2029ರ ಲೋಕಸಭಾ ಚುನಾವಣೆ: ಸೋಲಲು ಸಿದ್ಧವಿರುವಂತೆ ರಾಹುಲ್‌ಗೆ ಅಮಿತ್ ಶಾ ಸವಾಲು

Date:

ವಿಪಕ್ಷಗಳ ಇಂಡಿಯಾ ಒಕ್ಕೂಟ ನಡೆಸಿದ ಬೃಹತ್ ರ‍್ಯಾಲಿಯ ಮಾರನೇ ದಿನವೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಮರ್ಥನೆಗೆ ಇಳಿದುಕೊಂಡಿದ್ದಾರೆ. “ಈ ರ‍್ಯಾಲಿಯು ಅಕ್ರಮ ನುಸುಳುಕೋರರನ್ನು ರಕ್ಷಿಸುವ ಯೋಜನೆ” ಎಂದು ಅಮಿತ್ ಶಾ ಹೇಳಿಕೊಂಡಿದ್ದಾರೆ. ಹಾಗೆಯೇ 2029ರ ಲೋಕಸಭಾ ಚುನಾವಣೆಯಲ್ಲಿ ಸೋಲಲು ಸಿದ್ಧವಿರುವಂತೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಅಮಿತ್ ಶಾ ಸವಾಲು ಹಾಕಿದ್ದಾರೆ.

- Advertisement -

ನಿನ್ನೆಯಷ್ಟೇ ಇಂಡಿಯಾ ಒಕ್ಕೂಟದ 16 ರಾಜಕೀಯ ಪಕ್ಷಗಳು ಸೇರಿ ಚಹಾ ಕೂಟವನ್ನು ನಡೆಸಿದೆ. ಅದಕ್ಕೂ ಹಿಂದಿನ ದಿನ ಅಂದರೆ ಸೋಮವಾರ ಮೆರವಣಿಗೆ ನಡೆಸಿದೆ. ಸುಪ್ರೀಂ ಕೋರ್ಟ್‌ಗೆ ಅರ್ಜಿಯನ್ನೂ ಸಲ್ಲಿಸಿದೆ. ಮಂಗಳವಾರ ಸಭೆಯಲ್ಲಿ ಭಾಗವಹಿಸಿದ್ದ ನಾಯಕರು, ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ ಹುಟ್ಟಿಕೊಂಡಿರುವ ಸಾರ್ವಜನಿಕ ಆಕ್ರೋಶವನ್ನು ಮುಂದುವರಿಸಲು ನಿರ್ಧರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಈ ಹಿಂದೆ 2024ರ ಲೋಕಸಭೆ ಚುನಾವಣೆಗೂ ಮುನ್ನ ವಿಪಕ್ಷಗಳು ಸೇರಿ ಇಂಡಿಯಾ ಒಕ್ಕೂಟ ರಚಿಸಿ ಚುನಾವಣೆ ಎದುರಿಸಿದ ಬಳಿಕ ಬಿಜೆಪಿ ತೀವ್ರ ಹಿನ್ನಡೆ ಕಂಡಿದೆ. ಚಾರ್ ಸೋ ಪಾರ್ (400ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು) ಎಂಬ ಘೋಷಣೆ ತಲೆಕೆಳಗಾಯಿತು. ಕನಿಷ್ಠ ಬಹುಮತ ಪಡೆಯಲೂ ಬಿಜೆಪಿಗೆ ಸಾಧ್ಯವಾಗಿಲ್ಲ. ಇದೀಗ ಚುನಾವಣಾ ಅಕ್ರಮಗಳ ವಿರುದ್ಧ ಮತ್ತೆ ವಿಪಕ್ಷಗಳು ಒಂದಾಗಿದೆ. ಇದರಿಂದಾಗಿ ಕೇಂದ್ರ ಸರ್ಕಾರ ಬೆಚ್ಚಿದಂತಿದೆ.

ಇದನ್ನೂ ಓದಿ: ಒಡೆದ ಬಲೂನಿನಲ್ಲಿ ಗಾಳಿ ತುಂಬಲ್ಲ, ಅಮಿತ್ ಶಾಗೆ ಸಂಸತ್ತಿಗೆ ಬರುವ ದಮ್ಮಿಲ್ಲ: ರಾಹುಲ್ ಗಾಂಧಿ

ಪ್ರತಿಭಟನೆಯನ್ನು ತಡೆಯಲು ಜಂತರ್ ಮಂತರ್, ನವದೆಹಲಿಯ ಸುತ್ತಮುತ್ತ ಪ್ರತಿಭಟನೆ ನಡೆಸಲು ಯತ್ನಿಸಿದ ಸಾಮಾಜಿಕ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದರು. ಪತ್ರಕರ್ತರನ್ನೂ ಪೊಲೀಸರು ಎತ್ತಿ ಕಸ್ಟಡಿ ಬಸ್‌ಗೆ ತಳ್ಳಿದ್ದಾರೆ. ವಶಕ್ಕೆ ಪಡೆಯುವ ಸಂದರ್ಭದಲ್ಲಿ ಕೆಲವರಿಗೆ ತೀವ್ರ ಗಾಯಗಳಾಗಿವೆ.

ದೇಶದಲ್ಲಿ ಕೇಂದ್ರ ಸರ್ಕಾರ, ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಮಿತ್ ಶಾ, ವಿರೋಧ ಪಕ್ಷಗಳ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದರು. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರು ಅಕ್ರಮ ನುಸುಳುಕೋರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ, ತಮ್ಮ ವೋಟ್ ಬ್ಯಾಂಕ್ ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಶಾ ಆರೋಪಿಸಿದರು.

“ಎಸ್‌ಐಆರ್ ಪ್ರಕ್ರಿಯೆ ಆದರೆ ಕಾಂಗ್ರೆಸ್ ಪಕ್ಷವು ಗುಜರಾತ್‌ನಲ್ಲಿ 1985ರಿಂದ, ತ್ರಿಪುರಾದಲ್ಲಿ ಕಳೆದ 33 ವರ್ಷಗಳಿಂದ ಮತ್ತು ಪಶ್ಚಿಮ ಬಂಗಾಳದಲ್ಲಿ 54 ವರ್ಷಗಳಿಂದ ಸೋಲುತ್ತಲೇ ಬಂದಿದೆ. ಈ ಸುದೀರ್ಘ ಸೋಲುಗಳಿಗೂ SIR ಪ್ರಕ್ರಿಯೆಯೇ ಕಾರಣವೇ” ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ‘ನಕಾರಾತ್ಮಕ ರಾಜಕೀಯ’ ಮಾಡುತ್ತಿದ್ದು, 2029ರ ಲೋಕಸಭಾ ಚುನಾವಣೆಯಲ್ಲೂ ಎನ್‌ಡಿಎ ಒಕ್ಕೂಟವು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಸತತ ನಾಲ್ಕನೇ ಬಾರಿ ಮುಖಭಂಗ ಅನುಭವಿಸಲಿದೆ ಎಂದು ಅಮಿತ್ ಶಾ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅಮಿತ್‌ ಶಾ ತಪ್ಪಿತಸ್ಥರು, ಇಲ್ಲವೇ ಅಸಮರ್ಥರು: ರಾಹುಲ್‌ ಗಾಂಧಿ

ಇಂಡಿಯಾ ಒಕ್ಕೂಟದ ತಿರುಗೇಟು

ಅಮಿತ್ ಶಾ ಅವರ ಹೇಳಿಕೆಗಳಿಗೆ ರಾಹುಲ್ ಗಾಂಧಿ ಮತ್ತು ಇಂಡಿಯಾ ಒಕ್ಕೂಟದ ಪ್ರಮುಖರು ತಿರುಗೇಟು ನೀಡಿದ್ದಾರೆ. ಅಮಿತ್ ಶಾ ಅವರ ‘ನುಸುಳುಕೋರರ ರಕ್ಷಣೆ’ ಆರೋಪಕ್ಕೆ ಕಟುವಾಗಿ ತಿರುಗೇಟು ನೀಡಿರುವ ರಾಹುಲ್ ಗಾಂಧಿ, “ಬಿಜೆಪಿಯು ಜನರ ಗಮನ ಬೇರೆಡೆ ಸೆಳೆಯಲು ಸುಳ್ಳು ಆರೋಪಗಳನ್ನು ಮಾಡುತ್ತಿದೆ. ನಾವು ರಕ್ಷಿಸುತ್ತಿರುವುದು ನುಸುಳುಕೋರರನ್ನಲ್ಲ, ಬದಲಿಗೆ ಭಾರತದ ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ನೀಡಿರುವ ಸಂವಿಧಾನವನ್ನು” ಎಂದು ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯವರು ಸಂವಿಧಾನಾತ್ಮಕ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಪ್ರಜಾಪ್ರಭುತ್ವವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಗೃಹ ಸಚಿವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮತದಾರರ ಪಟ್ಟಿಯ ಪರಿಷ್ಕರಣೆ ಹೆಸರಿನಲ್ಲಿ ಕೇಂದ್ರ ಸರ್ಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಯತ್ನಿಸುತ್ತಿದೆ. ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರು, ವಿದ್ಯಾರ್ಥಿಗಳು ಮತ್ತು ಸಂಸದರ ಮೇಲೆ ಪೊಲೀಸರನ್ನು ಬಳಸಿ ದೌರ್ಜನ್ಯ ಎಸಗಿರುವುದು ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಹಿಡಿದ ಕನ್ನಡಿಯಾಗಿದೆ” ಎಂದು ಕಿಡಿಕಾರಿದ್ದಾರೆ.

ಇನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಸಮಾಜವಾದಿ ಪಕ್ಷದ ನಾಯಕರು ಕೂಡ ಅಮಿತ್ ಶಾ ವಿರುದ್ಧ ತಿರುಗಿಬಿದ್ದಿದ್ದು, “ಪಶ್ಚಿಮ ಬಂಗಾಳ ಅಥವಾ ಇತರೆ ರಾಜ್ಯಗಳಲ್ಲಿ ಚುನಾವಣಾ ಸೋಲಿನ ಭಯದಿಂದ ಬಿಜೆಪಿ ಈ ರೀತಿ ವಿನಾಕಾರಣ ಆರೋಪ ಮಾಡುತ್ತಿದೆ. ಚುನಾವಣಾ ಆಯೋಗವನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವುದೇ ಬಿಜೆಪಿ ಮಾಡುತ್ತಿರುವ ಅತಿ ದೊಡ್ಡ ತಪ್ಪು” ಎಂದು ತೀವ್ರವಾಗಿ ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಫಾರ್ಮ್‌ 6 ಸುಳ್ಳು ಘೋಷಣೆಗೆ ಒತ್ತು ನೀಡುತ್ತಿದೆ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ವೇಳೆ ಮತದಾರರ...

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ...