ವರ್ಷಕ್ಕೆ 3 ಉಚಿತ ಎಲ್‌ಪಿಜಿ; ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ: ತ.ನಾಡು ಸಿಎಂ ವಿಜಯ್ ಘೋಷಣೆ

Date:

ತಮಿಳುನಾಡು ವಿಧಾನಸಭೆಯಲ್ಲಿ ಸೋಮವಾರ ನಿಯಮ 110 ರ ಅಡಿಯಲ್ಲಿ ಮಹತ್ವದ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ರಾಜ್ಯದ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಬಡ ಕುಟುಂಬಗಳಿಗೆ ಅನುಕೂಲವಾಗುವ ಹಲವು ಕಲ್ಯಾಣ ಯೋಜನೆಗಳನ್ನು ಘೋಷಿಸಿದ್ದಾರೆ.

- Advertisement -

ತಮಿಳುಗ ವೆಟ್ರಿ ಕಳಗಂ (TVK) ಚುನಾವಣಾ ಭರವಸೆಯಂತೆ ‘ಅನ್ನಪೂರ್ಣಿ ಸೂಪರ್ ಸಿಕ್ಸ್’ ಯೋಜನೆಯ ಮೊದಲ ಹಂತವಾಗಿ, ಅರ್ಹ ಕುಟುಂಬಗಳಿಗೆ ವರ್ಷಕ್ಕೆ 3 ಉಚಿತ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳನ್ನು ನೀಡುವುದಾಗಿ ವಿಜಯ್ ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ತಮಿಳುನಾಡು ಚುನಾವಣೆ | ಪುರುಷರಿಗೂ ಉಚಿತ ಬಸ್‌ ಪ್ರಯಾಣ: ಎಐಎಡಿಎಂಕೆ ಭರವಸೆ

₹2.5 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಸುಮಾರು 1.30 ಕೋಟಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು, ಸಣ್ಣ-ಸೂಕ್ಷ್ಮ ರೈತರ ಹಾಗೂ ವಿಕಲಚೇತನರ ಕುಟುಂಬಗಳು ಇದರ ಲಾಭ ಪಡೆಯಲಿವೆ. ಗ್ರಾಹಕರು ಸಿಲಿಂಡರ್ ಕಾಯ್ದಿರಿಸಿ ಪಡೆದ ನಂತರ, ಆ ಹಣವನ್ನು ಸರ್ಕಾರ ನೇರವಾಗಿ ಮಹಿಳಾ ಯಜಮಾನಿಯರ ಬ್ಯಾಂಕ್ ಖಾತೆಗೆ (DBT) ಜಮೆ ಮಾಡಲಿದೆ. ಈ ಯೋಜನೆ 2027ರ ಪೊಂಗಲ್ ಹಬ್ಬದಿಂದ ಆರಂಭಗೊಳ್ಳಲಿದ್ದು, ಸರ್ಕಾರದ ಖಜಾನೆಗೆ ವರ್ಷಕ್ಕೆ ₹4,000 ಕೋಟಿ ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.

ಮಹಿಳೆಯರ ಉಚಿತ ಬಸ್ ಪ್ರಯಾಣದ ಯೋಜನೆಯನ್ನು ಮತ್ತಷ್ಟು ವಿಸ್ತರಿಸಲಾಗಿದ್ದು, ಇದನ್ನು ‘ವೆಟ್ರಿ ಪಯಣಂ’ (ವಿಜಯದ ಪಯಣ) ಎಂದು ಮರುನಾಮಕರಣ ಮಾಡಲಾಗಿದೆ. ಇಲ್ಲಿಯವರೆಗೆ ಸಾಮಾನ್ಯ ನಗರ ಬಸ್‌ಗಳಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಪ್ರಯಾಣವನ್ನು, ಇನ್ಮುಂದೆ ಎಕ್ಸ್‌ಪ್ರೆಸ್, ಎಲ್‌ಎಸ್‌ಎಸ್ ಹಾಗೂ ಡಿಲಕ್ಸ್ ಬಸ್‌ಗಳಿಗೂ ವಿಸ್ತರಿಸಲಾಗಿದೆ. ಜಿಲ್ಲಾಂತರ (Mofussil) ಹಾಗೂ ಗುಡ್ಡಗಾಡು ಪ್ರದೇಶಗಳ ಸಾಮಾನ್ಯ ದರದ ಬಸ್‌ಗಳಲ್ಲೂ ಉಚಿತವಾಗಿ ಪ್ರಯಾಣಿಸಬಹುದು. ಇದೇ ಮೊದಲ ಬಾರಿಗೆ ಲಿಂಗತ್ವ ಅಲ್ಪಸಂಖ್ಯಾತರಿಗೂ (Transgender) ಸಂಪೂರ್ಣ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ ಅಪರೂಪದ ಕಲಾವಿದ

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ...

ವಿಜಯಪುರ | ಅಕ್ಟೋಬರ್ 4ನೇ ವಾರದಲ್ಲಿ ನಶಾ ಮುಕ್ತ ಭಾರತ ಅಭಿಯಾನ: ಜಿಲ್ಲಾಧಿಕಾರಿ ಆನಂದ ಕೆ

ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಯುವಜನತೆಯನ್ನು...

ಅವಳ ಕಣ್ಣೋಟ | ಡೊರೊಥಿ- ಸ್ವೀಕಾರದಾಚೆಗೆ, ಒಳಗೊಳ್ಳುವಿಕೆಯ ಕಡೆಗೆ…

ಇದೊಂದು ಪರಿಪೂರ್ಣ ಸಿನಿಮಾ ಅಲ್ಲ. ಕೆಲವು ತಿರುವುಗಳು ಸರಳವಾಗಿವೆ. ಕೆಲವು ಪಾತ್ರಗಳು...