ಕೊರೋನಾ ಜೆಎನ್.1: ಮೂರು ರಾಜ್ಯಗಳಲ್ಲಿ 21 ಪ್ರಕರಣಗಳು ಪತ್ತೆ

Date:

ಕೋವಿಡ್-19ರ ರೂಪಾಂತರ ಉಪತಳಿ ಜೆಎನ್‌.1 ವೈರಸ್ ದೇಶಾದ್ಯಂತ ಮೂರು ರಾಜ್ಯಗಳಲ್ಲಿ 21 ಪ್ರಕರಣಗಳು ಪತ್ತೆಯಾಗಿದೆ. ಗೋವಾ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ನೂತನ ಕೊರೋನಾ ವೈರಸ್ ರೂಪಾಂತರದ ಪ್ರಕರಣಗಳು ವರದಿಯಾಗಿವೆ.

ಜೆಎನ್‌.1 ವೈರಸ್ ಗೋವಾದಲ್ಲಿ ಇದುವರೆಗೆ 19 ಪ್ರಕರಣಗಳನ್ನು ವರದಿ ಮಾಡಿದ್ದರೆ, ಕೇರಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಪತ್ತೆಯಾಗಿದೆ.

ಜೆಎನ್‌.1 ಕೊರೋನಾ ವೈರಸ್ ಒಮಿಕ್ರಾನ್ ತಳಿಯ ಮೂಲ ತಳಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ವೇಗವಾಗಿ ಹರಡುವ ವೈರಸ್‌ಗಳಲ್ಲಿ ಒಂದಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಶ್ವ ಆರೋಗ್ಯ ಸಂಸ್ಥೆಯು ಜೆಎನ್‌.1 ಅನ್ನು “ಕಳವಳಕಾರಿ ರೂಪಾಂತರ” ಎಂದು ವರ್ಗೀಕರಿಸಿದೆ, ಆದರೆ ಇದು “ಕಡಿಮೆ” ಜಾಗತಿಕ ಸಾರ್ವಜನಿಕ ಆರೋಗ್ಯದ ಅಪಾಯವನ್ನು ಉಂಟುಮಾಡುತ್ತದೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

ದೇಶಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ ಭಯಪಡುವ ಅಗತ್ಯವಿಲ್ಲ ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿಕೆ ಪಾಲ್ ಬುಧವಾರ ಹೇಳಿದ್ದಾರೆ.

ಭಾರತದಲ್ಲಿನ ವೈಜ್ಞಾನಿಕ ಸಮುದಾಯವು ಹೊಸ ರೂಪಾಂತರ ತಳಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಪಾಲ್ ತಿಳಿಸಿದ್ದಾರೆ. ಆದಾಗ್ಯೂ, ರಾಜ್ಯಗಳು ಪರೀಕ್ಷೆ ಹೆಚ್ಚಳ, ಕಣ್ಗಾವಲು ವ್ಯವಸ್ಥೆ ಬಲಪಡಿಸುವಂಥ ಕೋವಿಡ್ ಸನ್ನಡತೆಯನ್ನು ಹೆಚ್ಚಿಸುವ ಅಗತ್ಯವನ್ನು ಪಾಲ್ ಒತ್ತಿ ಹೇಳಿದರು.

ಏತನ್ಮಧ್ಯೆ, ದೇಶಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಜಾಗರೂಕರಾಗಿರಲು ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ನಿಯಮಿತವಾಗಿ ಜಿಲ್ಲಾವಾರು ಶೀತಜ್ವರ ತರಹದ ಅನಾರೋಗ್ಯ ಮತ್ತು ತೀವ್ರತರವಾದ ಉಸಿರಾಟದ ಕಾಯಿಲೆಯ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ವರದಿ ಮಾಡಲು ರಾಜ್ಯಗಳಿಗೆ ನಿರ್ದೇಶಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ...

ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ....

ಮೋದಿ ಚಿತ್ರವುಳ್ಳ ‘ಚೀಲ’ಗಳ ಖರೀದಿಗೆ 15 ಕೋಟಿ ರೂ. ತೆತ್ತ ಕೇಂದ್ರ!

ಕೆಲವೇ ವಾರಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಕೇಂದ್ರ ಸರ್ಕಾರವು...

ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್ ಇನ್ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ವಿಫಲ: ಖರ್ಗೆ

ಉದ್ಯೋಗ ಸೃಷ್ಟಿ ಹಾಗೂ ಅನುದಾನ ಬಳಕೆಯಲ್ಲಿನ ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್‌ ಇನ್‌...