ಛತ್ತೀಸ್‌ಗಢ | 1.18 ಕೋಟಿ ರೂ. ಬಹುಮಾನ ಹೊಂದಿದ್ದ 23 ನಕ್ಸಲ್ ನಾಯಕರು ಮುಖ್ಯವಾಹಿನಿಗೆ

Date:

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಬರೋಬ್ಬರಿ 1.18 ಕೋಟಿ ರೂ. ಬಹುಮಾನ ಹೊಂದಿದ್ದ 23 ನಕ್ಸಲ್ ನಾಯಕರು ಮುಖ್ಯವಾಹಿನಿಗೆ ಬಂದಿದ್ದಾರೆ. ಇದರಲ್ಲಿ ಮೂವರು ದಂಪತಿಗಳೂ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಮುಖ್ಯವಾಹಿನಿಗೆ ಬಂದವರಲ್ಲಿ 11 ಹಿರಿಯ ಕಾರ್ಯಕರ್ತರು ಸೇರಿದ್ದಾರೆ. ಈ ಪೈಕಿ ಹೆಚ್ಚಿನವರು ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ) ಬೆಟಾಲಿಯನ್ ನಂ.1 ನಲ್ಲಿ ಸಕ್ರಿಯರಾಗಿದ್ದವರು. ಇದು ಮಾವೋವಾದಿಗಳ ಪ್ರಬಲ ಮಿಲಿಟರಿ ಪಡೆದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ‘ಎನ್‌ಜಿಒಗಳಲ್ಲಿ ನಗರ ನಕ್ಸಲರು’ ಹೇಳಿಕೆ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆಗೆ ನೋಟಿಸ್

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್, “ಸಂಘಟನೆಯೊಳಗೆ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳ ಬಗ್ಗೆ ನಿರಾಶೆಯಿಂದಾಗಿ ಹಿರಿಯ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿಗಳ ಮುಂದೆ ನಕ್ಸಲರು ಶರಣಾಗಿದ್ದಾರೆ. ಶರಣಾದವರಲ್ಲಿ ಒಂಬತ್ತು ಮಹಿಳೆಯರು ಇದ್ದಾರೆ” ಎಂದು ಹೇಳಿದ್ದಾರೆ.

ಲೋಕೇಶ್ ಅಲಿಯಾಸ್ ಪೋಡಿಯಂ ಭೀಮ (35), ರಮೇಶ್ ಅಲಿಯಾಸ್ ಕಲ್ಮು ಕೇಸ (23), ಕವಾಸಿ ಮಾಸ (35), ಮಡ್ಕಮ್ ಹಂಗಾ (23), ನುಪ್ಪೊ ಗಂಗಿ (28), ಪುನೆಮ್ ದೇವೆ (30), ಪಾರಸ್ಕಿ ಪಾಂಡೆ (22), ಮದ್ವಿ ಜೋಗ (20), ನುಪ್ಪೊ ಲಚ್ಚು (25), ಪೋಡಿಯಂ ಸುಖ್‌ರಾಮ್ (24) ಮತ್ತು ದುಧಿ ಭೀಮಾ ಅವರಿಗೆ ತಲಾ 8 ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮೋದಿ ಮತ್ತು ಬಿಜೆಪಿ ನಾಯಕರು ಜಾತಿ ಗಣತಿ ವಿರುದ್ಧ ಹೇಗೆಲ್ಲ ದಾಳಿ ನಡೆಸಿದ್ದರು ಗೊತ್ತೆ?

“ಲೋಕೇಶ್ ವಿಭಾಗೀಯ ಸಮಿತಿ ಸದಸ್ಯರಾಗಿದ್ದರು ಮತ್ತು ಇತರ ಎಂಟು ಮಂದಿ ಪಿಎಲ್‌ಜಿಎ ಬೆಟಾಲಿಯನ್ ನಂ.1 ಮಾವೋವಾದಿಗಳ ಪಡೆಯ ಸದಸ್ಯರಾಗಿದ್ದರು. ಈ ಬೆಟಾಲಿಯನ್ ದುರ್ಬಲಗೊಳ್ಳುತ್ತಿದೆ ಮತ್ತು ಸುಕ್ಮಾ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆಗಳನ್ನು ತೀವ್ರಗೊಳಿಸುತ್ತಿರುವುದರಿಂದ ಅದರ ಸದಸ್ಯರು ನಿರಂತರವಾಗಿ ನಕ್ಸಲ್‌ವಾದವನ್ನು ತ್ಯಜಿಸುತ್ತಿದ್ದಾರೆ” ಎಂದು ಚವಾಣ್ ಹೇಳಿದರು.

ಇನ್ನು ಶುಕ್ರವಾರ, ಅಭುಜ್ಮದ್ ಪ್ರದೇಶದಲ್ಲಿ ಸಕ್ರಿಯರಾಗಿದ್ದ ಮತ್ತು 37.5 ಲಕ್ಷ ರೂ.ಗಳ ಸಾಮೂಹಿಕ ಬಹುಮಾನವನ್ನು ಹೊಂದಿದ್ದ 22 ನಕ್ಸಲ್ ನಾಯಕರು ನಾರಾಯಣಪುರ ಜಿಲ್ಲೆಯಲ್ಲಿ ಮುಖ್ಯವಾಹಿನಿಗೆ ಬಂದಿದ್ದಾರೆ. ಛತ್ತೀಸ್‌ಗಢದಲ್ಲಿ ನಿರಂತರವಾಗಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಯುತ್ತಿದ್ದು ನೂರಾರು ಮಂದಿಯ ಎನ್‌ಕೌಂಟರ್ ನಡೆದಿದೆ. ಈ ನಡುವೆ ಮಾವೋ ನಾಯಕರು ಮುಖ್ಯವಾಹಿನಿಗೆ ಮರಳುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...