ಒಡಿಶಾದ ಪುರಿಯ ಶ್ರೀ ಗುಂಡಿಚಾ ದೇವಸ್ಥಾನದ ಬಳಿ ಭಾನುವಾರ ಬೆಳಿಗ್ಗೆ ಕಾಲ್ತುಳಿತ ಸಂಭವಿಸಿ ಮೂವರು ಭಕ್ತರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ.
ಭಾನುವಾರ ಬೆಳಗಿನ ಜಾವ 4.30 ರ ಸುಮಾರಿಗೆ ಶ್ರೀ ಗುಂಡಿಚಾ ದೇವಸ್ಥಾನದ ಮುಂದೆ ದೇವರ ದರ್ಶನ ಪಡೆಯಲು ಸಾವಿರಾರು ಭಕ್ತರು ಸೇರಿದ್ದಾಗ, ಕಾಲ್ತುಳಿತ ಸಂಭವಿಸಿದೆ.
ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಆರು ಜನರ ಸ್ಥಿತಿ ಗಂಭೀರವಾಗಿದೆ ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಎಸ್ ಸ್ವೈನ್ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಹರಂ ನಿಷೇಧ; ರಾಯಚೂರು ಜಿಲ್ಲಾಧಿಕಾರಿ ಕೊಟ್ಟ ಸಂದೇಶವೇನು?
ಮೃತರನ್ನು ಬಸಂತಿ ಸಾಹು , ಪ್ರೇಮಕಾಂತ್ ಮೊಹಂತಿ ಮತ್ತು ಪ್ರವತಿ ದಾಸ್ ಎಂದು ಗುರುತಿಸಲಾಗಿದೆ.
ಘಟನೆಯ ಬಗ್ಗೆ ತನಿಖೆ ಆರಂಭಿಸಲಾಗಿದ್ದು, ಸ್ಥಳೀಯ ಆಡಳಿತವು ಪರಿಸ್ಥಿತಿಯ ಮೇಲೆ ನಿಗಾ ಇಡುತ್ತಿದೆ. ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಗಾಯಾಳುಗಳಿಗೆ ಪರಿಹಾರ ಒದಗಿಸಲು ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.