2027ರ ಗೋವಾ ಚುನಾವಣೆ: ಜಿಎಫ್‌ಪಿ ಜೊತೆ ಕಾಂಗ್ರೆಸ್ ಸ್ನೇಹ; ಮೈತ್ರಿ ಸರ್ಕಾರದ ವಿಶ್ವಾಸ

Date:

2027ರ ಗೋವಾ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಣ ಸಿದ್ಧವಾಗುತ್ತಿದ್ದು, ಪ್ರಾದೇಶಿಕ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಜೊತೆ ಮೈತ್ರಿ ಮಾಡಿಕೊಳ್ಳುವ ಸ್ಪಷ್ಟ ಸೂಚನೆಯನ್ನು ಕಾಂಗ್ರೆಸ್ ನೀಡಿದೆ. ಈ ಮೈತ್ರಿಕೂಟವು ಮುಂದಿನ ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಅಧಿಕಾರ ಹಿಡಿಯಲಿದೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

ಫಟೋರ್ಡಾದಲ್ಲಿ ನಡೆದ ‘ಕಾರ್ನಿವಲ್ 2026’ ಸಂಭ್ರಮಾಚರಣೆಯ ವೇಳೆ ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಮಿತ್ ಪಾಟ್ಕರ್ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, “ಪ್ರಸ್ತುತ ಕಾರ್ನಿವಲ್ ಸಂದರ್ಭದಲ್ಲಿ ನಾಲ್ಕು ದಿನ ಮಾತ್ರ ಸಂಭ್ರಮಿಸಲು ನಿಮಗೆ ಅವಕಾಶವಿದೆ. ಆದರೆ, ಗೋವಾ ಫಾರ್ವರ್ಡ್ ಪಾರ್ಟಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ರಾಜ್ಯದ ಜನತೆ ಪ್ರತಿದಿನವೂ ಹಬ್ಬದಂತೆ ಸಂಭ್ರಮಿಸಬಹುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದೇ ವೇಳೆ ಮಾತನಾಡಿದ ಜಿಎಫ್‌ಪಿ ನಾಯಕ ವಿಜಯ್ ಸರ್ದೇಸಾಯಿ, “ಕಾಂಗ್ರೆಸ್ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದೆ ನಿಜ, ಆದರೆ ಅದರ ವೇಗ ಈಗ ಕಡಿಮೆಯಾಗಿದೆ. ಮುಂದಿನ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಚುರುಕಾಗಬೇಕಿದೆ. ಇದು ನಮಗೆ ಮಾಡು ಇಲ್ಲವೇ ಮಡಿ ವರ್ಷವಾಗಿದೆ” ಎಂದು ಎಚ್ಚರಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಈ ವೇಳೆ ಎಐಸಿಸಿ ಗೋವಾ ಉಸ್ತುವಾರಿ ಮಾಣಿಕ್ ರಾವ್ ಠಾಕ್ರೆ ಮತ್ತು ಜಿಎಫ್‌ಪಿ ಮುಖ್ಯಸ್ಥ ವಿಜಯ್ ಸರ್ದೇಸಾಯಿ ಉಪಸ್ಥಿತರಿದ್ದು, ಮೈತ್ರಿಯ ಮುನ್ಸೂಚನೆಗೆ ಬಲ ತುಂಬಿದರು.

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಪ್ರಸ್ತುತ ಕಾಂಗ್ರೆಸ್ ಕೇವಲ 3 ಶಾಸಕರನ್ನು ಹೊಂದಿದ್ದರೆ, ಗೋವಾ ಫಾರ್ವರ್ಡ್ ಪಾರ್ಟಿ ಕೇವಲ ಒಬ್ಬ ಶಾಸಕರನ್ನು (ಸರ್ದೇಸಾಯಿ) ಹೊಂದಿದೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಸಣ್ಣ ಪಕ್ಷಗಳನ್ನು ಒಗ್ಗೂಡಿಸಿ ಬಲವಾದ ಮೈತ್ರಿಕೂಟ ರಚಿಸುವುದು ಕಾಂಗ್ರೆಸ್‌ನ ಈ ತಂತ್ರದ ಹಿಂದಿನ ಮುಖ್ಯ ಉದ್ದೇಶವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...