ಪೆರೋಲ್ ಸಿಕ್ಕರೂ 24 ದಿನ ಹೆಚ್ಚುವರಿ ಜೈಲುವಾಸ: ಕೈದಿಗೆ ₹11 ಲಕ್ಷ ಪರಿಹಾರ ನೀಡುವಂತೆ ಸುಪ್ರೀಂ ಆದೇಶ

Date:

ರಾಜಸ್ಥಾನ ಸರ್ಕಾರದ ವಿಳಂಬ ನೀತಿಗೆ ಸುಪ್ರೀಂ ಕೋರ್ಟ್ ತಪರಾಕಿ ನೀಡಿದ್ದು, ಹೈಕೋರ್ಟ್ ಪೆರೋಲ್ ಮಂಜೂರು ಮಾಡಿದ ಮೇಲೂ 24 ದಿನಗಳ ಕಾಲ ಹೆಚ್ಚುವರಿಯಾಗಿ ಜೈಲಿನಲ್ಲಿಟ್ಟಿದ್ದ ಕೈದಿಗೆ 11 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ.

- Advertisement -

‘ದೌದಯಾಲ್ vs ರಾಜಸ್ಥಾನ ಸರ್ಕಾರ’ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಎ ಜಿ ಮಸಿಹ್ ಅವರಿದ್ದ ಪೀಠವು ಈ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

1967ರಲ್ಲಿ ರಾಜಸ್ಥಾನದಲ್ಲಿ ನಡೆದಿದ್ದ ಕಾನೂನುಬಾಹಿರ ಕೂಟ, ಮನೆ ಅತಿಕ್ರಮಣ ಮತ್ತು ಕೊಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೌದಯಾಲ್ ಎಂಬುವವರಿಗೆ 1988ರಲ್ಲಿ ವಿಚಾರಣಾ ನ್ಯಾಯಾಲಯ 4 ವರ್ಷಗಳ ಕಠಿಣ ಜಾರಾಗೃಹ ವಾಸದ ಶಿಕ್ಷೆ ವಿಧಿಸಿತ್ತು. ಈ ಶಿಕ್ಷೆಯನ್ನು 2021ರಲ್ಲಿ ರಾಜಸ್ಥಾನ ಹೈಕೋರ್ಟ್ ಎತ್ತಿಹಿಡಿದ ಹಿನ್ನೆಲೆಯಲ್ಲಿ ದೌದಯಾಲ್ ಜೈಲು ಸೇರಿದ್ದರು.

2023ರಲ್ಲಿ ದೌದಯಾಲ್ ಅವರು ಕಾಯಂ ಪೆರೋಲ್ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೈಲು ಅಧಿಕಾರಿಗಳು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು ‌ 2024ರ ನವೆಂಬರ್ 5 ರಂದು ಕೆಲವು ಷರತ್ತುಗಳೊಂದಿಗೆ ಪೆರೋಲ್ ಮಂಜೂರು ಮಾಡಿ ಆದೇಶಿಸಿತ್ತು.

ನ್ಯಾಯಾಲಯದ ಆದೇಶದ ಬೆನ್ನಲ್ಲೇ ದೌದಯಾಲ್, 2024ರ ನ. 13ರಂದು ಎಲ್ಲಾ ಷರತ್ತುಗಳನ್ನು ಪೂರೈಸಿ, ಶೂರಿಟಿಗಳನ್ನು (ಜಾಮೀನುದಾರರು) ಪರಿಶೀಲನೆ ಮಾಡಿಸಿದ್ದರು. ನಿಯಮದ ಪ್ರಕಾರ ತಕ್ಷಣವೇ ಆತ ಬಿಡುಗಡೆಯಾಗಬೇಕಿತ್ತು. ಆದರೆ, “ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಬೇಕೇ ಬೇಡವೇ?” ಎಂದು ಜೈಲು ಅಧಿಕಾರಿಗಳು ಆಲೋಚಿಸುತ್ತಾ ಕಾಲಹರಣ ಮಾಡಿದ್ದರಿಂದ, ದೌದಯಾಲ್ ಮತ್ತಷ್ಟು ದಿನ ಜೈಲಿನಲ್ಲೇ ಉಳಿಯಬೇಕಾಯಿತು.

ಬಳಿಕ ಅವರು ಹೈಕೋರ್ಟ್‌ನ ದ್ವಿಸದಸ್ಯ ಪೀಠವನ್ನು ಸಂಪರ್ಕಿಸಿದಾಗ, ನ್ಯಾಯಾಲಯವು 2024ರ ಡಿ.6ರಂದು ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ನೀಡಿತು. ಹೀಗೆ ಹೈಕೋರ್ಟ್ ಆದೇಶದ ಹೊರತಾಗಿಯೂ ಅವರು ಬರೋಬ್ಬರಿ 24 ದಿನಗಳ ಕಾಲ ಅಕ್ರಮವಾಗಿ ಜೈಲುವಾಸ ಅನುಭವಿಸಿದ್ದರು.

ತಮ್ಮನ್ನು ಕಾನೂನುಬಾಹಿರವಾಗಿ ಜೈಲಿನಲ್ಲಿಟ್ಟು ಸಂವಿಧಾನದ ‘ವಿಧಿ 21’ ರಡಿ ಸಿಗಬೇಕಾದ ವೈಯಕ್ತಿಕ ಸ್ವಾತಂತ್ರ್ಯವನ್ನು ಹರಣ ಮಾಡಲಾಗಿದೆ ಎಂದು ದೌದಯಾಲ್ ಸುಪ್ರೀಂ ಕೋರ್ಟ್‌ನಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಬೆಂಗಳೂರು | ಭಾರೀ ಮಳೆ; ವಸತಿ ಪ್ರದೇಶಗಳಿಗೆ ನುಗ್ಗಿದ ನೀರು: ಜನಜೀವನ ಅಸ್ತವ್ಯಸ್ತ

ಸರ್ಕಾರದ ವಿಳಂಬ ನೀತಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಆದೇಶ ನೀಡಿದೆ.

“ವ್ಯಕ್ತಿಯೊಬ್ಬನ ಸ್ವಾತಂತ್ರ್ಯ ಎನ್ನುವುದು ಸಣ್ಣ ವಿಷಯವಲ್ಲ. ಮೇಲ್ಮನವಿ ಸಲ್ಲಿಸುವ ಕುರಿತು ನಿರ್ಧಾರ ತೆಗೆದುಕೊಳ್ಳುವ ಸರ್ಕಾರದ ಮಂದಗತಿಯ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ನೆಪವಾಗಿಟ್ಟುಕೊಂಡು, ಕೋರ್ಟ್ ಆದೇಶದ ಹೊರತಾಗಿಯೂ ಒಬ್ಬರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ಪೀಠ ಹೇಳಿದೆ.

ಮೇಲ್ದರ್ಜೆಯ ನ್ಯಾಯಾಲಯವು ತಡೆ ಆಜ್ಞೆ ನೀಡದ ಹೊರತು ನ್ಯಾಯಾಂಗದ ಆದೇಶವನ್ನು ಪಾಲಿಸಲೇಬೇಕು. ಶಿಕ್ಷೆ ಅನುಭವಿಸುತ್ತಿರುವ ಕಾರಣಕ್ಕೆ ಕೈದಿಯೊಬ್ಬನ ಹಕ್ಕುಗಳನ್ನು ಕಸಿಯಲಾಗುವುದಿಲ್ಲ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಅಂತಿಮವಾಗಿ, ದೌದಯಾಲ್ ಅವರ 24 ದಿನಗಳ ಹೆಚ್ಚುವರಿ ಜೈಲುವಾಸವನ್ನು ‘ಅಕ್ರಮ ಬಂಧನ’ ಎಂದು ಪರಿಗಣಿಸಿದ ಸುಪ್ರೀಂ ಕೋರ್ಟ್, ಅವರಿಗೆ 11 ಲಕ್ಷ ರೂಪಾಯಿ ಪರಿಹಾರ ಪಾವತಿಸುವಂತೆ ರಾಜಸ್ಥಾನ ಸರ್ಕಾರಕ್ಕೆ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಸಿರುಗಟ್ಟುವ ವಾತಾವರಣ: ಐದೇ ದಿನದಲ್ಲಿ ಬಿಜೆಪಿಗೆ ಗುಡ್‌ಬೈ ಹೇಳಿ ಮತ್ತೆ ಕಾಂಗ್ರೆಸ್ ಸೇರಿದ ಉತ್ತರಾಖಂಡ ನಾಯಕರು

ಉತ್ತರಾಖಂಡದಲ್ಲಿ 2027ರ ವಿಧಾನಸಭೆ ಚುನಾವಣೆಗೆ ರಾಜಕೀಯ ಕಣ ಕಾಯುತ್ತಿದ್ದು, ಆಡಳಿತಾರೂಢ ಬಿಜೆಪಿ...

ಸಿಇಸಿ ರಾಜೀನಾಮೆ ಕೋರಿ ಪ್ರತಿಭಟನೆ ನಡೆಸಿದವರ ಮೇಲೆ ಹಲ್ಲೆ: 10 ಎಫ್‌ಐಆರ್ ದಾಖಲು, ಐವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣೆ ಆಯುಕ್ತರ (ಸಿಇಸಿ) ಗ್ಯಾನೇಶ್ ಕುಮಾರ್...

ಸೌರವ್ ದಾಸ್, ಆಶುತೋಷ್ ರಾಂಕಾ ಬಿಡುಗಡೆಯಲ್ಲಿ ವಿಳಂಬ; 4 ಶ್ಯೂರಿಟಿ ಬಾಂಡ್ ತಿರಸ್ಕಾರ: ಸಿಜೆಪಿ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಮುಖ ನಾಯಕರಾದ ಸೌರವ್ ದಾಸ್ ಮತ್ತು...

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...