ಮಹಾಕುಂಭ ಮೇಳದಲ್ಲಿ 300 ಕಿ.ಮೀ. ಸಂಚಾರ ದಟ್ಟಣೆ; ಫಜೀತಿಗೆ ಸಿಲುಕಿದ ಯಾತ್ರಾರ್ಥಿಗಳು

Date:

ಉತ್ತರಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆ 200 ರಿಂದ 300 ಕಿ.ಮೀ.ಗಳಷ್ಟು ದೂರ ಸಂಚಾರ ದಟ್ಟಣೆ ಉಂಟಾಗಿದೆ ಎಂದು ವರದಿಯಾಗಿದೆ.

- Advertisement -

ಮಹಾಕುಂಭ ಮೇಳದಲ್ಲಿ ಭಾಗವಹಿಸಲು ಲಕ್ಷಗಟ್ಟಲೆ ಯಾತ್ರಾರ್ಥಿಗಳು ಆಗಮಿಸುತ್ತಿದ್ದು, ಮಧ್ಯಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ನೂರಾರು ಕಿಲೋಮೀಟರ್‌ಗಳಷ್ಟು ದೂರದಲ್ಲಿ ಮುಂದಕ್ಕೆ ಪ್ರಯಾಣ ಸಾಧ್ಯವಾಗದೆ ಭಕ್ತರು ದಿನಗಟ್ಟಲೆ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದಾರೆ. ಪ್ರಯಾಗ್ ರಾಜ್‌ನಿಂದ ಮಧ್ಯಪ್ರದೇಶದ ರೇವಾ, ಜಬಲ್ ಪುರ,ಸಿಯೋನಿ, ಕಟ್ನಿವರೆಗೆ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬಸಂತ್ ಪಂಚಮಿಯ ಶಾಹಿ ಸ್ನಾನದ ನಂತರ ಜನಸ್ತೋಮ ಕಡಿಮೆಯಾಗಬಹುದು ಎಂದು ಹೇಳಲಾಗಿತ್ತು. ಆದರೆ ಫೆ.12ರ ಶಾಹಿ ಸ್ನಾನಕ್ಕಾಗಿ ಲಕ್ಷಾಂತರ ಮಂದಿ ಪ್ರಯಾಗ್ ರಾಜ್‌ಗೆ ಆಗಮಿಸಿದ್ದಾರೆ. ಜನಸಂದಣಿಯನ್ನು ತಡೆಯಲು ಪ್ರಯಾಗ್ ರಾಜ್ ಕಡೆಗೆ ಹೋಗುವ ಹಲವಾರು ವಾಹನಗಳನ್ನು ವಿವಿಧ ಪ್ರದೇಶಗಳಲ್ಲಿ ತಡೆ ಹಿಡಿಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಗಡಿಯಲ್ಲಿ ಕಟ್ನಿಯಲ್ಲಿ ಸುಮಾರು 250 ಕಿಲೋಮೀಟರ್ ಗಳಷ್ಟು ದೂರದಲ್ಲಿ ಟ್ರಾಫಿಕ್ ಜಾಮ್ ಆಗಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಹೇಳಿಕೊಂಡಿದ್ದಾರೆ. ಮಹಾಕುಂಭ ಮೇಳಕ್ಕೆ ಹೆಚ್ಚಿನ ಭಕ್ತರ ಆಗಮನದಿಂದ ಸಾಕಷ್ಟು ಸಂಚಾರ ದಟ್ಟಣೆಯಿತ್ತು ಎಂದು ರೇವಾ ವಲಯದ ಪೊಲೀಸ್ ಮಹಾನಿರೀಕ್ಷಕ ಸಾಕೇತ್ ಪ್ರಕಾಶ್ ಪಾಂಡೆ ಹೇಳಿದ್ದಾರೆ.

ವಾಹನಗಳು ಎರಡು ದಿನಗಳಿಂದ ಸಂಚಾರ ದಟ್ಟಣೆಗೆ ಸಿಲುಕಿವೆ. ಕೇವಲ 50 ಕಿ.ಮೀ ಚಲಿಸಲು 10 ರಿಂದ 12 ಗಂಟೆ ಸಮಯವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸುದೀರ್ಘ ವಿಚಾರಣಾಧೀನ ಬಂಧನ ‘ಶಿಕ್ಷೆ’ಯಾಗದಿರಲಿ: ₹979 ಕೋಟಿ ಹಗರಣದ ಆರೋಪಿಗಳಿಗೆ ಸುಪ್ರೀಂ ಜಾಮೀನು

​₹979.45 ಕೋಟಿ ಮೌಲ್ಯದ ಸರ್ಕಾರಿ ಗುತ್ತಿಗೆಗಳನ್ನು ಪಡೆಯಲು ವಂಚನೆ ಹಾಗೂ ಅಕ್ರಮ...

ಏಕನಾಥ ಶಿಂಧೆ ಒಲಿಸಿಕೊಳ್ಳಲು 500 ಕೋಟಿ ಹಣ ನೀಡಿದ ಬಿಜೆಪಿ: ಜಾರಂಗೆ ಪಾಟೀಲ್ ಬಿಡುಗಡೆ ಮಾಡಿದ ಆಡಿಯೋ ಕ್ಲಿಪ್

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಬಿಡುಗಡೆ ಮಾಡಿರುವ ವಿವಾದಾತ್ಮಕ ಆಡಿಯೊ...

ಅರುಣಾಚಲ ಗಡಿಯ ಹಲವೆಡೆ ಚೀನಾ ಸೇನೆ ಜೊತೆ ಸಂಘರ್ಷ ಮುಂದುವರಿಕೆ: ಐಟಿಬಿಪಿ ಮಹಾನಿರ್ದೇಶಕ

ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಚೀನಾ ಸೇನೆಯ ಜೊತೆಗಿನ ಮುಖಾಮುಖಿ ಹಾಗೂ...