ರಾಂಚಿ: ದಲಿತ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ, ಮರಕ್ಕೆ ಕಟ್ಟಿ ಹಲ್ಲೆ

Date:

26 ವರ್ಷದ ದಲಿತ ಮಹಿಳೆಯೊಬ್ಬರನ್ನು ಹೀನಾಯವಾಗಿ ಥಳಿಸಿ, ಅರೆಬೆತ್ತಲೆ ಮಾಡಿ ರಾತ್ರಿಯಿಡೀ ಮರಕ್ಕೆ ಕಟ್ಟಿಹಾಕಿದ ಆಘಾತಕಾರಿ ಘಟನೆ ರಾಂಚಿ ಜಿಲ್ಲಾ ಕೇಂದ್ರ ಗಿರಿದಿಹ್‌ನಿಂದ ಸುಮಾರು 70 ಕಿಮೀ ದೂರದಲ್ಲಿರುವ ಸರಿಯಾ ಎಂಬಲ್ಲಿ ಬುಧವಾರ (ಜುಲೈ 28) ರಾತ್ರಿ ನಡೆದಿದೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಬೆಳಗ್ಗೆ ಸ್ಥಳಕ್ಕಾಗಮಿಸಿದ ಪೊಲೀಸ್ ತಂಡ ಮಹಿಳೆಯನ್ನು ರಕ್ಷಿಸಿದೆ.

- Advertisement -

ಮಹಿಳೆ ನೀಡಿರುವ ದೂರಿನ ಪ್ರಕಾರ, ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಬರುವಂತೆ ಅಪರಿಚಿತರಿಂದ ಆಕೆಯ ಮೊಬೈಲ್‌ಗೆ ಕರೆ ಬಂದಿದೆ. ಮಹಿಳೆ ಹೊರಗೆ ಬಂದಾಗ ಸ್ಕೂಟಿಯಲ್ಲಿ ಬಂದ ಇಬ್ಬರು ಯುವಕರು ಆಕೆಗಾಗಿ ಕಾಯುತ್ತಿದ್ದರು. ಮನೆಯಿಂದ ಹೊರಗೆ ಬಂದ ನಂತರ ಆಕೆಯನ್ನು ಬಲವಂತವಾಗಿ ನಿರ್ಜನ ಸ್ಥಳಕ್ಕೆ ಕರೆದೊಯ್ದು ಹಲ್ಲೆ ನಡೆಸಿ, ಬಟ್ಟೆ ಹರಿದು ಮರಕ್ಕೆ ಕಟ್ಟಿ ಹಾಕಿದರು ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಭೀಮಾ ಕೋರೆಗಾಂವ್‌ ಪ್ರಕರಣ: ಸಾಮಾಜಿಕ ಹೋರಾಟಗಾರರಾದ ಗೊನ್ಸಾಲ್ವಸ್, ಫೆರೇರಾಗೆ ಜಾಮೀನು

“ಅವರು ನನ್ನ ಬಾಯಿ ಕಟ್ಟಿ ಮನಬಂದಂತೆ ಥಳಿಸಿದರು. ನನ್ನ ಬಟ್ಟೆಗಳನ್ನು ಹರಿದು, ನನ್ನನ್ನು ಮರಕ್ಕೆ ಕಟ್ಟಿ ಬಿಟ್ಟು ಹೋದರು. ನಾನು ಇಡೀ ರಾತ್ರಿ ಅರೆಬೆತ್ತಲೆ ಸ್ಥಿತಿಯಲ್ಲಿಯೇ ಇದ್ದೆ. ಬೆಳಿಗ್ಗೆ ನನ್ನನ್ನು ನೋಡಿದ ಕೆಲವು ಜನರಿಗೆ ಮರದಿಂದ ಬಿಡಿಸಲು ಮನವಿ ಮಾಡಿದೆ. ಆದರೆ ಅವರ್ಯಾರೂ ನನ್ನನ್ನು ಬಿಡಿಸದೆ ಪೊಲೀಸರಿಗೆ ದೂರು ನೀಡಿದರು. ನನ್ನ ಬಟ್ಟೆ ಸಂಪೂರ್ಣವಾಗಿ ಹರಿದು ಹೋಗಿದ್ದರಿಂದ ಪೊಲೀಸರು ಬೇರೆ ಬಟ್ಟೆಯನ್ನು ನೀಡಿ ಆಸ್ಪತ್ರೆಗೆ ದಾಖಲಿಸಿದರು” ಎಂದು ಮಹಿಳೆ ತಿಳಿಸಿದ್ದಾರೆ.

ಮಹಿಳೆಯನ್ನು ಕಟ್ಟಿನಿಂದ ಬಿಡಿಸಿ ಸ್ಥಳೀಯ ಗಿರಿದಿಹ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಆರೋಗ್ಯ ಸ್ಥಿತಿ ಸಹಜವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕಾಶ್ ಸೋನಾರ್, ಶ್ರವಣ್ ಕುಮಾರ್, ರೇಖಾ ದೇವಿ ಮತ್ತು ಮುನ್ನಿ ದೇವಿ ಎಂಬ ನಾಲ್ವರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ರಾಣಾ ತಿಳಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...