ಭಾರತ | ಮಧುಮೇಹಿಗಳ ಪೈಕಿ ಪ್ರತಿ 10ರಲ್ಲಿ 4 ಮಂದಿಗೆ ಕಾಯಿಲೆಯ ಅರಿವೇ ಇಲ್ಲ: ವರದಿ

Date:

ವಿಶ್ವದಲ್ಲಿ ಅತೀ ಹೆಚ್ಚು ಮಧುಮೇಹಿಗಳನ್ನು ಹೊಂದಿರುವ ದೇಶಗಳ ಪೈಕಿ ಭಾರತವು ಎರಡನೇ ಸ್ಥಾನದಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ನೀಡಿದ ವರದಿ ಪ್ರಕಾರ 18 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಕರಲ್ಲಿ 14% ಜನರು ಮಧುಮೇಹಕ್ಕೆ ತುತ್ತಾಗಿದ್ದಾರೆ.

- Advertisement -

WHO ಅಡಿಯಲ್ಲಿ ಲ್ಯಾನ್ಸೆಟ್‌ ಜಾಗತಿಕ ಆರೋಗ್ಯ ವರದಿಯನ್ನು ಬಿಡುಗಡೆ ಮಾಡಲಾಗಿದೆ. ವರದಿಯು; ಭಾರತದಲ್ಲಿರುವ ಮಧುಮೇಹ ರೋಗಿಗಳ ಪೈಕಿ ಪ್ರತಿ 10 ಮಂದಿಯಲ್ಲಿ 4 ಮಂದಿಗೆ ತಮಗೆ ಮಧುಮೇಹ ರೋಗವಿದೆ ಎಂಬುದರ ಅರಿವು ಇಲ್ಲ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಭಾರತದಲ್ಲಿ ಮುಂಬೈ ಇಂಟರ್‌ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಪಾಪ್ಯುಲೇಶನ್ ಸೈನ್ಸಸ್‌ ಮತ್ತು ಮಿಚಿಗನ್, ಹಾರ್ವರ್ಡ್ ವಿವಿಯ ಟಿಎಚ್ ಚಾನ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಸಹಯೋಗದಲ್ಲಿ ಸಮೀಕ್ಷೆ ನಡೆಸಲಾಗಿದೆ. 45 ವರ್ಷ ಮೇಲ್ಪಟ್ಟ ಒಟ್ಟು 57,080 ಜನರನ್ನು ಅಧ್ಯಯನಕ್ಕೆ ಒಳಗಪಡಿಸಲಾಗಿದೆ. ಅವರಲ್ಲಿ, 20% ಜನರು ಮಧುಮೇಹಕ್ಕೆ ತುತ್ತಾಗಿದ್ದಾರೆ. ಬದಲಾದ ಜೀವನಶೈಲಿ ಮತ್ತು ಆಹಾರ ಪದ್ದತಿಯ ಪರಿಣಾಮವಾಗಿ ರಕ್ತದಲ್ಲಿ ಗ್ಲೂಕೋಸ್‌ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ, ಹಲವರಲ್ಲಿ ಮಧುಮೇಹ ಕಾಣಿಸಿಕೊಳ್ಳುತ್ತಿದೆ. ಇದು ಗ್ರಾಮೀಣ ಪ್ರದೇಶಗಳಿಗಿಂತ ನಗರ ಭಾಗದಲ್ಲಿ ಹೆಚ್ಚಾಗಿ ಕಂಡುಬಂದಿದೆ ಎಂದು ವರದಿ ಹೇಳಿದೆ.

ಡಯಾಬಿಟಿಸ್‌ ಜೊತೆಗೆ ಅಧಿಕ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆಯು ಕೂಡಾ ಗಣನೀಯವಾಗಿ ಏರಿಕಯಾಗುತ್ತಿದೆ ಎನ್ನುವ ಆಘಾತಕಾರಿ ಮಾಹಿತಿಯನ್ನು ವರದಿಯು ಉಲ್ಲೇಖಿಸಿದೆ.

ಸಾಮನ್ಯವಾಗಿ ವಯಸ್ಕರನ್ನು ಕಾಡುತ್ತಿದ್ದ ಮಧುಮೇಹವು ಈಗ ಸಣ್ಣ ಮಕ್ಕಳಲ್ಲೂ ಕಾಣಿಸಿಕೊಳ್ಳತೊಡಗಿದೆ. ಚಟುವಟಿಕೆ ರಹಿತ ಜೀವನ ಪದ್ದತಿ ಮತ್ತು ಅತಿಯಾದ ಜಂಕ್‌ ಫುಡ್‌ ಸೇವನೆಯ ಪರಿಣಾಮವಾಗಿ 18 ವರ್ಷದ ಒಳಗಿನವರನ್ನೂ ಈ ಡಯಾಬಿಟಿಸ್‌ ಮತ್ತು ಅಧಿಕ ರಕ್ತದೊತ್ತಡ ಆವರಿಸಿಕೊಂಡಿದೆ. ಆರಂಭದಲ್ಲಿಯೇ ರೋಗ ಲಕ್ಷಣಗಳನ್ನು ಪತ್ತೆಹಚ್ಚಿದರೆ ಕಣ್ಣು, ಮೂತ್ರಪಿಂಡ, ಹೃದಯ ಮತ್ತು ದೇಹದ ಇತರ ಭಾಗಗಳಿಗೆ ಆಗುವ ಅಪಾಯವನ್ನು ತಡೆಯಬಹುದು ಎಂದು ವರದು ಸೂಚಿಸಿದೆ

ದೇಶದಲ್ಲಿ 2019ರಲ್ಲಿ ಸಾವಿಗೀಡಾದ ಜನರ ಪೈಕಿ 3% ಮಂದಿ ಮಧುಮೇಹದ ಕಾರಣಕ್ಕಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...