೂರುದಾರರ ಸಮ್ಮುಖದಲ್ಲೇ ಪ್ರಕ್ರಿಯೆ ಸಿಬ್ಬಂದಿ ಮೂಲಕ ಗುರುಗ್ರಾಮದಲ್ಲಿರುವ ಧೃವ್ ರಾಠಿ ಅವರ ನಿವಾಸಕ್ಕೆ ಖುದ್ದಾಗಿ ‘ದಸ್ತಿ ಸಮನ್ಸ್’ ಜಾರಿಗೊಳಿಸಲು ವ್ಯವಸ್ಥೆ ಮಾಡಲಾಗಿದೆ. ಸಾಕೇತ್ ನ್ಯಾಯಾಲಯವು ಈ ಪ್ರಕರಣದ ಮುಂದಿನ ನಿರ್ಣಾಯಕ ವಿಚಾರಣೆಯನ್ನು ಅಕ್ಟೋಬರ್ 17, 2026 ಕ್ಕೆ ನಿಗದಿಪಡಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ಲಾಂಗೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮೀಸಲಾತಿ ಇಲ್ಲ: ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರಿಗೆ ಹಿಂದುಳಿದ ವರ್ಗದ ಮುಸ್ಲಿಂ ಸ್ಥಾನಮಾನ ನೀಡಿ ತಮಿಳುನಾಡು...

ಅಂಕಿತಾ ಭಂಡಾರಿ ಪೋಷಕರ ಬಂಧನ ‘ಹೇಡಿತನದ ಪರಾಕಾಷ್ಠೆ’; ಮೋದಿ ಸರ್ಕಾರದ ವಿರುದ್ಧ ಖರ್ಗೆ ಆಕ್ರೋಶ

ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಎಂದು ಶಂಕಿಸಲಾಗಿರುವ ಬಿಜೆಪಿ ನಾಯಕ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...