ಪೊಲೀಸ್‌ ಕಸ್ಟಡಿಯಲ್ಲೇ ನಡೆದಿವೆ 275 ಅತ್ಯಾಚಾರ ಪ್ರಕರಣಗಳು: ಎನ್‌ಸಿಆರ್‌ಬಿ ಡೇಟಾ

Date:

2017 ರಿಂದ 2022ರವರೆಗೆ 275 ‘ಪೊಲೀಸ್‌ ಕಸ್ಟಡಿಯಲ್ಲಿ ಅತ್ಯಾಚಾರ’ ಪ್ರಕರಣಗಳು ದಾಖಲಾಗಿವೆ ಎಂದು ಎನ್‌ಸಿಆರ್‌ಬಿ ಅಂಕಿಅಂಶಗಳು ಹೇಳಿವೆ. ಕಾನೂನು ಜಾರಿ ವ್ಯವಸ್ಥೆಗಳಲ್ಲಿ ಸಂವೇದನೆ ಮತ್ತು ಹೊಣೆಗಾರಿಕೆಯ ಕೊರತೆಯಿಂದಾಗಿ ಇಂತಹ ದುರ್ಘಟನೆಗಳು ನಡೆಯುತ್ತಿವೆ ಎಂದು ಮಹಿಳಾ ಹಕ್ಕುಗಳ ಕಾರ್ಯಕರ್ತರು ಆರೋಪಿಸಿದ್ದಾರೆ.

- Advertisement -

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, ಈ ಪ್ರಕರಣಗಳಲ್ಲಿ ಪೊಲೀಸ್ ಸಿಬ್ಬಂದಿ, ಸಾರ್ವಜನಿಕ ಸೇವಕರು, ಸಶಸ್ತ್ರ ಪಡೆಗಳ ನೌಕರರು ಮತ್ತು ಜೈಲುಗಳು, ರಿಮಾಂಡ್ ಹೋಮ್‌ ಮತ್ತು ಆಸ್ಪತ್ರೆಗಳ ಸಿಬ್ಬಂದಿಗಳು ಅಪರಾಧಿಗಳಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಇತ್ತೀಚಿನ ವರ್ಷಗಳಲ್ಲಿ ಇಂತಹ ಪ್ರಕರಣಗಳಲ್ಲಿ ಸಂಖ್ಯೆ ಇಳಿಮುಖವಾಗಿದೆ. 2017ರಲ್ಲಿ 89, 2018ರಲ್ಲಿ 60, 2019ರಲ್ಲಿ 47, 2020ರಲ್ಲಿ 29, 2021ರಲ್ಲಿ 26 ಹಾಗೂ 2022ರಲ್ಲಿ 24 ಪ್ರಕರಣಗಳು ದಾಖಲಾಗಿವೆ” ಎಂದು ಅಂಕಿಅಂಶಗಳು ಹೇಳಿವೆ.

ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 (2) ಅಡಿಯಲ್ಲಿ ಪೊಲೀಸ್‌ ಕಸ್ಟಡಿಯಲ್ಲಿ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಸೆಕ್ಷನ್‌ – ಪೊಲೀಸ್ ಅಧಿಕಾರಿ, ಜೈಲರ್ ಅಥವಾ ಮಹಿಳೆಯ ಕಾನೂನುಬದ್ಧ ಪಾಲನೆ ಮಾಡಬೇಕಾದ ಯಾವುದೇ ವ್ಯಕ್ತಿಯಿಂದ ಎಸಗಿದ ಅತ್ಯಾಚಾರ ಅಪರಾಧಕ್ಕೆ ಸಂಬಂಧಿಸಿದೆ. ಅಲ್ಲದೆ, ನಿರ್ದಿಷ್ಟವಾಗಿ ಅಪರಾಧಿಯು ಮಹಿಳೆಯ ವಿರುದ್ಧ ಅತ್ಯಾಚಾರದ ಅಪರಾಧವನ್ನು ಎಸಗಲು ಅವರ ಅಧಿಕಾರ ಅಥವಾ ಅವರ ಸ್ಥಾನದ ದುರ್ಬಳಕೆಯ ಪ್ರಕರಣಗಳನ್ನು ಒಳಗೊಂಡಿರುತ್ತದೆ.

2017ರಿಂದ ದಾಖಲಾಗಿರುವ 275 ಕಸ್ಟಡಿಯಲ್ ಅತ್ಯಾಚಾರ ಪ್ರಕರಣಗಳಲ್ಲಿ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅಲ್ಲಿ, 92 ಪ್ರಕರಣಗಳು ದಾಖಲಾಗಿದ್ದರೆ, ಎರಡನೇ ಸ್ಥಾನದಲ್ಲಿರುವ ಮಧ್ಯಪ್ರದೇಶದಲ್ಲಿ 43 ಪ್ರಕರಣಗಳು ದಾಖಲಾಗಿವೆ.

“ಕಸ್ಟೋಡಿಯಲ್ ಪ್ರಕರಣಗಳಲ್ಲಿ ಅಪರಾಧಿಗಳು ಮಹಿಳೆಯರನ್ನು ಲೈಂಗಿಕವಾಗಿ ಒತ್ತಾಯಿಸಲು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ. ಕೌಟುಂಬಿಕ ಹಿಂಸಾಚಾರ, ಕಳ್ಳಸಾಗಾಣಿಕೆಗಳಂತಹ ಪರಿಸ್ಥಿತಿಯಲ್ಲಿ ಮಹಿಳೆಯರು ತಮ್ಮ ರಕ್ಷಣೆಗಾಗಿ ಆಡಳಿತದ ಮೊರೆ ಹೋದಾಗ, ಅವರ ಅಸಹಾಯಕತೆಯನ್ನು ಬಳಸಿಕೊಂಡು, ರಕ್ಷಣೆಯ ನೆಪದಲ್ಲಿ ಎಸಗುವ ಕೃತ್ಯವನ್ನು ಈ ಪ್ರಕರಣಗಳು ಪ್ರತಿಬಿಂಬಿಸುತ್ತವೆ” ಎಂದು ಪಾಪ್ಯುಲೇಶನ್ ಫೌಂಡೇಶನ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕಿ ಪೂನಂ ಮುತ್ರೇಜಾ ಹೇಳಿದ್ದಾರೆ.

“ಪಿತೃಪ್ರಭುತ್ವದ ಸಾಮಾಜಿಕ ನಿಯಮಗಳು, ಕಾನೂನು ಜಾರಿಯಲ್ಲಿ ಲಿಂಗ-ಸೂಕ್ಷ್ಮತೆಯ ತರಬೇತಿ ಕೊರತೆ, ಮತ್ತು ಸಂತ್ರಸ್ತೆಯ ಮೇಲೆರಗುವ ಕಳಂಕಗಳು ಕಸ್ಟಡಿಯಲ್ ಅತ್ಯಾಚಾರಕ್ಕೆ ಕಾರಣವಾಗುವ ಪ್ರಮುಖ ಅಂಶಗಳಾಗಿವೆ” ಎಂದು ಮುತ್ರೇಜಾ ಒತ್ತಿ ಹೇಳಿದ್ದಾರೆ.

“ಕಸ್ಟಡಿಯಲ್ ಅತ್ಯಾಚಾರದ ಕಾರಣಗಳು ಮತ್ತು ಪರಿಣಾಮಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಸಂತ್ರಸ್ತೆ ಕೇಂದ್ರಿತ ವಿಚಾರಣೆ, ಬಲವರ್ಧಿತ ಕಾನೂನು ಚೌಕಟ್ಟುಗಳು ಹಾಗೂ ಸಾಂಸ್ಥಿಕ ಸುಧಾರಣೆಗಳು ಸೇರಿದಂತೆ ಸರ್ಕಾರಗಳು ಬಹುಮುಖಿ ವಿಧಾನವನ್ನು ಅನುಸರಿಸುವ ತುರ್ತು ಅಗತ್ಯವಿದೆ” ಎಂದು ಅವರು ಗಮನ ಸೆಳೆದಿದ್ದಾರೆ.

“ಕಾನೂನು ಸುಧಾರಣೆ, ಕಾನೂನು ಜಾರಿಗಾಗಿ ಉತ್ತಮ ತರಬೇತಿ, ಸಾಮಾಜಿಕ ರೂಢಿಗಳಲ್ಲಿ ಬದಲಾವಣೆ – ಅದಕ್ಕಾಗಿ ಸಾಮಾಜಿಕ ಮತ್ತು ನಡವಳಿಕೆ ಬದಲಾವಣೆ ಹಾಗೂ ಸಂವಹನ ಮತ್ತು ಹೊಣೆಗಾರಿಕೆಯಲ್ಲಿ ಬಲವಾದ ಕಾರ್ಯವಿಧಾನಗಳನ್ನು ಒಳಗೊಳ್ಳಬೇಕಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸಂದೇಶ್‌ಖಾಲಿ ಪ್ರಕರಣ | ಟಿಎಂಸಿ ವಿರುದ್ಧ ಮತ ಚಲಾಯಿಸಿದ್ದಕ್ಕೆ ಆದಿವಾಸಿಗಳಿಗೆ ಚಿತ್ರಹಿಂಸೆ; ಎನ್‌ಸಿಎಸ್‌ಟಿ ವಿವರ

ಮಹಿಳಾ ನಾಯಕತ್ವದ ಸಂಘಟನೆ ‘ನ್ಗುವು’ದ ನಾಯಕಿ ಪಲ್ಲಬಿ ಘೋಷ್ ಅವರು ಪೊಲೀಸ್ ಅಧಿಕಾರಿಗಳಿಂದ ಅತ್ಯಾಚಾರಕ್ಕೆ ಒಳಗಾಗಿ, ಪ್ರಕರಣ ದಾಖಲಿಸಿದ ಸಂತ್ರಸ್ತೆಯರು ಎದುರಿಸುವ ತೊಂದರೆಗಳನ್ನು ವಿವರಿಸಿದ್ದಾರೆ.

“ಪೊಲೀಸ್ ಠಾಣೆಗಳಲ್ಲಿ ಕಸ್ಟಡಿಯಲ್ ಅತ್ಯಾಚಾರವು ತುಂಬಾ ಸಾಮಾನ್ಯವಾದ ಸನ್ನಿವೇಶವಾಗಿದೆ. ಕಿರಿಯ ಪೊಲೀಸ್ ಅಧಿಕಾರಿಗಳು, ಮಹಿಳಾ ಕಾನ್‌ಸ್ಟೆಬಲ್‌ಗಳು ಸಹ ಸಂತ್ರಸ್ತೆಯರ ಜೊತೆ ಮಾತನಾಡುವ ರೀತಿ, ಸಂತ್ರಸ್ತೆಯರ ಬಗ್ಗೆ ಅವರಿಗೆ ಯಾವುದೇ ಸಹಾನುಭೂತಿಯೂ ಇಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...