22 ವರ್ಷದ ಯುವತಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿದೆ. ಐವರ ಪೈಕಿ ಇಬ್ಬರ ಬಂಧನ ಮಾಡಲಾಗಿದೆ.
ಶುಕ್ರವಾರ ಸಂಜೆ ಮಹಿಳೆಗೆ ಪರಿಚಿತರಾಗಿರುವ ಇಬ್ಬರು ಕೆಲಸವೊಂದರ ಬಗ್ಗೆ ಮಾತನಾಡುವ ನೆಪದಲ್ಲಿ ಬಂಗಿರಿಪೋಸಿ ಪ್ರದೇಶದಿಂದ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಪುದುಚೇರಿ | ಆಟೋ ಚಾಲಕ, ಪ್ರವಾಸಿಗರಿಂದ 16ರ ಬಾಲಕಿಯ ಸಾಮೂಹಿಕ ಅತ್ಯಾಚಾರ
ಬಂಗಿರ್ಪೋಸಿಯಲ್ಲಿರುವ ಯುವತಿಯ ಮನೆಯಿಂದ ಸುಮಾರು 80 ಕಿಲೋಮೀಟರ್ ದೂರದಲ್ಲಿರುವ ಉಡಾಲ ಪೊಲೀಸ್ ಠಾಣೆ ಪ್ರದೇಶದ ಸ್ಥಳಕ್ಕೆ ಆಕೆಯನ್ನು ಕರೆದೊಯ್ಯಲಾಯಿತು ಎಂದು ಮಹಿಳೆ ನೀಡಿದ ದೂರನ್ನು ಉಲ್ಲೇಖಿಸಿ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಕಾರಿನಲ್ಲಿ ಮೊದಲು ಇಬ್ಬರು ಯುವಕರು ಇದ್ದರು. ಬಳಿಕ ಆಕೆಯನ್ನು ಇತರ ಮೂವರು ಕಾರು ಹತ್ತಿದರು. ಯುವತಿಯನ್ನು ಉಡಾಲ ಮತ್ತು ಬಾಲಸೋರ್ ಪಟ್ಟಣವನ್ನು ಸಂಪರ್ಕಿಸುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಸ್ಡಿಪಿಒ (ಉಡಾಲ) ಹೃಷಿಕೇಶ್ ನಾಯಕ್ ತಿಳಿಸಿದ್ದಾರೆ.
ಅತ್ಯಾಚಾರ ಮಾಡಿದ ಬಳಿಕ ಯುವತಿಯನ್ನು ರಸ್ತೆಯಲ್ಲಿಯೇ ಒಂಟಿಯಾಗಿ ಬಿಟ್ಟು ಐವರೂ ತೆರಳಿದ್ದಾರೆ. ಆಕೆಯ ಹೇಳಿಕೆಯ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ತನಿಖೆ ನಡೆಯುತ್ತಿದೆ. ಪೊಲೀಸರು ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಿದ್ದಾರೆ. ಇತರ ಮೂವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ನಾಯಕ್ ಹೇಳಿದರು.
ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.
