ಯುದ್ಧಪೀಡಿತ ಸುಡಾನ್‌ನಿಂದ ದೆಹಲಿಗೆ ಬಂದಿಳಿದ 360 ಭಾರತೀಯರು

Date:

ಸುಡಾನ್‌ನಿಂದ ಜಿದ್ದಾಗೆ 1‌,100 ಭಾರತೀಯರ ಸ್ಥಳಾಂತರ

ಟ್ವೀಟ್‌ ಮೂಲಕ ಮಾಹಿತಿ ಹಂಚಿಕೊಂಡ ವಿದೇಶಾಂಗ ಸಚಿವ

ಯುದ್ಧಪೀಡಿತ ಸುಡಾನ್‌ನಲ್ಲಿ ಸಿಲುಕಿದ್ದ ಸಾವಿರಾರು ಜನರ ಪೈಕಿ 360 ಭಾರತೀಯರು ಬುಧವಾರ ತಡರಾತ್ರಿ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದಿದ್ದಾರೆ. ಈಗಲೂ ಸುಡಾನ್‌ ಹಲವೆಡೆ ಸಿಲುಕಿಕೊಂಡಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸುಡಾನ್‌ನಿಂದ ದೆಹಲಿಗೆ ಸುರಕ್ಷಿತವಾಗಿ ಮರಳಿದ ಭಾರತೀಯರ ಫೋಟೋಗಳನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ವಿದೇಶಾಂಗ ಸಚಿವ ಜೈಶಂಕರ್‌ ʼಆಪರೇಶನ್‌ ಕಾವೇರಿʼ ಮೂಲಕ ʼಸುಡಾನ್‌ನ ವಿವಿಧ ಪ್ರದೇಶಗಳಲ್ಲಿ ಸಿಲುಕಿದ್ದ 1,100 ಮಂದಿ ಭಾರತೀಯರನ್ನು ಸುರಕ್ಷಿತವಾಗಿ ಸೌದಿ ಅರೇಬಿಯಾದ ʼಜಿದ್ದಾʼಗೆ ಸ್ಥಳಾಂತರಿಸಲಾಗಿದೆ. ಈ ಪೈಕಿ 360 ಮಂದಿಯ ಮೊದಲ ತಂಡವನ್ನು ಜಿದ್ದಾದಿಂದ ಭಾರತಕ್ಕೆ ಕರೆತರಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದವರು ಸೇರಿದಂತೆ ಸುಡಾನ್‌ನಲ್ಲಿ 3 ಸಾವಿರಕ್ಕೂ ಹೆಚ್ಚು ಭಾರತೀಯರು ಸಿಲುಕಿಕೊಂಡಿದ್ದರು ಎನ್ನಲಾಗಿದೆ. ನೌಕಾಪಡೆಯ ʼಐಎನ್‌ಎಸ್‌ ಸುಮೇಧʼ ನೌಕೆ ಮತ್ತು ವಾಯಸೇನೆಯ ವಿಮಾನಗಳನ್ನು ಬಳಸಿ ಈವರೆಗೆ ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಉಳಿದವರ ರಕ್ಷಣಾ ಕಾರ್ಯಾಚರಣೆ ಕೂಡ ಜಾರಿಯಲ್ಲಿದೆ.

ಸುಡಾನ್‌ನ ಸೇನಾ ಸಂಘರ್ಷದಲ್ಲಿ ಈವರೆಗೆ 400ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ವಿದ್ಯುತ್‌, ಕುಡಿಯುವ ನೀರಿನ ಸರಬರಾಜು ಎಲ್ಲವೂ ಸ್ಥಗಿತಗೊಂಡಿವೆ. ಹಲವು ದಿನಗಳಿಂದ ಅಂಗಡಿ ಮುಂಗಟ್ಟುಗಳು ಕೂಡ ಮುಚ್ಚಲ್ಪಟ್ಟಿದ್ದು, ಜನಸಾಮಾನ್ಯರು ಆಹಾರಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮ್ಮು ಕಾಶ್ಮೀರ| ನಾಲ್ವರು ಉಗ್ರರ ರೇಖಾಚಿತ್ರ ಬಿಡುಗಡೆ, 20 ಲಕ್ಷ ರೂ ಬಹುಮಾನ ಘೋಷಣೆ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ದೋಡಾ ಜಿಲ್ಲೆಯಲ್ಲಿ ಎರಡು ದಾಳಿಗಳಲ್ಲಿ...

ಸಚಿವ ಸಂಪುಟದಲ್ಲಿ ಜೆಪಿ ನಡ್ಡಾ; ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಾರು?

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಅಧಿಕಾರಾವಧಿಯು ಜೂನ್...

ಜಮ್ಮು ಕಾಶ್ಮೀರ ಉಗ್ರ ದಾಳಿ ಬಗ್ಗೆ ಪ್ರಧಾನಿ ಮೋದಿ ‘ಮೌನ’ ಪ್ರಶ್ನಿಸಿದ ರಾಹುಲ್ ಗಾಂಧಿ

ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರವಾಗಿ ಉಗ್ರ ದಾಳಿಗಳು ನಡೆಯುತ್ತಿದ್ದು, ಈ ಬಗ್ಗೆ...

ವೇದಿಕೆಯಲ್ಲೇ ಮಾಜಿ ರಾಜ್ಯಪಾಲೆ ತಮಿಳ್‌ಸೈಗೆ ಎಚ್ಚರಿಕೆ ನೀಡಿದ ಅಮಿತ್ ಶಾ: ವಿಡಿಯೋ ವೈರಲ್

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ...