ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತವಾಗಿದೆ.
ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸೆಕ್ಟರ್ 2 ರಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವಾರು ಜನರು ತಮ್ಮ ಕುಟುಂಬದವರಿಂದ ಬೇರ್ಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬೆಳೆಸಿದ ಮಧ್ಯಮವರ್ಗ; ಮಧ್ಯಮವರ್ಗ ಮುಗಿಸಿದ ಮೋದಿ
ರೋಗಿಗಳನ್ನು ಆಸ್ಪತ್ರೆಗೆ ಕರೆತರಲು ಆಂಬ್ಯುಲೆನ್ಸ್ ವಾಹನಗಳು ಸಾಕಷ್ಟು ತೊಂದರೆ ಅನುಭವಿಸುತ್ತಿವೆ. ಎಲ್ಲ ರಸ್ತೆಗಳಲ್ಲೂ ಜನಜಂಗುಳಿ ಕಾಣಿಸುತ್ತಿದೆ. ಸ್ನಾನಘಟ್ಟದ ಬಳಿ ನೆರೆದಿದ್ದ ಜನಜಂಗುಳಿಯಿಂದ ಕೆಲ ಮಹಿಳೆಯರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಮಹಾಕುಂಭದಲ್ಲಿ ನೆರೆದಿದ್ದ ಅಪಾರ ಭಕ್ತಾದಿಗಳಿಂದ ಪರಿಸ್ಥಿತಿ ಹತೋಟಿ ತಪ್ಪಿದೆ.
