ಮಧ್ಯಪ್ರದೇಶ | ಭೀಕರ ಅಪಘಾತ: ನಾಲ್ವರ ಸಾವು, ಇಬ್ಬರ ಸಜೀವ ದಹನ

Date:

ಕಾರು ಮತ್ತು ವ್ಯಾನ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ನಾಲ್ವರು ಮೃತರ ಪೈಕಿ ಇಬ್ಬರು ಸಜೀವ ದಹನವಾಗಿದ್ದಾರೆ.

- Advertisement -

ಇಂದೋರ್ ಜಿಲ್ಲಾ ಕೇಂದ್ರ ಕಚೇರಿಯಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಮೊವ್ ತಹಸಿಲ್‌ನ ಆಗ್ರಾ-ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅವ್ಲೇ ಗ್ರಾಮದ ಬಳಿ ಬುಧವಾರ ತಡರಾತ್ರಿ ಈ ಅಪಘಾತ ನಡೆದಿದೆ. ವ್ಯಾನ್ ಅಗ್ನಿಗಾಹುತಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ಭೀಕರ ಅಪಘಾತ: ಹೊತ್ತಿ ಉರಿದ ಕಾರು, ನಾಲ್ವರ ಸಾವು

ವ್ಯಾನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಹಿಂಭಾಗದಲ್ಲಿ ಸಂಗ್ರಹಿಸಲಾಗಿದ್ದ ಬಣ್ಣದ ಡಬ್ಬಿಗಳಿಂದಾಗಿ ಬೆಂಕಿ ಇನ್ನಷ್ಟೂ ಹಬ್ಬಿದೆ ಎಂದು ಬದ್ಗೊಂಡ ಪೊಲೀಸ್ ಠಾಣೆಯ ಅಧಿಕಾರಿ ಪ್ರಕಾಶ್ ವಾಸ್ಕಾಲೆ ಪಿಟಿಐಗೆ ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ತಂಡವು ಸ್ಥಳಕ್ಕೆ ಆಗಮಿಸಿ ಬೆಂಕಿ ನಿಯಂತ್ರಿಸಿದೆ. ಆದರೆ ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಇನ್ನಿಬ್ಬರು ಮೃತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಎಂದು ಅಧಿಕಾರಿ ಹೇಳಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...