ಪ್ರಧಾನಿ ಮೋದಿ ‘ಕಳ್ಳ’ ಎಂಬ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಮಧ್ಯಂತರ ತಡೆ

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ 2018-19ರಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ಮಧ್ಯಂತರ ತಡೆ ನೀಡಿದೆ.

- Advertisement -

ಈ ಹಿಂದೆ ಬಾಂಬೆ ಹೈಕೋರ್ಟ್, ಗಿರ್ಗಾಂವ್ ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿದ್ದ ಸಮನ್ಸ್ ಅನ್ನು ರದ್ದುಗೊಳಿಸಲು నిರಾಕರಿಸಿ ಅರ್ಜಿಯನ್ನು ವಜಾಗೊಳಿಸಿತ್ತು. ಬಾಂಬೆ ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪೀಠವು, ಮಹಾರಾಷ್ಟ್ರ ಸರ್ಕಾರ ಮತ್ತು ದೂರುದಾರರಾದ ಬಿಜೆಪಿ ಕಾರ್ಯಕರ್ತ ಮಹೇಶ್ ಶ್ರೀ ಶ್ರೀಮಾಲ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ. ಅಲ್ಲಿಯವರೆಗೆ ಕೆಳ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸಂಪೂರ್ಣ ತಡೆ ನೀಡಲಾಗಿದೆ.

ಇದನ್ನೂ ಓದಿ: ಪ್ರಶ್ನಿಸುವುದು ಮಾನನಷ್ಟವಲ್ಲ: ಎಎಪಿ ನಾಯಕ ಸೌರಭ್ ವಿರುದ್ಧ ಬಿಜೆಪಿ ಸಚಿವ ಪರ್ವೇಶ್ ಸಲ್ಲಿಸಿದ್ದ ಅರ್ಜಿ ವಜಾ

2018-19ರ ಅವಧಿಯಲ್ಲಿ ರಾಹುಲ್ ಗಾಂಧಿ ಅವರು ನೀಡಿದ್ದ ಹೇಳಿಕೆಯು ಪ್ರಧಾನಿ ಮೋದಿ, ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಬಿಜೆಪಿ ಸದಸ್ಯ ಮಹೇಶ್ ಶ್ರೀ ಶ್ರೀಮಾಲ್ ಅವರು ಮುಂಬೈನ ಗಿರ್ಗಾಂವ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ನ್ಯಾಯಾಲಯವು ರಾಹುಲ್ ಗಾಂಧಿಯವರಿಗೆ ಸಮನ್ಸ್ ನೀಡಿತ್ತು.

ರಾಹುಲ್ ಗಾಂಧಿ ನೀಡಿದ ಹೇಳಿಕೆಯೇನು?

ರಫೇಲ್ ಒಪ್ಪಂದದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಮುಖ್ಯ ಸೇನಾಪತಿಯಾದ “ಕಮಾಂಡರ್-ಇನ್-ಚೀಫ್” ಎಂದು ಕರೆಯುವ ಬದಲು “ಕಮಾಂಡರ್-ಇನ್-ಥೀಫ್” (ಕಳ್ಳರ ನಾಯಕ) ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು. ಚುನಾವಣಾ ರ‍್ಯಾಲಿಗಳು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿಯವರನ್ನು ಉದ್ದೇಶಿಸಿ “ಚೋರೋಂ ಕೆ ಸರ್ದಾರ್” (ಕಳ್ಳರ ಸರ್ದಾರ) ಹಾಗೂ “ಚೌಕಿದಾರ್ ಚೋರ್ ಹೈ” (ಕಾವಲುಗಾರನೇ ಕಳ್ಳ) ಎಂಬ ಪದಬಳಕೆ ಮಾಡಿದ್ದರು.

ದೂರುದಾರರಾದ ಬಿಜೆಪಿ ಕಾರ್ಯಕರ್ತ ಮಹೇಶ್ ಶ್ರೀ ಶ್ರೀಮಾಲ್ ಅವರು, “ಪ್ರಧಾನಮಂತ್ರಿಯವರನ್ನು, ಬಿಜೆಪಿಯನ್ನು ಕಳ್ಳರು ಎಂದು ಕರೆದಿರುವುದು ಪಕ್ಷದ ಮತ್ತು ಅದರ ಕಾರ್ಯಕರ್ತರ ವರ್ಚಸ್ಸಿಗೆ ಧಕ್ಕೆ ತಂದಿದೆ. ಇದರಿಂದ ಪಕ್ಷದ ಸದಸ್ಯರೊಬ್ಬರಾಗಿ ನನಗೆ ಮಾನನಷ್ಟವಾಗಿದೆ” ಎಂದು ನ್ಯಾಯಾಲಯಕ್ಕೆ ದೂರು ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೆಹಲ್ಗಾಮ್‌ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಎಂದು ಸುಳ್ಳು ಆರೋಪ; ವ್ಯಕ್ತಿಗೆ ₹1.31 ಕೋಟಿ ವಂಚನೆ

ಪೆಹಲ್ಗಾಮ್ ಹತ್ಯಾಕಾಂಡದ ಆರೋಪಿಗಳಿಗೆ ಹಣ ವರ್ಗಾವಣೆ ಮಾಡಿರುವುದಾಗಿ ಸುಳ್ಳು ಆರೋಪ ಹೊರಿಸಿ,...

ಬಿಜೆಪಿ ಪ್ರಭಾವಿ ನಾಯಕಿ, ಮಾಜಿ ಸಂಸದೆ ಈಗ ಕರ್ನಾಟಕದ ನೂತನ ರಾಜ್ಯಪಾಲೆ

ಕರ್ನಾಟಕದ ರಾಜಭವನಕ್ಕೆ ಮತ್ತೊಬ್ಬ ಬಿಜೆಪಿ ಹಿನ್ನೆಲೆಯ ರಾಜಕಾರಣಿ ಪ್ರವೇಶಿಸುತ್ತಿದ್ದಾರೆ. ಅಕ್ಟೋಬರ್ 12ರಂದು...

ದಲಿತ ಯುವಕರ ಮೇಲೆ ದಲಿತ ಸಮುದಾಯದವರಿಂದಲೇ ಅಮಾನವೀಯ ಹಲ್ಲೆ, ಬಾಯಿಗೆ ಮೂತ್ರ ವಿಸರ್ಜನೆ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಕೂಲಿ ಕಾರ್ಮಿಕರನ್ನು ಕೊಠಡಿಯೊಂದರಲ್ಲಿ ಕೂಡಿಹಾಕಿ, ಮಾರಣಾಂತಿಕವಾಗಿ ಥಳಿಸಿದರಲ್ಲದೆ,...

ಪ್ರತಿಭಟನೆಗಳ ಭೀತಿ: ಅಕ್ಟೋಬರ್ 20ರವರೆಗೆ ದೆಹಲಿಯಲ್ಲಿ ‘ಸಿಎಪಿಎಫ್’ಭದ್ರತೆ ವಿಸ್ತರಿಸಲು ಪೊಲೀಸರ ಮನವಿ

ಚುನಾವಣಾ ಆಯೋಗದ (ECI) ಕಾರ್ಯವೈಖರಿ ಮತ್ತು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ...