ಹೈಕೋರ್ಟ್‌ ಆದೇಶ ಪ್ರಶ್ನಿಸಿ ಉಮರ್ ಖಾಲಿದ್‌ ಸುಪ್ರೀಂ ಕೋರ್ಟ್‌ ಮೊರೆ

Date:

Advertisements

2020ರಲ್ಲಿ ರಾಜಧಾನಿ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಪಿತೂರಿ ನಡೆಸಿದ ಆರೋಪ ಹೊತ್ತ ಪ್ರಕರಣದಲ್ಲಿ ಜಾಮೀನು ಅರ್ಜಿ ತಿರಸ್ಕರಿಸಿರುವ ದೆಹಲಿ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಹೋರಾಟಗಾರ ಉಮರ್ ಖಾಲಿದ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.‌

ಸೆಪ್ಟೆಂಬರ್‌ 2ರಂದು ಖಾಲಿದ್, ಶರ್ಜೀಲ್‌ ಇಮಾಮ್‌ ಸೇರಿ ಒಂಬತ್ತು ಜನರಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿತ್ತು.ಕಳೆದ ವಾರ ಇಮಾಮ್ ಮತ್ತು ಗಲ್ಫಿಶಾ ಫಾತಿಮಾ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಇದನ್ನು ಓದಿದ್ದೀರಾ? ‘ದಿ ಟೆಲಿಗ್ರಾಫ್‌’ ಸಂಪಾದಕ, ಹಿರಿಯ ಪತ್ರಕರ್ತ ಸಂಕರ್ಷಣ್ ಠಾಕೂರ್ ನಿಧನ

‘ಸಂವಿಧಾನ ಈ ದೇಶದ ನಾಗರಿಕರಿಗೆ ಪ್ರತಿಭಟಿಸುವ ಅವಕಾಶ ಕಲ್ಪಿಸಿದೆ. ಆದರೆ ಅದು ಕಾನೂನಿನ ಮಿತಿಯಲ್ಲಿರಬೇಕು. ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸುವ ಪಿತೂರಿಯನ್ನು ಸಹಿಸಲಾಗದು’ ಎಂದು ಜಾಮೀನು ನಿರಾಕರಿಸುವ ವೇಳೆ ಹೈಕೋರ್ಟ್‌ ಹೇಳಿತ್ತು.

ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿತ್ತು. ಖಾಲಿದ್ ಸೇರಿ ಇತರೆ ಆರೋಪಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ)ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಾಗಿತ್ತು. 2020ರಿಂದಲೂ ಜೈಲಿನಲ್ಲಿರುವ ಆರೋಪಿಗಳು ವಿಚಾರಣಾ ನ್ಯಾಯಾಲಯದ ನಂತರ ಹೈಕೋರ್ಟ್‌ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

Download Eedina App Android / iOS

X