ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಕಾಂಗ್ರೆಸ್ ಸೇರಿ ವಿವಿಧ ಪ್ರತಿ ಪಕ್ಷಗಳಿಂದ ಕಳೆದ ಎರಡು ಅಧಿವೇಶನದ ದಿನಗಳಿಂದ ಇಲ್ಲಿಯವರೆಗೆ 47 ಸಂಸದರನ್ನು ಅಮಾನತುಗೊಳಿಸಲಾಗಿದೆ.
ಇಂದು(ಡಿ.18) ಅಮಾನತುಗೊಂಡಿರುವ ಸಂಸದರಲ್ಲಿ ಕಾಂಗ್ರೆಸ್ ಪಕ್ಷದ ಅಧೀರ್ ರಂಜನ್ ಚೌಧರಿ, ಡಿಎಂಕೆ ಸಂಸದರಾದ ಟಿ ಆರ್ ಬಾಲು ಮತ್ತು ದಯಾನಿಧಿ ಮಾರನ್ ಮತ್ತು ಟಿಎಂಸಿಯ ಸೌಗತ ರಾಯ್ ಸೇರಿದ್ದಾರೆ.
31 ಮಂದಿಯನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ್ದರೆ, ಘೋಷಣೆಗಳನ್ನು ಕೂಗಲು ಸ್ಪೀಕರ್ ವೇದಿಕೆಯ ಮೇಲೆ ಹತ್ತಿದ ಕಾರಣಕ್ಕಾಗಿ ವಿಶೇಷಾಧಿಕಾರ ಸಮಿತಿಯ ಕೆ ಜಯಕುಮಾರ್, ವಿಜಯ್ ವಸಂತ್ ಮತ್ತು ಅಬ್ದುಲ್ ಖಲೀಕ್ ಅವರನ್ನು ಅಮಾನತುಗೊಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ‘ದೇಶಕ್ಕಾಗಿ ದೇಣಿಗೆ’ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ
ಈ ಸಂಸದರ ಅಮಾನತು ಪ್ರಸ್ತಾವನೆಯನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸದನದಲ್ಲಿ ಮಂಡಿಸಿದರು. ನಂತರ ಅದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿಷಯದ ಬಗ್ಗೆ ಪ್ರತಿಪಕ್ಷಗಳ ಸದಸ್ಯರು ನಿರಂತರ ಪ್ರತಿಭಟನೆ ನಡೆಸಿದ ನಂತರ ಅಮಾನತು ಪ್ರಕ್ರಿಯೆ ಮುಂದುವರೆದಿದೆ. ವಿರೋಧ ಪಕ್ಷದ ಸಂಸದರ ಪ್ರತಿಭಟನೆಯ ದೃಷ್ಟಿಯಿಂದ ಲೋಕಸಭೆಯನ್ನು ನಾಳೆಗೆ ಮುಂದೂಡಲಾಗಿದೆ.
ಡಿಸೆಂಬರ್ 14 ರಂದು, ಸಂಸತ್ತಿನ ಭದ್ರತಾ ಉಲ್ಲಂಘನೆಯ ಒಂದು ದಿನದ ನಂತರ, 13 ಲೋಕಸಭಾ ಸಂಸದರು ಮತ್ತು ಒಬ್ಬ ರಾಜ್ಯಸಭಾ ಸಂಸದರನ್ನು “ಅಶಿಸ್ತಿನ ನಡವಳಿಕೆ” ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ.
ಲೋಕಸಭೆಯಿಂದ ಅಮಾನತುಗೊಂಡಿರುವ ಸಂಸದರಲ್ಲಿ ಮಾಣಿಕಂ ಟ್ಯಾಗೋರ್, ಕನಿಮೋಳಿ, ಪಿಆರ್ ನಟರಾಜನ್, ವಿಕೆ ಶ್ರೀಕಂದನ್, ಬೆನ್ನಿ ಬಹನನ್, ಕೆ ಸುಬ್ರಮಣ್ಯಂ, ಎಸ್ ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್ ಸೇರಿದ್ದಾರೆ. ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ ಬ್ರಿಯಾನ್ ರಾಜ್ಯಸಭೆಯಿಂದ ಅಮಾನತುಗೊಂಡ ಏಕೈಕ ಸಂಸದ.
#WinterSession2023 #LokSabha: Parliamentary Affairs Minister @JoshiPralhad moves motion to suspend 33 MPs from the House.@ombirlakota @LokSabhaSectt @loksabhaspeaker pic.twitter.com/kB41P5ando
— SansadTV (@sansad_tv) December 18, 2023