2024ರಲ್ಲಿ 49 ಲಕ್ಷ ಮಕ್ಕಳ ಸಾವು: ವಿಶ್ವಸಂಸ್ಥೆ ವರದಿ

Date:

2024ರಲ್ಲಿ ಜಾಗತಿಕವಾಗಿ ಅಂದಾಜು 49 ಲಕ್ಷ ಮಕ್ಕಳು ತಮ್ಮ ಐದನೇ ಹುಟ್ಟುಹಬ್ಬದ ಮುಂಚೆಯೇ ಮೃತಪಟ್ಟಿದ್ದಾರೆ. ಇವರಲ್ಲಿ 23 ಲಕ್ಷ ನವಜಾತ ಶಿಶುಗಳಾಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.

- Advertisement -

ಬುಧವಾರ, ವಿಶ್ವಸಂಸ್ಥೆಯ ‘ಚೈಲ್ಡ್ ಮಾರ್ಟಾಲಿಟಿ ಎಸ್ಟಿಮೇಷನ್’ (UNIGME) ವರದಿ ಬಿಡುಗಡೆಯಾಗಿದೆ. ಭಾರತವು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಪ್ರಗತಿ ಸಾಧಿಸಿದೆ. ನವಜಾತ ಶಿಶು ಮತ್ತು ಮಕ್ಕಳ ಆರೋಗ್ಯ ಸುಧಾರಣೆಯಲ್ಲಿ ನಿರಂತರ ಏರಿಕೆ ಕಂಡಿದೆ. 1990ರಲ್ಲಿ ಐದು ವರ್ಷದೊಳಗಿನ ಮಕ್ಕಳ ಸಾವು ಪ್ರಮಾಣವು 57% ಇತ್ತು. ಈಗ, 17%ಗೆ ಇಳಿದಿದೆ ಎಂದು ವರದಿ ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ನ್ಯುಮೋನಿಯಾ, ಅತಿಸಾರ, ಮಲೇರಿಯಾ ಹಾಗೂ ಹೆರಿಗೆ ಸಂಬಂಧಿತ ತೊಂದರೆಗಳಂತಹ ತಡೆಗಟ್ಟಬಹುದಾದ ಕಾರಣಗಳಿಂದ ಸಂಭವಿಸುವ ಸಾವುಗಳನ್ನು ನಿಯಂತ್ರಿಸುವಲ್ಲಿ ಭಾರತ ಯಶಸ್ವಿಯಾಗಿದೆ ಎಂದು ತಿಳಿಸಿದೆ.

ವಿಶ್ವಸಂಸ್ಥೆಯ ಮಕ್ಕಳ ನಿಧಿ (UNICEF) ಕಾರ್ಯನಿರ್ವಾಹಕ ನಿರ್ದೇಶಕಿ ಕ್ಯಾಥರೀನ್ ರಸೆಲ್ ಅವರು, “ತಡೆಗಟ್ಟಬಹುದಾದ ರೋಗಗಳಿಂದ ಯಾವುದೇ ಮಗು ಸಾಯಬಾರದು. ಆದರೆ ಜಾಗತಿಕವಾಗಿ ಬಜೆಟ್ ಕಡಿತವಾಗುತ್ತಿರುವ ಈ ಸಮಯದಲ್ಲಿ ಮಕ್ಕಳ ಬದುಕುಳಿಯುವಿಕೆಯ ಪ್ರಗತಿಯು ಮಂದಗತಿಯಲ್ಲಿ ಸಾಗುತ್ತಿರುವುದು ಆತಂಕಕಾರಿ” ಎಂದು ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ (WHO) ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಗೆಬ್ರೆಯೆಸಸ್ ಅವರು, “ಸಂಘರ್ಷ ಮತ್ತು ಬಿಕ್ಕಟ್ಟಿನ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳು ಐದು ವರ್ಷ ತುಂಬುವ ಮೊದಲೇ ಸಾಯುವ ಸಾಧ್ಯತೆ ಮೂರು ಪಟ್ಟು ಹೆಚ್ಚಿದೆ,” ಎಂದು ಎಚ್ಚರಿಸಿದ್ದಾರೆ.

ತೀವ್ರ ಅಪೌಷ್ಟಿಕತೆಯಿಂದ (SAM) ಸಂಭವಿಸುವ ಸಾವುಗಳನ್ನು ವರದಿಯು ಅಂದಾಜಿಸಿದೆ. ಅದರಂತೆ, 2024ರಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಮಕ್ಕಳು ನೇರವಾಗಿ ಅಪೌಷ್ಟಿಕತೆಯಿಂದ ಸಾವನ್ನಪ್ಪಿದ್ದಾರೆ. ಅಲ್ಲದೆ, ಜನನದ ಮೊದಲ ತಿಂಗಳ ನಂತರದಲ್ಲಿ ಎದುರಾಗುವ ಮಲೇರಿಯಾ, ಅತಿಸಾರ ಹಾಗೂ ನ್ಯುಮೋನಿಯಾದಂತಹ ರೋಗಗಳಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ ಎಂಬುದನ್ನು ವರದಿ ಗುರುತಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...