ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

Date:

Advertisements

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36 ಮಂದಿ ಕಾಣೆಯಾಗಿದ್ದಾರೆ. ಆಗಸ್ಟ್ 14ರಂದು ಕಿಶ್ತ್ವಾರ್ ಜಿಲ್ಲೆಯ ಮೇಘಸ್ಫೋಟದಿಂದಾಗಿ ಪ್ರವಾಹ ಸಂಭವಿಸಿ ಹತ್ತು ದಿನ ಕಳೆದಿದ್ದು, ಇನ್ನೂ 36 ಮಂದಿ ನಾಪತ್ತೆಯಾಗಿದ್ದಾರೆ. ಮೂರು ದಿನಗಳಿಂದ ಯಾವುದೇ ಮೃತದೇಹ ಅಥವಾ ಸಂತ್ರಸ್ತರು ಪತ್ತೆಯಾಗಿಲ್ಲ ಎನ್ನಲಾಗಿದೆ.

ಚೆಸೋಟಿ ಗ್ರಾಮದಲ್ಲಿ ಇಂದು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ 10 ನೇ ದಿನಕ್ಕೆ ತಲುಪಿದೆ ಎಂದು ಎನ್‌ಡಿಆರ್‌ಎಫ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ NDRF, SDRF, ಸೇನೆ, BRO, ಪೊಲೀಸ್ ಮತ್ತು ಸರ್ಕಾರಿ ಸಂಸ್ಥೆಗಳ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿವೆ. ಶ್ವಾನ ದಳಗಳು, ಇತರೆ ತಂತ್ರಜ್ಞಾನಗಳನ್ನು ಬಳಸಿಯೂ ಶೋಧ ನಡೆಯಸಲಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಮತ್ತೆ ಮೇಘಸ್ಫೋಟ: ನಾಲ್ವರ ಸಾವು, ಆರು ಮಂದಿಗೆ ಗಾಯ

Advertisements

“ಚೆಸೋಟಿ ಗ್ರಾಮದಿಂದ ಹೊಳೆಯಲ್ಲಿ ಹುಡುಕಾಟವನ್ನು ನಡೆಸುತ್ತಿದ್ದೇವೆ. ದಿಢೀರ್ ಪ್ರವಾಹದಲ್ಲಿ ಶವಗಳು ಕೊಚ್ಚಿ ಹೋಗಿರಬಹುದು. ಆದರೂ ಶವಗಳು ಸಿಗಬಹುದು ಎಂಬ ಭರವಸೆಯಲ್ಲಿ ನಾವು ಹೊಳೆಯಲ್ಲಿ ಹುಡುಕಾಟವನ್ನು 40 ಕಿ.ಮೀ.ಗಳಿಗೆ ವಿಸ್ತರಿಸಿದ್ದೇವೆ. ಕಳೆದ ಮೂರು ದಿನಗಳಿಂದ ಯಾವುದೇ ಶವ ಪತ್ತೆಯಾಗಿಲ್ಲ” ಎಂದು NDRF ಅಧಿಕಾರಿ ಹೇಳಿದರು.

ಆಗಸ್ಟ್ 14ರಂದು ಚೆಸೋಟಿ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ದಿಢೀರ್ ಪ್ರವಾಹ ಮತ್ತು ಮಣ್ಣು ಕುಸಿತ ಉಂಟಾಗಿ 68 ಮಂದಿ ಸಾವನ್ನಪ್ಪಿದ್ದಾರೆ. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗ್ರಾಮದಲ್ಲಿ ಸಂಭವಿಸಿದ ದಿಢೀರ್ ಪ್ರವಾಹದಲ್ಲಿ ಒಂದು ಡಜನ್‌ಗೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಎನ್‌ಡಿಆರ್‌ಎಫ್ ಅಧಿಕಾರಿಗಳ ಪ್ರಕಾರ, ಸುಮಾರು 36 ಮಂದಿ ಇನ್ನೂ ಕಾಣೆಯಾಗಿದ್ದಾರೆ. ಈವರೆಗೆ ಕನಿಷ್ಠ 6 ಶವಗಳನ್ನು ಹೊಳೆಯಿಂದ ಹೊರತೆಗೆಯಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

Download Eedina App Android / iOS

X