ಉತ್ತರಾಖಂಡ್‌ನ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 19 ಮಂದಿಯಲ್ಲಿ ನಾಲ್ವರು ಸಾವು

Date:

ಉತ್ತರಾಖಂಡ್‌  ಹಿಮಾಲಯದ ಗರ್‌ವಾಲ್‌ ಪರ್ವತ ಶ್ರೇಣಿಗಳಲ್ಲಿನ ಸಹಸ್ತ್ರ ತಲ್ ಮಾಯಾಲಿಗೆ ಬೆಂಗಳೂರಿನಿಂದ ಚಾರಣಕ್ಕೆ ತೆರಳಿದ್ದ 19 ಮಂದಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

- Advertisement -

ಉತ್ತರಾಖಂಡ್‌ನ ಕಂದಾಯ ಇಲಾಖೆಯ ಮಾಹಿತಿಯಂತೆ ಅಲ್ಲಿನ ಪ್ರದೇಶದಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ನಾಲ್ವರು ಚಾರಣಿಗರು ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ರಾಜ್ಯ ವಿಪತ್ತು ಕಾರ್ಯಾಚರಣೆ ಪಡೆ ಹಾಗೂ ರಾಷ್ಟ್ರೀಯ ವಿಪತ್ತು ಕಾರ್ಯಾಚರಣೆ ಪಡೆ ಪರಿಹಾರ ಕಾರ್ಯಾಚರಣೆ ನಡೆಸುತ್ತಿದ್ದು, ಆರು ಚಾರಣಿಗರನ್ನು ರಕ್ಷಿಸಿದೆ.

ಚಾರಣಿಗರನ್ನು ರಕ್ಷಿಸಲು ಹೆಚ್ಚಿನ ನೆರವಿಗಾಗಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಅನ್ನು ಕೋರಲಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸ್ಥಳೀಯ ಗ್ರಾಮಸ್ಥರು ಸಹಾಯದಲ್ಲಿ ತೊಡಗಿಸಿಕೊಂಡಿದ್ದಾರೆ.

ವಿವಿಧ ಸಂಸ್ಥೆಯ ನಾಲ್ಕು ಹೆಲಿಕಾಪ್ಟರ್‌ಅನ್ನು ಪರಿಹಾರ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದ್ದು, ರಕ್ಷಿಸಲಾದ ಚಾರಣಿಗರನ್ನು ಏರ್‌ಲಿಫ್ಟ್‌ ಮೂಲಕ ಡೆಹ್ರಾಡೂನ್‌ಗೆ ಕರೆತರಲಾಗಿದ್ದು, ತುರ್ತು ವೈದ್ಯಕೀಯ ನೆರವು ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜಾಪ್ರಭುತ್ವದ ಮೇಲೆ ಸವಾರಿ ಮಾಡುವವರಿಗೆ ಪಾಠ ಕಲಿಸಿದ ಫಲಿತಾಂಶ

“ಸ್ಥಳದಲ್ಲಿ ಹವಾಮಾನ ಪರಿಸ್ಥಿತಿ ತುಂಬ ಕೆಟ್ಟದಾಗಿದೆ. ಹೆಚ್ಚು ಹಿಮ ಹಾಗೂ ಮಳೆ ಬೀಳುತ್ತಿರುವುದರಿಂದ ಗೋಚರತೆ ಕಡಿಮೆಯಿದೆ. ಈ ಕಾರಣದಿಂದ ಪರಿಹಾರ ಹೆಲಿಕಾಪ್ಟರ್‌ ಟೇಕ್‌ಆಫ್‌ ಆಗಿಲ್ಲ. ಆದಾಗ್ಯೂ ಎರಡು ಪರಿಹಾರ ತಂಡಗಳು ಕಣಿವೆಯಲ್ಲಿ ಸಿಲುಕಿಕೊಂಡಿರುವ ಬಳಿ ತೆರಳುತ್ತಿವೆ. ಇಂದು ಬೆಳಿಗ್ಗೆ ಹವಾಮಾನ ಪರಿಸ್ಥಿತಿ ಒಂಚೂರು ಸುಧಾರಿಸಿತ್ತು. ಪರಿಹಾರ ಹೆಲಿಕಾಪ್ಟರ್‌ ಕಣಿವೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಚಾರಣಿಗರನ್ನು ಕರೆತಂದಿದ್ದು, ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ” ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ ರಶ್ಮಿ ಮಹೇಶ್‌ ತಿಳಿಸಿದ್ದಾರೆ.

ಪರಿಹಾರ ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಮೇಲ್ವಿಚಾರಣೆ ನಡೆಸುತ್ತಿದ್ದು, ಕರ್ನಾಟಕ ಸರ್ಕಾರ ಕೂಡ ಪರಿಹಾರ ಕಾರ್ಯಾಚರಣೆಗೆ ಸಹಕರಿಸಲು ಉತ್ತರಾಖಂಡ್‌ಗೆ ಒಬ್ಬರು ಅಧಿಕಾರಿಗಳನ್ನು ಕಳಿಸುವ ಸಾಧ್ಯತೆಯಿದೆ.

ಇಂದು ಸಂಜೆಯೊಳಗೆ ಪರಿಹಾರ ಕಾರ್ಯಚರಣೆ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಖಾಸಗಿ ಸಂಸ್ಥೆಯ ಮೂಲಕ ಚಾರಣಿಗರು ಪರ್ವತ ಶ್ರೇಣಿಗಳಿಗೆ ತೆರಳಿದ್ದರು ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...