ಆಂಧ್ರಪ್ರದೇಶ | ಲಾರಿ ಡಿಕ್ಕಿ ಹೊಡೆದು ಆನೆ ಮರಿಗಳು ಸಾವು

Date:

  • ಆಂಧ್ರಪ್ರದೇಶ ಪಲಮನೇರು ಮಂಡಲದಲ್ಲಿ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಬಳಿ ಘಟನೆ
  • ರಾಜ್ಯದ ಪಾರ್ವತಿಪುರಂ ಜಿಲ್ಲೆಯ ಪೂಜಾರಿಗುಡ ಗ್ರಾಮಕ್ಕೆ ಆಗಮಿಸಿದ್ದ ಆನೆಗಳ ಹಿಂಡು

ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯಲ್ಲಿ ರಾತ್ರಿ ವೇಗವಾಗಿ ಬಂದ ಲಾರಿಯೊಂದು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಆನೆ ಮರಿಗಳು ಸ್ಥಳದಲ್ಲೇ ಮೃತಪಟ್ಟಿವೆ ಎಂದು ಅರಣ್ಯಾಧಿಕಾರಿಗಳು ಗುರುವಾರ (ಜೂನ್ 15) ತಿಳಿಸಿದ್ದಾರೆ.

ಚಿತ್ತೂರು ಜಿಲ್ಲೆಯ ಪಲಮನೇರು ಮಂಡಲ ಪ್ರದೇಶದಲ್ಲಿ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಬಳಿಯ ಜಗಮರ್ಲಾ ಕ್ರಾಸ್ ನಲ್ಲಿ ಬುಧವಾರ (ಜೂನ್ 14) ರಾತ್ರಿ ಈ ಅಪಘಾತ ಸಂಭವಿಸಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ತನಿಖೆ ಆರಂಭಿಸಿದ್ದಾರೆ.

ತಮ್ಮ ತಾಯಿಯ ಜೊತೆ ಮರಿ ಆನೆಗಳು ಹೆದ್ದಾರಿ ದಾಟುತ್ತಿದ್ದ ವೇಳೆ ಲಾರಿ ಚಾಲಕ ಕುಡಿದ ಅಮಲಿನಲ್ಲಿ ಡಿಕ್ಕಿ ಹೊಡೆದಿದ್ದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆಂಧ್ರಪ್ರದೇಶ ಅರಣ್ಯಾಧಿಕಾರಿ ಚೈತನ್ಯ ಕುಮಾರ್‌ ರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮೃತ ಆನೆ ಮರಿಗಳಲ್ಲಿ ಒಂದು ಹೆಣ್ಣು ಹಾಗೂ ಎರಡು ಗಂಡು ಅನೆಗಳು ಸೇರಿವೆ. ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದೇವೆ ಎಂದು ಚೈತನ್ಯ ಕುಮಾರ್ ರೆಡ್ಡಿ ಹೇಳಿದ್ದಾರೆ. ಟ್ರಕ್ ಚಾಲಕರ ಅತಿ ವೇಗದ ಚಾಲನೆ ಇಂತಹ ಅವಘಡಗಳಿಗೆ ಕಾರಣವಾಗುತ್ತವೆ ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದಾರೆ.

“ಘಟನೆಗೆ ಸಂಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣವೊಂದನ್ನು ದಾಖಲಿಸಲಾಗಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಂಧ್ರಪ್ರದೇಶ ಗ್ರಾಮವೊಂದಕ್ಕೆ ನೀರು ಕುಡಿಯಲು ಆನೆಗಳ ಹಿಂಡು ನುಗ್ಗುತ್ತಿರುವ ವಿಡಿಯೋವೊಂದು ಈ ಮುನ್ನ ವೈರಲ್‌ ಆಗಿತ್ತು. ಆನೆಗಳ ಹಿಂಡು ಬುಧವಾರ ಬೆಳಗ್ಗೆ ರಾಜ್ಯದ ಪಾರ್ವತಿಪುರಂ ಜಿಲ್ಲೆಯ ಪೂಜಾರಿಗುಡ ಗ್ರಾಮಕ್ಕೆ ಆಗಮಿಸಿತ್ತು.

ಈ ಸುದ್ದಿ ಓದಿದ್ದೀರಾ? ಮಣಿಪುರ ಸಚಿವೆ ನಿವಾಸಕ್ಕೆ ಬೆಂಕಿ: ಭದ್ರತಾ ಪಡೆಯಿಂದ ಶೋಧ ಕಾರ್ಯ

ಗ್ರಾಮಸ್ಥರು ಸಂಗ್ರಹಿಸಿಟ್ಟ ಎರಡು ಬಕೆಟ್‌ಗಳಲ್ಲಿ ಆನೆಗಳು ನೀರು ಕುಡಿಯುತ್ತಿರುವುದು ವಿಡಿಯೋದಲ್ಲಿ ಕಾಣಿಸಿತ್ತು. ಆಂಧ್ರಪ್ರದೇಶ ಗ್ರಾಮದಲ್ಲಿ ಆನೆಗಳು ಆಗಮಿಸಿದ್ದು ಜನರಲ್ಲಿ ಭೀತಿ ಮೂಡಿಸಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು. ಆನೆಗಳನ್ನು ಮರಳಿ ಕಾಡಿಗೆ ಕರೆತರಲು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಹೇಳಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಶಿಕ್ಷಕರ ವಜಾಕ್ಕೆ ತಡೆ ನೀಡಿದ ಸುಪ್ರೀಂ

ಪಶ್ಚಿಮ ಬಂಗಾಳದ ಶಾಲೆಗಳಿಗೆ ನೇಮಕಗೊಂಡ 25 ಸಾವಿರ ಬೋಧಕ ಹಾಗೂ ಬೋಧಕೇತರ...

ಹರಿಯಾಣ | ಬೆಂಬಲ ವಾಪಸ್‌ ಪಡೆದ ಮೂವರು ಪಕ್ಷೇತರ ಶಾಸಕರು; ಬಹುಮತ ಕಳೆದುಕೊಂಡ ಬಿಜೆಪಿ ಸರ್ಕಾರ

ಲೋಕಸಭೆ ಚುನಾವಣೆಯ ನಡುವೆ ಹರಿಯಾಣ ದ ಬಿಜೆಪಿ ಸರ್ಕಾರಕ್ಕೆ ರಾಜಕೀಯ ಅನಿಶ್ಚಿತತೆ...

ಮೋದಿಯ ಇಂದಿನ ಸುಳ್ಳುಗಳು | ಅಂಬೇಡ್ಕರ್‌ ಹೆಸರಿನಲ್ಲಿ ಚುನಾವಣಾ ವ್ಯಾಪಾರ ಮಾಡುತ್ತಿದ್ದಾರಾ ಮೋದಿ?

ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಕಾಂಗ್ರೆಸ್...

ಕಲ್ಕತ್ತಾ ಹೈಕೋರ್ಟ್ ಮಾಜಿ ನ್ಯಾಯಾಧೀಶರ ವಿರುದ್ಧ ಎಫ್‌ಐಆರ್‌ ದಾಖಲು

ಬಿಜೆಪಿ ನಾಯಕ ಹಾಗೂ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ...