ಮಧ್ಯಪ್ರದೇಶ | ಒಂದೇ ಕುಟುಂಬದ ಮೂವರು ಮಹಿಳೆಯರು, ಓರ್ವ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆ

Date:

ಒಂದೇ ಕುಟುಂಬದ ಮೂವರು ಮಹಿಳೆಯರು ಮತ್ತು ಬಾಲಕಿ ಬಾವಿಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಡಿಯೋರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

- Advertisement -

ಮೃತರಲ್ಲಿ ಇಬ್ಬರು ಸಹೋದರಿಯಾಗಿದ್ದಾರೆ. ಇವರಿಬ್ಬರು ಹತ್ತಿರದ ಮರದ ಕಂಬಕ್ಕೆ ಕಟ್ಟಲಾದ ಹಗ್ಗಗಳಿಂದ ಬಾವಿಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇನ್ನುಳಿದಂತೆ ಅದೇ ಕುಟುಂಬದ ಮತ್ತೋರ್ವ ಮಹಿಳೆ ಮತ್ತು ಆಕೆಯ ಆರು ವರ್ಷದ ಮಗುವಿನ ಮೃತದೇಹವನ್ನು ನೀರಿನಲ್ಲಿ ಕಂಡುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಳೆದ ರಾತ್ರಿ ಊಟದ ನಂತರ ಕುಟುಂಬದ ಸದಸ್ಯರೆಲ್ಲರೂ ಮಲಗಿದ್ದರು. ಮೃತ ಮಹಿಳೆಯೊಬ್ಬರ ಪತಿ ಎದ್ದು ನೋಡಿದಾಗ ತನ್ನ ಪತ್ನಿ ಇಲ್ಲದಿರುವುದನ್ನು ಗಮನಿಸಿದ್ದಾರೆ. ಆಕೆಯನ್ನು ಹುಡುಕಿದಾಗ ಬಾವಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ ಎಂದು ಪತಿ ತಿಳಿಸಿದ್ದಾರೆ” ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ಲೋಕೇಶ್ ಸಿನ್ಹಾ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಮದುವೆಯಾಗುವುದಾಗಿ ನಂಬಿಸಿ 77 ಮಹಿಳೆಯರಿಗೆ ವಂಚನೆ; ದುಷ್ಕರ್ಮಿ ಬಂಧನ

ಒಟ್ಟು ಮೂವರು ಮಹಿಳೆಯರು ಮತ್ತು ಓರ್ವ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಅವರ ಮೃತ ದೇಹವನ್ನು ಹೊರತೆಗೆಯಲಾಗಿದೆ. ಎಲ್ಲಾ ಕೋನಗಳಿಂದ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಒಂದೇ ಕುಟುಂಬದ ಮೂವರು ಮಹಿಳೆಯರು ಮತ್ತು ಆರು ವರ್ಷದ ಬಾಲಕಿ ಸೇರಿ ಎಲ್ಲ ಹೆಣ್ಣು ಮಕ್ಕಳೇ ಸಾವನ್ನಪ್ಪಿರುವುದು ತೀವ್ರ ಅನುಮಾನಕ್ಕೆ ಕಾರಣವಾಗಿದೆ. ಇದು ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬುದು ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ತಿಳಿದುಬರಲಿದೆ.

ಕುಟುಂಬ ಸದಸ್ಯರೊಂದಿಗೆ ಪೊಲೀಸರು ನಡೆಸಿದ ಪ್ರಾಥಮಿಕ ವಿಚಾರಣೆಯಲ್ಲಿ ಶುಕ್ರವಾರ ಸಂಜೆ ಕುಟುಂಬ ಸದಸ್ಯರ ನಡುವೆ ಜಗಳ ನಡೆದಿರುವುದು ಬೆಳಕಿಗೆ ಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...