ಮಹಾರಾಷ್ಟ್ರ | ಪ್ರಸಾದ ಸೇವಿಸಿ 300 ಮಂದಿ ಅಸ್ವಸ್ಥ; ರಸ್ತೆಯಲ್ಲೇ ಚಿಕಿತ್ಸೆ

Date:

ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಸೋಮ್‌ಥಾನಾ ಗ್ರಾಮದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಪ್ರಸಾದ ಸೇವಿಸಿ ಸುಮಾರು 300ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ದೇಗುಲದಲ್ಲಿ ಒಂದು ವಾರ ನಡೆಯುವ ಹರಿರಾಮ್ ಸಂಪತ್ ಧಾರ್ಮಿಕ ಕಾರ್ಯಕ್ರಮದ ಕೊನೆಯ ದಿನವಾದ ಇಂದು ಸ್ಥಳೀಯ ಸೋಮ್‌ಥಾನಾ ಹಾಗೂ ಕಪ್ರಖೇಡ್ ಹಳ್ಳಿಗಳ ಗ್ರಾಮಸ್ಥರು ಫೆ.20 ರಂದು ರಾತ್ರಿ 10 ಗಂಟೆಗೆ ಪ್ರಸಾದ ಸೇವಿಸಿದ ನಂತರ ಹೊಟ್ಟೆ ನೋವು, ವಾಂತಿ, ವಾಕರಿಗೆ ತೊಂದರೆಯುಂಟಾಗಿದೆ.

ಅಸ್ವಸ್ಥಗೊಂಡವರನ್ನು ಬಿಬಿ ಗ್ರಾಮದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಹಾಸಿಗೆಗಳ ಕೊರತೆಯಿಂದ ಬಹುತೇಕ ರೋಗಿಗಳನ್ನು ರಸ್ತೆಯ ಹೊರಗಡೆಯೆ ಚಿಕಿತ್ಸೆ ನೀಡಲಾಯಿತು. ರೋಗಿಗಳಿಗೆ ನೀಡುವ ಸಲೈನ್‌ ಬಾಟಲ್‌ಗಳನ್ನು ಮರಗಳ ಸಹಾಯದೊಂದಿಗೆ ಹಗ್ಗಕ್ಕೆ ನೇತುಹಾಕಿ ಚಿಕಿತ್ಸೆ ನೀಡಲಾಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

“ಸೋಮ್‌ಥಾನಾದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದ 6ನೇ ದಿನ ಇದಾಗಿದೆ.ಪ್ರಸಾದವನ್ನು 400 ರಿಂದ 500 ಮಂದಿಗೆ ನೀಡಲಾಗಿದೆ. ಪ್ರಸಾದ ಸೇವಿಸಿದ ಬಹುತೇಕರು ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

ರೋಗಿಗಳ ಪರಿಸ್ಥಿತಿ ಸದ್ಯ ಸ್ಥಿರವಾಗಿದೆ. ಬಹುತೇಕರು ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಪಾಟೀಲ್ ತಿಳಿಸಿದ್ದಾರೆ.

ವೈದ್ಯಕೀಯ ತುರ್ತು ಸೇವೆಗಳಿಗಾಗಿ ಆಂಬ್ಯುಲೆನ್ಸ್‌ನಲ್ಲಿ ಅಗತ್ಯ ಚಿಕಿತ್ಸಾ ಸಾಮಗ್ರಿಯೊಂದಿಗೆ ಒಂದು ವೈದ್ಯರ ತಂಡವನ್ನು ನಿಯೋಜಿಸಲಾಗಿದೆ. ಪ್ರಸಾದದ ಮಾದರಿಗಳನ್ನು ಪ್ರಯೋಗಾಲಕ್ಕೆ ಕಳುಹಿಸಿಕೊಡಲಾಗಿದೆ ಎಂದು ಪಾಟೀಲ್ ತಿಳಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ: ಯುಪಿ ಕೋರ್ಟ್‌ನಲ್ಲಿ ಜೂನ್ 7ಕ್ಕೆ ವಿಚಾರಣೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ...

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಅಲೆ | ಬಿಜೆಪಿಗೆಷ್ಟು ನಷ್ಟ – ಕಾಂಗ್ರೆಸ್‌ಗೆ ಎಷ್ಟು ಲಾಭ?

ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ....

ರಾಜ್‌ಕೋಟ್‌ ಗೇಮ್‌ ಝೋನ್‌ ಅಗ್ನಿ ಅವಘಡ: ಇಬ್ಬರು ಪೊಲೀಸರು ಸೇರಿ ಐವರು ಅಧಿಕಾರಿಗಳ ಅಮಾನತು

ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್‌ಕೋಟ್ ಗೇಮ್‌ ಝೋನ್‌...

ರೆಮಲ್ ಚಂಡಮಾರುತಕ್ಕೆ ಕೋಲ್ಕತ್ತಾದಲ್ಲಿ ಓರ್ವ ಬಲಿ, ಬಂಗಾಳದಲ್ಲಿ ಭಾರೀ ಹಾನಿ

ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರೀ ಹಾನಿ ಉಂಟು ಮಾಡಿದ್ದು, ಚಂಡಮಾರುತದಿಂದ...