ಪಾಕ್ ಆಕ್ರಮಿತ ಕಾಶ್ಮೀರದಿಂದ (ಪಿಒಕೆ) ನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಶುಕ್ರವಾರ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ. ಒಂದು ವಾರದಲ್ಲಿ ಭದ್ರತಾ ಪಡೆಗಳು ವಿಫಲಗೊಳಿಸಿದ ಎರಡನೇ ಪ್ರಮುಖ ಒಳನುಸುಳುವಿಕೆ ಪ್ರಯತ್ನ ಇದಾಗಿದೆ.
ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಸಮೀಪದಲ್ಲಿ ಗುಂಡಿನ ಚಕಮಕಿ ನಡೆದಿದೆ. ಉಗ್ರರು ಪಿಒಕೆಯಿಂದ ಭಾರತದ ಕಡೆಗೆ ನುಸುಳಲು ಯತ್ನಿಸುತ್ತಿದ್ದರು ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು ಭಾರತದ ಕಡೆ ನುಸುಳಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಿಜೆಪಿ ಮಣಿಸಲು ಪಾಟ್ನಾದಲ್ಲಿ ಇಂದು ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ; 18 ಪಕ್ಷಗಳು ಭಾಗಿ
ಜೂನ್ 16 ರಂದು ಕುಪ್ವಾರ ಜಿಲ್ಲೆಯ ಜುಮಗುಂಡ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಪಾಕಿಸ್ತಾನಿ ಭಯೋತ್ಪಾದಕರು ಹತರಾಗಿದ್ದರು.