ಪಶ್ಚಿಮ ಬಂಗಾಳ | ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ: ಮೂರು ಆನೆಗಳು ಸಾವು

Date:

ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ಮೂರು ಆನೆಗಳು ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ ಜಾರ್‌ಗ್ರಾಮ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಅರಣ್ಯ ಇಲಾಖೆ ಬೆಂಬಲಿತ ಹುಲಾ ಗುಂಪು ಆನೆಗಳನ್ನು ಓಡಿಸಲು ಯತ್ನಿಸುತ್ತಿದ್ದಾಗ ತಾಯಿ ಮತ್ತು ಮರಿ ಸೇರಿದಂತೆ ಮೂರು ಆನೆಗಳಿಗೆ ರೈಲು ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

- Advertisement -

ಜಾರ್‌ಗ್ರಾಮ ಪಟ್ಟಣದಿಂದ ಸುಮಾರು 14 ಕಿ.ಮೀ ದೂರದಲ್ಲಿರುವ ಆಗ್ನೇಯ ರೈಲ್ವೆಯ ಖರಗ್‌ಪುರ ವಿಭಾಗದ ಬನ್‌ಸ್ತಲಾ ರೈಲ್ವೆ ನಿಲ್ದಾಣದ ಬಳಿ ಖರಗ್‌ಪುರಕ್ಕೆ ಹೋಗುವ ಜನಶತಾಬ್ದಿ ಎಕ್ಸ್‌ಪ್ರೆಸ್ ಬೆಳಗಿನ ಜಾ 1:45ರ ಸುಮಾರಿಗೆ ಆನೆಗಳಿಗೆ ಡಿಕ್ಕಿ ಹೊಡೆದಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಮಮತಾ ಬ್ಯಾನರ್ಜಿ ತಮ್ಮ ಸ್ವಂತ ತಂದೆಯನ್ನು ಮೊದಲು ಪತ್ತೆ ಹಚ್ಚಲಿ: ಬಿಜೆಪಿ ಸಂಸದನ ವಿವಾದಾತ್ಮಕ ಹೇಳಿಕೆ

ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ರಾಜ್ಯ ಅರಣ್ಯ ಸಚಿವ ಬಿರ್‌ಬಹಾ ಹನ್ಸ್‌ದ, “ಇದು ಅತ್ಯಂತ ದುಃಖಕರ ಘಟನೆ. ವೈಯಕ್ತಿಕವಾಗಿಯೂ ಸಹ, ನಾನು ತುಂಬಾ ಅಸಮಾಧಾನಗೊಂಡಿದ್ದೇನೆ. ಒಂದು ತಾಯಿ ಆನೆ, ಒಂದು ಮರಿ ಮತ್ತು ಇನ್ನೊಂದು ವಯಸ್ಕ ಆನೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದೆ. ನಾನು ಶೀಘ್ರದಲ್ಲೇ ಸ್ಥಳಕ್ಕೆ ಭೇಟಿ ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ಇನ್ನು ಆ ಪ್ರದೇಶದಲ್ಲಿ ಆನೆ ಓಡಾಟ ನಡೆಸುತ್ತಿರುವ ಬಗ್ಗೆ ರೈಲ್ವೆಗೆ ಗಂಟೆಗಳ ಹಿಂದೆಯೇ ತಿಳಿಸಲಾಗಿತ್ತು ಎಂದು ವರದಿಯಾಗಿದೆ. ಈ ಬಗ್ಗೆಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಸಚಿವರು ಪ್ರತಿಕ್ರಿಯಿಸಿದ್ದಾರೆ. “ರಾತ್ರಿ 11 ಗಂಟೆ ಸುಮಾರಿಗೆ ನಾವು ರೈಲ್ವೆ ಇಲಾಖೆಗೆ ಮಾಹಿತಿ ನೀಡಿದೆವು. ಆದರೂ ಘಟನೆ ಸಂಭವಿಸಿದೆ. ನಾವು ತನಿಖೆಗೆ ಆದೇಶಿಸಿದ್ದೇವೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿವಾದ: ಕುಂದಾಪುರದ ಲೇಖಕನ ಕೃತಿಗೆ ದೊರೆತ ಪ್ರಶಸ್ತಿಯ ಹಿಂದೆ ವಂಚನೆ, ಲಾಬಿ ಶಂಕೆ

ಕುಂದಾಪುರ ಮೂಲದ ಲೇಖಕ ಪ್ರದೀಪ್ ಕೆಂಚನೂರು ಅವರ ‘ನಾನಿರುವುದೆ ನಿಮಗಾಗಿ ನಾಡಿರುವುದೆ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...