ಆಹಾರವಿಲ್ಲದೆ 9 ದಿನ ಬದುಕಿ ಹೊರಬಂದ ಕೊಳವೆ ಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕಿ

Date:

ಕೊಳವೆ ಬಾವಿಗೆ ಬಿದ್ದದ್ದ 3 ವರ್ಷದ ಬಾಲಕಿಯನ್ನು ರಕ್ಷಣಾ ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ. 9 ದಿನಗಳ ಕಾಲ ಆಹಾರ-ನೀರು ಇಲ್ಲದೆಯೇ ಬಾಲಕಿ ಜೀವ ಉಳಿಸಿಕೊಂಡು ಬದುಕಿ ಹೊರಬಂದಿದ್ದಾಳೆ.

- Advertisement -

ರಾಜಸ್ಥಾನದ ಕೊಟ್‌ಪುಟ್ಲಿ ಜಿಲ್ಲೆಯ ಸರುಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡಿಯಾಲಿ ಧಾನಿ ಎಂಬ ಗ್ರಾಮದಲ್ಲಿ 9 ದಿನಗಳ ಹಿಂದೆ (ಡಿ.23) ಬಾಲಕಿ ತೋಟದಲ್ಲಿ ಆಟವಾಡುವಾಗ 150 ಅಡಿ ಆಳದ ಕೊಳವೆ ಬಾವಿಗೆ ಬಿದಿದ್ದಳು. ಆಕೆಯನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಾಲಕಿಯನ್ನು ಆರಂಭದಲ್ಲಿ ರಿಂಗ್ ಸಹಾಯದಿಂದ ಹೊರತೆಗೆಯಲು ಪ್ರಯತ್ನಿಸಲಾಗಿತ್ತು. ಆದರೆ, ಆ ಪ್ರಯತ್ನ ವಿಫಲವಾಗಿತ್ತು. ಜಿಲ್ಲಾಡಳಿತವು ತಮ್ಮ ಮಗಳನ್ನು ರಕ್ಷಿಸುವಲ್ಲಿ ತ್ವರಿತ ಕಾರ್ಯಾಚರಣೆ ನಡೆಸಲು ನಿರ್ಲಕ್ಷ್ಯ ತೋರುತ್ತಿದೆ ಎಂದು ಆಲಕಿಯ ಪೋಷಕರು ಆರೋಪಿಸಿದ್ದರು. ಆದರೆ, ಕಾರ್ಯಾಚರಣೆ ಕಠಿಣವಾಗಿದೆ. ಎಲ್ಲ ರೀತಿಯಲ್ಲೂ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದರು.

ಕಾರ್ಯಾಚರಣೆ ಕಠಿಣವಾಗಿದ್ದರಿಂದ ರಕ್ಷಣಾ ತಂಡಗಳು ಕೊಳವೆ ಬಾವಿಗೆ ಸಮಾನಾಂತರ ಸುರಂಗ ಕೊರೆಯಲು ಆರಂಭಿಸಿದ್ದವು. ಇದೀಗ, ಸತತ 9 ದಿನಗಳ ಕಾರ್ಯಾಚರಣೆ ಬಳಿಕ, ಬಾಲಕಿಯನ್ನು ರಕ್ಷಿಸಲಾಗಿದೆ.

160 ಗಂಟೆಗಳ ಕಾಲ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಬಾಲಕಿ ಜೀವಂತವಾಗಿದ್ದು, ಕುಟುಂಬಸ್ಥರನ್ನು ಸೇರಿಕೊಂಡಿದ್ದಾಳೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...