60 ಜನರ ಹಾಸ್ಟೆಲ್‌ನಲ್ಲಿ 150 ಮಂದಿ ವಾಸ್ತವ್ಯ; ಮಧ್ಯರಾತ್ರಿ ಕಿಟಕಿಯಿಂದ ಜಿಗಿದು ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿಯರು

Date:

ವಿದ್ಯಾರ್ಥಿನಿಲಯಗಳ ಅವ್ಯವಸ್ಥೆ ಹಾಗೂ ಮೂಲಸೌಕರ್ಯಗಳ ಕೊರತೆಗೆ ಕನ್ನಡಿ ಹಿಡಿಯುವಂತಹ ಆಘಾತಕಾರಿ ಘಟನೆಯೊಂದು ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಕಳಪೆ ಗುಣಮಟ್ಟದ ಊಟ ಹಾಗೂ ತೀವ್ರ ಸ್ಥಳಾವಕಾಶದ ಕೊರತೆಯಿಂದ ರೋಸಿಹೋದ ಸುಮಾರು 40 ಮಂದಿ ವಿದ್ಯಾರ್ಥಿನಿಯರು, ಮಧ್ಯರಾತ್ರಿ ವೇಳೆ ತಮ್ಮ ಹಾಸ್ಟೆಲ್ ಕಿಟಕಿಯಿಂದ ಹೊರಗೆ ಧುಮುಕಿ, ನೇರವಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ನೀಡಿದ್ದಾರೆ.

- Advertisement -

​ಜಿಲ್ಲೆಯ ‘ಮಾತಾ ಶಬರಿ’ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ (ಹಾಸ್ಟೆಲ್) ಈ ಅಮಾನವೀಯ ಅವ್ಯವಸ್ಥೆ ಬೆಳಕಿಗೆ ಬಂದಿದೆ. ನಿಯಮಾವಳಿಗಳ ಪ್ರಕಾರ, ಈ ಹಾಸ್ಟೆಲ್‌ನಲ್ಲಿ ಕೇವಲ 60 ವಿದ್ಯಾರ್ಥಿನಿಯರಿಗೆ ವಸತಿ ಕಲ್ಪಿಸಲು ಮಾತ್ರ ಅವಕಾಶ ಹಾಗೂ ಅಗತ್ಯ ಸೌಲಭ್ಯಗಳಿವೆ. ಆದರೆ, ಹಾಸ್ಟೆಲ್ ಆಡಳಿತ ಮಂಡಳಿಯು ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 150ಕ್ಕೂ ಹೆಚ್ಚು ವಿದ್ಯಾರ್ಥಿನಿಯರನ್ನು ಒಂದೇ ಕಡೆ ಕುರಿಗಳಂತೆ ತುರುಕಿತ್ತು. ಇದರಿಂದಾಗಿ ಮಕ್ಕಳು ಮಲಗಲು, ಶೌಚಾಲಯ ಬಳಸಲು ಹಾಗೂ ತಮ್ಮ ದೈನಂದಿನ ಅಧ್ಯಯನಕ್ಕೂ ತೀವ್ರ ಪರದಾಡುವಂತಹ ದುಸ್ಥಿತಿ ನಿರ್ಮಾಣವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

​ಕೇವಲ ಕಿಕ್ಕಿರಿದ ವಸತಿ ಮಾತ್ರವಲ್ಲದೆ, ದಿನನಿತ್ಯ ನೀಡುತ್ತಿದ್ದ ಊಟ ಕೂಡ ಅತ್ಯಂತ ಕಳಪೆ ಗುಣಮಟ್ಟದ್ದಾಗಿತ್ತು ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ. ಕಳಪೆ ಊಟ ಹಾಗೂ ಸ್ಥಳಾವಕಾಶದ ಕೊರತೆಯಿಂದಾಗಿ ತಮ್ಮ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ವಿದ್ಯಾರ್ಥಿನಿಯರು ಹಾಸ್ಟೆಲ್ ವಾರ್ಡನ್ ಹಾಗೂ ಆಡಳಿತ ಮಂಡಳಿಗೆ ಹಲವು ಬಾರಿ ದೂರು ನೀಡಿದ್ದರು. ಆದಾಗ್ಯೂ, ಅಧಿಕಾರಿಗಳು ಇವರ ಕೂಗಿಗೆ ಕನಿಷ್ಠ ಸ್ಪಂದನೆಯನ್ನೂ ನೀಡದೆ ನಿರ್ಲಕ್ಷ್ಯ ವಹಿಸಿದ್ದರು ಎಂದು ಆರೋಪಿಸಲಾಗಿದೆ.

​ಅಧಿಕಾರಿಗಳ ನಿರಂತರ ನಿರ್ಲಕ್ಷ್ಯದಿಂದ ರೋಸಿಹೋದ ವಿದ್ಯಾರ್ಥಿನಿಯರು ಅನಿವಾರ್ಯವಾಗಿ ಈ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಮಧ್ಯರಾತ್ರಿಯ ವೇಳೆ ಹಾಸ್ಟೆಲ್ ಸಿಬ್ಬಂದಿ ನಿದ್ದೆಗೆ ಜಾರಿದ್ದಾಗ, ಸುಮಾರು 40 ಬಾಲಕಿಯರು ತಮ್ಮ ಪ್ರಾಣಾಪಾಯವನ್ನೂ ಲೆಕ್ಕಿಸದೆ ಹಾಸ್ಟೆಲ್‌ನ ಕಿಟಕಿಗಳ ಮೂಲಕ ಒಬ್ಬೊಬ್ಬರಾಗಿ ಹೊರಗೆ ಧುಮುಕಿದ್ದಾರೆ. ಕತ್ತಲಲ್ಲಿ ರಸ್ತೆಗೆ ಬಂದ ಅವರು, ಆ ಮಾರ್ಗವಾಗಿ ಹೋಗುತ್ತಿದ್ದ ಸ್ಥಳೀಯರ ವಾಹನಗಳನ್ನು ನಿಲ್ಲಿಸಿ, ಅವರ ನೆರವಿನೊಂದಿಗೆ ರಾತ್ರೋರಾತ್ರಿ ಪೊಲೀಸ್ ಠಾಣೆಯನ್ನು ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.

​ಮಧ್ಯರಾತ್ರಿ ಏಕಾಏಕಿ 40 ಬಾಲಕಿಯರು ಠಾಣೆ ಮೆಟ್ಟಿಲೇರಿದ್ದನ್ನು ಕಂಡು ಪೊಲೀಸರು ಕೂಡ ಒಮ್ಮೆಲೆ ಬೆಚ್ಚಿಬಿದ್ದಿದ್ದಾರೆ. ವಿದ್ಯಾರ್ಥಿನಿಯರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮಾಹಿತಿ ದಾಖಲಿಸಿಕೊಂಡಿದ್ದು, ಹಾಸ್ಟೆಲ್ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಕೂಡಲೇ ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಬೀದರ್‌ | ಕುಡಿಯುವ ನೀರಿಗಾಗಿ ಔರಾದ್‌ ಬಂದ್‌ ಯಶಸ್ವಿ

ಔರಾದ್ ಪಟ್ಟಣದಲ್ಲಿ ಕಳೆದ ಎರಡು ತಿಂಗಳಿಂದ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ...