2029ರ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ: ಟಿಡಿಪಿ ಘೋಷಣೆ

Date:

2029ರ ಲೋಕಸಭೆ ಚುನಾವಣೆಗಳಿಗೆ ಪಕ್ಷದೊಳಗೆ ಮಹಿಳೆಯರಿಗೆ ಶೇ.33 ಮೀಸಲಾತಿ ಆಧಾರದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ವಾರ್ಷಿಕ ಮಹಾನಾಡು ಸಮಾವೇಶವಾದ ಮೊದಲ ದಿನದಂದು, ಪಕ್ಷದ ಕಾರ್ಯಕಾರಿ ಅಧ್ಯಕ್ಷ ಮತ್ತು ಆಂಧ್ರಪ್ರದೇಶ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಐಟಿ ಸಚಿವ ನಾರಾ ಲೋಕೇಶ್ ಘೋಷಿಸಿದ್ದಾರೆ.

- Advertisement -

ಈ ಬಾರಿಯ ಮಹಾನಾಡು ಸಮಾವೇಶವನ್ನು ‘ಸ್ತ್ರೀ ಶಕ್ತಿ’ (ಮಹಿಳಾ ಸಬಲೀಕರಣ) ಎಂಬ ಪರಿಕಲ್ಪನೆಯಡಿ ಆಯೋಜಿಸಲಾಗಿದೆ. ಮಹಿಳೆಯರು ಕೇವಲ ಕಲ್ಯಾಣ ಯೋಜನೆಗಳ ಫಲಾನುಭವಿಗಳಾಗದೆ ರಾಜಕೀಯದಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವ ನಾಯಕರಾಗಬೇಕು ಎಂಬುದು ಇದರ ಉದ್ದೇಶವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಮಹಿಳಾ ಮೀಸಲನ್ನು ಕ್ಷೇತ್ರ ಮರುವಿಂಗಡಣೆಯ ಗೂಟಕ್ಕೆ ಬಿಗಿದ ಮೋದಿ ಸರ್ಕಾರದ ಕುತಂತ್ರಕ್ಕೆ ಸೋಲಾ, ಗೆಲುವಾ?

ಈ ಸಮಾವೇಶದಲ್ಲಿ ಮಾತನಾಡಿದ ಟಿಡಿಪಿ ನಾಯಕ, ಕೇಂದ್ರ ಸರ್ಕಾರದ ಮಹಿಳಾ ಮೀಸಲಾತಿ ಮಸೂದೆಯು ಸಂಸತ್ತಿನಲ್ಲಿ ಕಾನೂನಾಗಿ ಜಾರಿಗೆ ಬರುವವರೆಗೂ ಕಾಯುವುದಿಲ್ಲ. ನಮ್ಮ ಪಕ್ಷವು ಸ್ವಯಂಪ್ರೇರಿತವಾಗಿ ಈ ನಿರ್ಧಾರವನ್ನು ಜಾರಿಗೆ ತರಲಿದೆ. ದೇಶದ ರಾಜಕೀಯದ ಮುಂದಿನ ಯುಗವು ಮಹಿಳಾ ನಾಯಕತ್ವಕ್ಕೆ ಸೇರಿರಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ಲೋಕಸಭೆಯಲ್ಲಿ ಕ್ಷೇತ್ರ ಮರುವಿಂಗಡಣೆಯೊಂದಿಗೆ ಜೋಡಿಸಲಾದ ಮಹಿಳಾ ಮೀಸಲಾತಿಯು ಅಂಗೀಕಾರ ಪಡೆಯುವಲ್ಲಿ ವಿಫಲವಾಗಿದೆ. ದಕ್ಷಿಣ ಭಾರತದ ರಾಜ್ಯಗಳು ವಿರೋಧಿಸುತ್ತಾ ಬಂದಿರುವ ಕ್ಷೇತ್ರ ಮರುವಿಂಗಡಣೆಯನ್ನು ಮಹಿಳಾ ಮೀಸಲಾತಿಗೆ ಜೋಡಿಸಿ ಪರೋಕ್ಷವಾಗಿ ಕ್ಷೇತ್ರ ಮರುವಿಂಗಡಣೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿತ್ತು. ಈ ನಿಟ್ಟಿನಲ್ಲಿ ವಿಪಕ್ಷಗಳು ಈ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿಲ್ಲ. ಆದರೆ ಸದ್ಯ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ವಿಪಕ್ಷಗಳನ್ನು ಮಹಿಳಾ ವಿರೋಧಿ ಎಂದು ಬಿಂಬಿಸಲು ಯತ್ನಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...