24 ಸಾವಿರ ಶಿಕ್ಷಕರ ಹುದ್ದೆಗಳನ್ನು ರದ್ದುಗೊಳಿಸಿ ಸಂಬಳ ವಾಪಸಾತಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

Date:

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ ರಚಿಸಲಾಗಿದ್ದ 2016ರ ಶಾಲಾ ಶಿಕ್ಷಕರ ನೇಮಕಾತಿ ಮಂಡಳಿಯನ್ನು ಉದ್ಯೋಗ ಹಗರಣದ ಹಿನ್ನೆಲೆಯಲ್ಲಿ ಕಲ್ಕತ್ತಾ ಹೈಕೋರ್ಟ್ ರದ್ದುಗೊಳಿಸಿದೆ. ಮಂಡಳಿಯಿಂದ ಆಯ್ಕೆಯಾಗಿದ್ದ ಸುಮಾರು 24 ಸಾವಿರ ಉದ್ಯೋಗಗಳನ್ನು ಕೋರ್ಟ್ ರದ್ದುಪಡಿಸಿದೆ.

- Advertisement -

ನ್ಯಾಯಮೂರ್ತಿಗಳಾದ ದೇಬಾಂಗ್ಸು ಬಾಸಕ್ ಹಾಗೂ ಎಂಡಿ ಶಬ್ಬೀರ್ ರಶ್ದಿ ನೇತೃತ್ವದ ಪೀಠ ವಿಚಾರಣೆಯ ಸಂದರ್ಭದಲ್ಲಿ ಅಕ್ರಮವಾಗಿ ನೇಮಕಗೊಂಡಿದ್ದ ಶಾಲಾ ಶಿಕ್ಷಕರು ನಾಲ್ಕು ವಾರಗಳೊಳಗೆ ತಮ್ಮ ವೇತನವನ್ನು ವಾಪಸ್ ನೀಡಬೇಕೆಂದು ನಿರ್ದೇಶಿಸಿತು. ಶಿಕ್ಷಕರಿಂದ ಹಣ ವಾಪಸ್‌ ಪಡೆಯುವ ಜವಾಬ್ದಾರಿಯನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅವರಿಗೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ನೇಮಕಾತಿ ಸಮಿತಿಯಿಂದ ರದ್ದುಗೊಂಡವರಲ್ಲಿ ಬೋಧಕೇತರ ಸಿಬ್ಬಂದಿ ಕೂಡ ಸೇರಿದ್ದು,2016ರಲ್ಲಿ ಶಾಲಾ ಶಿಕ್ಷಕ ನೇಮಕಾತಿ ಮಂಡಳಿಯ ಮೂಲಕ ಸರ್ಕಾರಿ ಹಾಗೂ ಅನುದಾನ ಸಹಿತ ಶಾಲೆಗಳಿಗೆ ಶಿಕ್ಷಕರಾಗಿ ನೇಮಕಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ನ್ಯಾಯಪೀಠವು ನೇಮಕಾತಿಯ ಸಂದರ್ಭದಲ್ಲಿ ಕೈಗೊಳ್ಳಲಾಗಿದ್ದ 23 ಒಎಂಆರ್‌ ಶೀಟ್‌ಗಳನ್ನು ಮರು ಮೌಲ್ಯಮಾಪನಗೊಳಿಸಬೇಕೆಂದು ಆದೇಶಿಸಿದೆ.

ನೇಮಕಾತಿಯ ಪ್ರಕ್ರಿಯೆಯ ವಿಷಯಕ್ಕೆ ಸಂಬಂಧಿಸಿದಂತೆ ಸಿಬಿಐ ವಿಚಾರಣೆ ಕೈಗೊಳ್ಳಬೇಕೆಂದು ಆದೇಶಿಸಿದ ಪೀಠ ಮೂರು ತಿಂಗಳೊಳಗೆ ವರದಿ ನೀಡಬೇಕೆಂದು ನಿರ್ದೇಶಿಸಿತು.

ನೂತನ ನೇಮಕಾತಿ ಪ್ರಕ್ರಿಯೆ ಮಂಡಳಿಯನ್ನು ಆರಂಭಿಸಬೇಕೆಂದು ಶಿಕ್ಷಕ ನೇಮಕಾತಿ ಮಂಡಳಿಗೆ ಕೋರ್ಟ್ ಸೂಚನೆ ನೀಡಿದೆ.

2016ರಲ್ಲಿ ಶಿಕ್ಷಕ ನೇಮಕಾತಿ ಮಂಡಳಿಯು 24 ಸಾವಿರಕ್ಕೂ ಹೆಚ್ಚಿನ ಹುದ್ದೆಗಳಿಗೆ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆಯನ್ನು ಹಮ್ಮಿಕೊಂಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...