ನಕಲಿ ಆಧಾರ್ ಕಾರ್ಡ್ ಬಳಸಿ ಸಂಸತ್‌ ಭವನ ಪ್ರವೇಶಿಸಲು ಯತ್ನಿಸಿದ ಮೂವರ ಬಂಧನ

Date:

ಉನ್ನತ ಮಟ್ಟದ ಭದ್ರತೆ ಹೊಂದಿದ್ದ ಸಂಸತ್‌ ಭವನದ ಸಂಕೀರ್ಣಕ್ಕೆ ನಕಲಿ ಆಧಾರ್‌ ಬಳಸಿ ಪ್ರವೇಶಿಸಲು ಯತ್ನಿಸಿದ್ದ ಮೂವರು ಕಾರ್ಮಿಕರನ್ನು ಸಿಐಎಸ್‌ಎಫ್‌ ಸಿಬ್ಬಂದಿ ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ನಂತರ ದೆಹಲಿ ಪೊಲೀಸ್‌ ವಶಕ್ಕೆ ನೀಡಲಾಯಿತು. ಬಂಧಿತರನ್ನು ಖಾಸೀಂ, ಮೊನೀಸ್ ಹಾಗೂ ಶೊಯೆಬ್‌ ಎಂದು ಗುರುತಿಸಲಾಗಿದ್ದು, ಇವರ ವಿರುದ್ಧ ವಂಚನೆ ಹಾಗೂ ನಕಲಿ ಆರೋಪ ಸೇರಿದಂತೆ ಹಲವು ಐಪಿಸಿ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ನಿಯಮಿತ ಭದ್ರತಾ ತಪಾಸಣೆಯ ವೇಳೆ ಸಂಸತ್ತಿನ ವಿದ್ಯನ್ಮಾನ ಪ್ರವೇಶ ದ್ವಾರದ ಬಳಿ ಸಿಐಎಸ್‌ಎಫ್‌ ಸಿಬ್ಬಂದಿ ಮೂವರನ್ನು ಬಂಧಿಸಿದ್ದಾರೆ. ಸಿಐಎಸ್‌ಎಫ್‌ ಸಿಬ್ಬಂದಿ ಪರಿಪೂರ್ಣವಾಗಿ ಗಮನಿಸಿದ ನಂತರ ಆಧಾರ್‌ ಕಾರ್ಡ್‌ ನಕಲಿ ಎಂದು ತಿಳಿದು ಬಂದಿದೆ.

ಬಂಧಿತರು ನಿರ್ಮಾಣ ಕಾಮಗಾರಿಯ ಉದ್ಯೋಗಿಗಳಾಗಿದ್ದು, ಸಂಸತ್‌ ಸಂಕೀರ್ಣದ ಒಳಭಾಗದಲ್ಲಿ ನಿರ್ಮಿಸಲಾಗುತ್ತಿದ್ದ ಸಂಸದರ ವಿಶ್ರಾಂತಿ ಕೋಣೆಯ ನಿರ್ಮಾಣಕ್ಕೆ ಆಗಮಿಸಿದ್ದರು. ದೇ ವೀ ಪ್ರಾಜೆಕ್ಟ್ಸ್‌ ಲಿ. ಸಂಸ್ಥೆ ಈ ನಿರ್ಮಾಣದ ಗುತ್ತಿಗೆಯನ್ನು ಪಡೆದುಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...