ತಮಿಳುನಾಡು| ಕಳ್ಳಭಟ್ಟಿ ಸಾರಾಯಿ ಸೇವಿಸಿ 29 ಮಂದಿ ಸಾವು

Date:

Advertisements

ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಆರಂಭದಲ್ಲಿ 25 ಮಂದಿ ಸಾವನ್ನಪ್ಪಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದರು. ಜೊತೆಗೆ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದರು. ಸದ್ಯ ಸಾವಿನ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಕಲ್ಲಾಕುರಿಚಿ ಜಿಲ್ಲಾಧಿಕಾರಿ ಎಂ.ಎಸ್.ಪ್ರಶಾಂತ್ ಅವರು ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿದ್ದಾರೆ.

Advertisements

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

“ಕಲ್ಲಾಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿ ಜನರು ಸಾವನ್ನಪ್ಪಿರುವ ಸುದ್ದಿ ಕೇಳಿ ಆಘಾತ ಮತ್ತು ದುಃಖವಾಗಿದೆ. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ಈ ಅಕ್ರಮ ಮದ್ಯ ಮಾರಾಟ ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ” ಎಂದು ಸ್ಟಾಲಿನ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಇಂತಹ ಅಪರಾಧಗಳಲ್ಲಿ ಭಾಗಿಯಾಗಿರುವವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಸಮಾಜವನ್ನು ಹಾಳುಗೆಡವುವ ಇಂತಹ ಅಪರಾಧಗಳನ್ನು ಮೊದಲು ನಾವು ಹತ್ತಿಕ್ಕುತ್ತೇವೆ” ಎಂದು ಭರವಸೆ ನೀಡಿದರು.

ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಮೃತರಿಗೆ ಸಂತಾಪ ಸೂಚಿಸಿದ್ದು, ಅನಾರೋಗ್ಯಕ್ಕೆ ಒಳಗಾಗಿರುವವರು ಶೀಘ್ರ ಗುಣಮುಖರಾಗಲಿ ಎಂದು ಹೇಳಿದ್ದಾರೆ.

“ಕಲ್ಲಕುರಿಚಿಯಲ್ಲಿ ನಕಲಿ ಮದ್ಯ ಸೇವನೆಯಿಂದ ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು ನನಗೆ ತುಂಬಾ ಆಘಾತವಾಯಿತು. ಇನ್ನೂ ಹಲವರು ಚಿಂತಾಜನಕ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಮೃತರ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಾಂತ್ವನ ಮತ್ತು ಆಸ್ಪತ್ರೆಗೆ ದಾಖಲಾದವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನ ವಿವಿಧ ಭಾಗಗಳಿಂದ ನಕಲಿ ಮದ್ಯ ಸೇವನೆಯಿಂದ ಸಾವುಗಳ ನಿರಂತರ ವರದಿಗಳ ಬಗ್ಗೆ ರಾಜ್ಯಪಾಲರು ಕಳವಳ ವ್ಯಕ್ತಪಡಿಸಿದರು.

“ನಮ್ಮ ರಾಜ್ಯದ ವಿವಿಧ ಭಾಗಗಳಲ್ಲಿ ನಕಲಿ ಮದ್ಯ ಸೇವನೆಯಿಂದ ಸಾವು ಸಂಭವಿಸುವ ಬಗ್ಗೆ ಸುದ್ದಿಗಳು ಬರುತ್ತಿದೆ. ಇದು ಅಕ್ರಮ ಮದ್ಯ ಉತ್ಪಾದನೆ ಮತ್ತು ಸೇವನೆಯನ್ನು ತಡೆಗಟ್ಟುವಲ್ಲಿ ನಮ್ಮ ನ್ಯೂನತೆಯನ್ನು ಎತ್ತಿ ತೋರಿಸುತ್ತದೆ. ಇದು ಗಂಭೀರ ಕಳವಳಕಾರಿ ವಿಷಯವಾಗಿದೆ,” ಎಂದು ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X