ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

Date:

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ ಮೇಲೆ ಕಣ್ಣಿಟ್ಟಿದೆ. ಸುಮಾರು 252 ಮದರಸಾಗಳನ್ನು ಅಕ್ರಮ ಹಾಗೂ ಮಾನ್ಯತೆ ರಹಿತ ಎಂದು ಹೇಳಿ ಮುಚ್ಚಲು ಆದೇಶಿಸಿದೆ. ಈ ನಿರ್ಧಾರದ ಬೆನ್ನಲ್ಲೇ ಪಂಚಾಯತ್ ರಾಜ್ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ದಿಲೀಪ್ ಘೋಷ್ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಬಿರುಗಾಳಿಯನ್ನೇ ಎಬ್ಬಿಸಿದೆ.

- Advertisement -

“ಅಕ್ರಮವಾಗಿ ನಡೆಯುತ್ತಿರುವ ಯಾವುದೇ ಸಂಸ್ಥೆಯನ್ನು ಸಹಿಸಲು ಸಾಧ್ಯವಿಲ್ಲ. ಮದರಸಾಗಳು ಭಯೋತ್ಪಾದಕರಿಗೆ ಆಶ್ರಯ ನೀಡುವ ತಾಣಗಳಾಗುತ್ತಿವೆ” ಎಂದು ದಿಲೀಪ್ ಘೋಷ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಳೆದ 20 ವರ್ಷಗಳಲ್ಲಿ ನಡೆದ ಹಲವು ಭಯೋತ್ಪಾದನಾ ಕೃತ್ಯಗಳಲ್ಲಿ ಮದರಸಾ ಶಿಕ್ಷಕರ ಹಾಗೂ ಸಂಸ್ಥೆಗಳ ಹೆಸರುಗಳು ಕೇಳಿಬಂದಿವೆ ಎಂದು ಪ್ರತಿಪಾದಿಸಿರುವ ಸಚಿವ, ಸೂಕ್ತ ಸರ್ಕಾರಿ ಅನುಮತಿ ಇಲ್ಲದೆ ಯಾವುದೇ ಮದರಸಾಗಳು ಕಾರ್ಯನಿರ್ವಹಿಸಲು ಬಿಡುವುದಿಲ್ಲ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಇದನ್ನೂ ಓದಿ: ಪಶ್ಚಿಮ ಬಂಗಾಳ | ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಬಜೆಟ್‌ಗೆ BJP ಕತ್ತರಿ: ಬರೋಬ್ಬರಿ 62% ಅನುದಾನ ಕಡಿತ!

ಅಲ್ಪಸಂಖ್ಯಾತರನ್ನು ಗುರಿಯಾಗಿಸುತ್ತಿದೆಯೇ ಸರ್ಕಾರ?

ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಮುದಾಯ ಮತ್ತು ಅಲ್ಪಸಂಖ್ಯಾತ ಸಂಸ್ಥೆಗಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ ಎಂಬ ಆರೋಪಗಳು ಬಲವಾಗಿ ಕೇಳಿಬರುತ್ತಿವೆ.

ಸರ್ಕಾರವು ಕೈಗೊಂಡಿರುವ ಸರ್ವೇಯ ಆಧಾರದಲ್ಲಿ 252 ಮದರಸಾಗಳನ್ನು ಮುಚ್ಚಲು ಸೂಚಿಸಿ, ಮತ್ತೂ 100ಕ್ಕೂ ಹೆಚ್ಚು ಮದರಸಾಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ಆದರೆ, ಸರ್ಕಾರದ ಈ ನಡೆಯು ಶೈಕ್ಷಣಿಕ ಸುಧಾರಣೆಯ ನೆಪದಲ್ಲಿ ಮುಸ್ಲಿಂ ಸಮುದಾಯದ ಧಾರ್ಮಿಕ ಮತ್ತು ಶೈಕ್ಷಣಿಕ ಹಕ್ಕುಗಳನ್ನು ಹತೋಟಿ ಮಾಡುವ ಪ್ರಯತ್ನ ಎಂದು ವಿರೋಧ ಪಕ್ಷಗಳು ಹಾಗೂ ಅಲ್ಪಸಂಖ್ಯಾತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಮದರಸಾಗಳನ್ನು ಕೇವಲ ಮೂಲಭೂತ ಸೌಕರ್ಯ ಅಥವಾ ಅನುಮತಿಯ ಕೊರತೆಯ ಕಾರಣಕ್ಕೆ ಮುಚ್ಚುವ ಬದಲು, ಅವುಗಳನ್ನು ಕಾನೂನುಬದ್ಧಗೊಳಿಸಲು ಅಥವಾ ಸುಧಾರಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ ಎಂಬುದು ಪ್ರತಿಪಕ್ಷಗಳ ಪ್ರಮುಖ ಆರೋಪ. ಪ್ರತಿಯೊಂದು ಮದರಸಾವನ್ನು ರಾಷ್ಟ್ರೀಯ ಭದ್ರತೆ ಹಾಗೂ ಭಯೋತ್ಪಾದನೆಯ ಕಣ್ಣಿನಿಂದ ನೋಡುವ ಮೂಲಕ ಬಿಜೆಪಿ ಸರ್ಕಾರವು ರಾಜ್ಯದ ಅಲ್ಪಸಂಖ್ಯಾತರ ಮೇಲೆ ಮಾನಸಿಕ ಒತ್ತಡ ಹಾಗೂ ಕಳಂಕ ಹೊರಿಸುವ ತಂತ್ರ ಹೆಣೆಯುತ್ತಿದೆ ಎಂದು ವಿಮರ್ಶಕರು ದೂರಿದ್ದಾರೆ.

ಸರ್ಕಾರದ ಈ ಕ್ರಮವು ಪಶ್ಚಿಮ ಬಂಗಾಳದಲ್ಲಿ ದ್ವೇಷದ ರಾಜಕಾರಣ ಮತ್ತು ಕೋಮು ಧ್ರುವೀಕರಣವನ್ನು ಮತ್ತಷ್ಟು ಹೆಚ್ಚಿಸಲಿದೆ ಎಂಬ ಆತಂಕ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿ: ಡಿಸಿ ಶಿಲ್ಪಾ ಶರ್ಮಾ

ಭಾರತದ ಸಂವಿಧಾನವು ವಿಶಿಷ್ಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ಇಡೀ ವಿಶ್ವಕ್ಕೆ ಮಾದರಿಯಾಗಿದೆ....

ಹಾಸನ | ಮೊದಲು ಶಾಸಕರಿಗೆ ಗೌರವ ಕೊಡುವುದನ್ನು ಕಲಿಯಿರಿ: ಹೆಚ್. ಡಿ ರೇವಣ್ಣ 

ಜಿಲ್ಲಾಧಿಕಾರಿ ಲತಾ ಕುಮಾರಿ ಬಗ್ಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಮತ್ತೊಮ್ಮೆ ಕಿಡಿಕಾರಿದ್ದಾರೆ....

SIR | ನ್ಯಾಯಾಲಯಕ್ಕೂ ಕೇರ್‌ ಮಾಡದ ಚುನಾವಣಾ ಆಯೋಗ; 72 ಸಾವಿರ ಮೇಲ್ಮನವಿಗಳ ರಹಸ್ಯ ಬಯಲು!

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗವು ನಡೆಸಿದ ಮತದಾರರ ಪಟ್ಟಿಯ 'ವಿಶೇಷ ತೀವ್ರ...

ಆತ್ಮಹತ್ಯೆ ಮಾಡಿಕೊಂಡ ರೈತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಬೇಡಿ: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಅಂತ್ಯಕ್ರಿಯೆಯಲ್ಲಿ ಯಾರೂ ಪಾಲ್ಗೊಳ್ಳಬಾರದು, ಮೃತದೇಹಗಳನ್ನು ಪ್ರಾಣಿಗಳು...