ಛತ್ತೀಸ್‌ಗಢ | ಮುಖ್ಯವಾಹಿನಿಗೆ ಬಂದ 208 ಮಾವೋವಾದಿ ನಾಯಕರು

Date:

ಛತ್ತೀಸ್‌ಗಢದ ಬಸ್ತಾರ್ ವಿಭಾಗದಲ್ಲಿ ಶುಕ್ರವಾರ ಸುಮಾರು 208 ಮಾವೋವಾದಿ ನಾಯಕರು ಮುಖ್ಯವಾಹಿನಿಗೆ ಶರಣಾಗಿದ್ದಾರೆ. ಜತೆಗೆ ಅಧಿಕಾರಿಗಳಿಗೆ 153 ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಷ್ಟೊಂದು ಪ್ರಮಾಣದಲ್ಲಿ ಮಾವೋವಾದಿ ನಾಯಕರು ಸಾಮೂಹಿಕವಾಗಿ ಮುಖ್ಯವಾಹಿನಿಗೆ ಬರುತ್ತಿರುವುದು ಎಂದು ಹೇಳಲಾಗಿದೆ. 208 ಮಂದಿಯಲ್ಲಿ 110 ಮಹಿಳೆಯರು, 98 ಪುರುಷರಾಗಿದ್ದಾರೆ.

- Advertisement -

ಮಾವೋವಾದಿ ವಕ್ತಾರ ಮತ್ತು ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕೇಂದ್ರ ಸಮಿತಿ ಸದಸ್ಯ (ಸಿಸಿಎಂ) ರೂಪೇಶ್ ಅಲಿಯಾಸ್ ಸತೀಶ್ ಕೂಡ ಮುಖ್ಯವಾಹಿನಿಗೆ ಬಂದಿದ್ದಾರೆ. ಈ ಹಿಂದೆ ರೂಪೇಶ್ ಬಗ್ಗೆ ಸುಳಿವು ನೀಡಿದವರಿಗೆ 1 ಕೋಟಿ ರೂಪಾಯಿ ಬಹುಮಾನ ಘೋಷಣೆ ಮಾಡಲಾಗಿತ್ತು. ಇವರೊಂದಿಗೆ ನಾಯಕಿ ರಾಣಿತಾ ಮತ್ತು ಕಮಾಂಡರ್‌ಗಳಾದ ಭಾಸ್ಕರ್ ಮತ್ತು ರಾಜು ಸಲಾಂ ಸೇರಿದಂತೆ ಇತರ ಉನ್ನತ ನಾಯಕರೂ ಮುಖ್ಯವಾಹಿನಿಗೆ ಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಇದನ್ನು ಓದಿದ್ದೀರಾ? ಛತ್ತೀಸ್‌ಗಢ | 1.18 ಕೋಟಿ ರೂ. ಬಹುಮಾನ ಹೊಂದಿದ್ದ 23 ನಕ್ಸಲ್ ನಾಯಕರು ಮುಖ್ಯವಾಹಿನಿಗೆ

ಮಾವೋವಾದಿಗಳು 19 ಎಕೆ -47 ಗಳು, 17 ಎಸ್‌ಎಲ್‌ಆರ್ ರೈಫಲ್‌ಗಳು, 23 ಐಎನ್‌ಎಸ್‌ಎಎಸ್ ರೈಫಲ್‌ಗಳು ಮತ್ತು ಇತರ ವಿವಿಧ ಬಂದೂಕುಗಳು ಸೇರಿದಂತೆ 153 ಶಸ್ತ್ರಾಸ್ತ್ರಗಳನ್ನು ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರ ಸಮ್ಮುಖದಲ್ಲಿ ಈ ಪ್ರಕ್ರಿಯೆ ನಡೆದಿದೆ.

ಈ ಹಿಂದೆ ಅಕ್ಟೋಬರ್ 14ರಂದು ಭೂಪತಿ ಎಂದೂ ಕರೆಯಲ್ಪಡುವ ಹಿರಿಯ ಮಾವೋವಾದಿ ನಾಯಕ ಮಲ್ಲೊಜುಲ ವೇಣುಗೋಪಾಲ್ ರಾವ್ ಅವರು ಸುಮಾರು 60 ಮಾವೋವಾದಿಗಳೊಂದಿಗೆ ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮುಖ್ಯವಾಹಿನಿಗೆ ಬಂದಿದ್ದಾರೆ. ಅದಾದ ಬಳಿಕ ಅಕ್ಟೋಬರ್ 15ರಂದು ಛತ್ತೀಸ್‌ಗಢದ ಕಂಕೇರ್, ಸುಕ್ಮಾ ಮತ್ತು ಕೊಂಡಗಾಂವ್ ಜಿಲ್ಲೆಗಳಲ್ಲಿ 78 ಮಾವೋವಾದಿಗಳು ಮುಖ್ಯವಾಹಿನಿಗೆ ಬಂದಿದ್ದಾರೆ.

ಪೊಲೀಸರಿಂದ ಆದಿವಾಸಿಗಳ ಹತ್ಯೆ, ದೌರ್ಜನ್ಯ

2024ರ ಜನವರಿಯಿಂದ 2025 ಅಕ್ಟೋಬರ್‌ವರೆಗೆ ಛತ್ತೀಸ್‌ಗಢದಲ್ಲಿ ಸುಮಾರು 400ಕ್ಕೂ ಅಧಿಕ ಮಾವೋವಾದಿಗಳನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ. 2025ರಲ್ಲೇ ಸುಮಾರು 252 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ನಕ್ಸಲ್ ವಿರೋಧಿ ಕಾರ್ಯಾಚರಣೆ ನೆಪದಲ್ಲಿ ಆದಿವಾಸಿಗಳ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಮಾನವ ಹಕ್ಕು ಹೋರಾಟಗಾರರು ಮತ್ತು ಬುಡಕಟ್ಟು ಸಮುದಾಯಗಳು ನಿರಂತರವಾಗಿ ಆರೋಪಿಸುತ್ತಿದೆ. ಆದಿವಾಸಿಗಳ ಮೇಲೆ ಲೈಂಗಿಕ ದೌರ್ಜನ್ಯ, ಚಿತ್ರಹಿಂಸೆ ನೀಡಲಾಗುತ್ತಿದೆ ಎಂದು ದೂರಲಾಗಿದೆ.

ಅದರಲ್ಲೂ ಮಾವೋವಾದಿ ನಾಯಕರುಗಳ ವಿರುದ್ಧ ಕಾರ್ಯಾಚರಣೆ ವೇಳೆ ಮುಗ್ಧ ಗ್ರಾಮಸ್ಥರನ್ನು ಭದ್ರತಾಪಡೆ, ಪೊಲೀಸರು ಹತ್ಯೆ ಮಾಡಿದ್ದಾರೆ. 2021ರಲ್ಲಿ ನಡೆದ ಇಂತಹ ಘಟನೆ ಬಳಿಕ ಭದ್ರತಾ ಪಡೆಗಳ ವಿರುದ್ಧ ಆಕ್ರೋಶ ಹೆಚ್ಚಾದ ಬಳಿಕ ಕೊನೆಗೂ ಮಾವೋವಾದಿಗಳು ಎಂದು ಭಾವಿಸಿ ನಾಗರಿಕರನ್ನು ಹತ್ಯೆ ಮಾಡಿರುವುದಾಗಿ ಭದ್ರತಾ ಪಡೆಗಳು ಒಪ್ಪಿಕೊಂಡಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಸದನೆಂದು ಹೇಳಿದರೂ ಬಿಡದೆ ಹಲ್ಲೆ, ಉಸಿರುಗಟ್ಟಿಸಲು ಯತ್ನ: ಸಿಆರ್‌ಪಿಎಫ್ ವಿರುದ್ಧ ಸಿಪಿಐಎಂ ಎಂಪಿ ಗಂಭೀರ ಆರೋಪ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ, ತಮ್ಮನ್ನು ಸಿಆರ್‌ಪಿಎಫ್ ಸಿಬ್ಬಂದಿ ಬಸ್‌ನೊಳಗೆ ಕೆಳಗೆ...

ಸುಪ್ರೀಂ ಆದೇಶ ಉಲ್ಲಂಘನೆ: ಕಾನೂನುಬಾಹಿರ ವಶಕ್ಕೆ ತಡೆ ಇದ್ದರೂ 100ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ!

ರಾಜಧಾನಿ ದೆಹಲಿಯಲ್ಲಿ ಕನ್ಹಾಟ್ ಪ್ಲೇಸ್ ಹಾಗೂ ಜಂತರ್ ಮಂತರ್ ಸುತ್ತಮುತ್ತ ನಡೆಯುತ್ತಿರುವ...

ಗ್ಯಾನೂ ವಿರುದ್ಧ ಪ್ರತಿಭಟನೆ: ವಿದ್ಯಾರ್ಥಿ ನಾಯಕಿ ನೇಹಾ ಬೋರಾ ಬಂಧನ

ದೆಹಲಿಯಲ್ಲಿ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಭಾನುವಾರವೂ...