‘ಇಂಡಿಯಾ’ ಬೃಹತ್ ರ್ಯಾಲಿ ಮೇಲೆ ಮೋದಿ ಸರ್ಕಾರದ ಕಣ್ಣು; 4,000 ಪೊಲೀಸರು, 200 ಸಿಸಿಟಿವಿ ಕ್ಯಾಮೆರಾಗಳ ನಿಯೋಜನೆ!

Date:

ಚುನಾವಣಾ ಅಕ್ರಮಗಳ ವಿರುದ್ಧ ಮತ್ತು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟವು ಇಂದು (ಭಾನುವಾರ) ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತಿದೆ. ಈ ರ್ಯಾಲಿ ಮೇಲೆ ಮೋದಿ ಸರ್ಕಾರವು ಕಣ್ಣಿಟ್ಟಿದ್ದು, 4,000 ಪೊಲೀಸರು ಮತ್ತು 200 ಸಿಸಿಟಿವಿ ಕ್ಯಾಮೆರಾಗಳನ್ನು ನಿಯೋಜಿಸಿದೆ ಎಂದು ವರದಿಯಾಗಿದೆ.

- Advertisement -

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಪ್ರಮಾಣದ ಮತ ಕಳವು (‘ವೋಟ್ ಚೋರಿ’) ಮತ್ತು ಲಕ್ಷಾಂತರ ನೈಜ ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಿಹಾಕುವುದನ್ನು ವಿರೋಧಿಸಿ ಇಂಡಿಯಾ ಒಕ್ಕೂಟ ಬೃಹತ್ ಹೋರಾಟ ನಡೆಸುತ್ತಿದೆ. ಇಂದಿನ ರ್ಯಾಲಿಯಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ, ಸಾರ್ವಜನಿಕ ಬದುಕು ಹಾಗೂ ಜನಪರ ಚಟುವಟಿಕೆಗಳ ಮೂಲಕ ವಿಶೇಷ ಛಾಪು ಮೂಡಿಸಿದ್ದಾರೆ. ಅಂತಹವರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕಾಂಗ್ರೆಸ್...

ಈ ದಿನ ಕವಿತೆ | ಎರಡು ದೀಪಗಳು- ಅಲಿ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಉರ್ದು ಕವಿ ಅಲಿ ಸರ್ದಾರ್ ಜಾಫ್ರಿಯವರ ಕವನವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ . ಕತ್ತಲ ಗವಿಯೊಳಗಿಂದರೆಕ್ಕೆಗಳು ಫಡಫಡಿಸುವ ಸದ್ದು ಕೇಳುವುದು.ನಿರ್ದಯಿ ಗಾಳಿಯುಮಂಜಿನ ಮೇಲೆ...

ಆದಾಗ್ಯೂ, ಮೈದಾನದಲ್ಲಿ ಸುಮಾರು 50,000 ಜನರು ಸೇರುವ ಸಾಧ್ಯತೆಯಿದೆ ಎಂದು ದೆಹಲಿ ಪೊಲೀಸರು ಅಂದಾಜಿಸಿದ್ದಾರೆ. ಮೈದಾನವು ಸಂಪೂರ್ಣ ಖಾಲಿ ಇರುವಾಗ 45,000 ರಿಂದ 50,000 ಜನರು ನೆರೆಯಬಹುದು. ಸಭೆಗಾಗಿ ಕುರ್ಚಿಗಳು ಮತ್ತು ಓಡಾಡಲು ದಾರಿಗಳನ್ನು ವ್ಯವಸ್ಥೆಗೊಳಿಸಿರುವುದರಿಂದ ಅಲ್ಲಿನ ನಿಖರವಾದ ಸಾಮರ್ಥ್ಯವು ಸುಮಾರು 30,000 ರಿಂದ 40,000ಕ್ಕೆ ಇಳಿಯಲಿದೆ. ಒಂದು ವೇಳೆ, ನಿರೀಕ್ಷೆಗಿಂತ ಹೆಚ್ಚು ಜನ ಸೇರಿದರೆ ಜನಸಂದಣಿಯನ್ನು ಸುಲಭವಾಗಿ ನಿರ್ವಹಿಸಲು ಮೈದಾನದ ಹೊರಭಾಗದಲ್ಲೂ ಹೆಚ್ಚುವರಿ ಸ್ಥಳವನ್ನು ಕಾಯ್ದಿರಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರತಿಭಟನೆಯು ಮಧ್ಯಾಹ್ನ ಮಿಂಟೋ ರೇಡ್-ಕನ್ನಾಟ್ ಪ್ಲೇಸ್ ಜಂಕ್ಷನ್‌ನಿಂದ ರಾಮಲೀಲಾ ಮೈದಾನದವರೆಗೆ ನಡೆಯಲಿರುವ ‘ಚಲೋ ದೆಹಲಿ’ ಮೆರವಣಿಗೆಯೊಂದಿಗೆ ಆರಂಭವಾಗಲಿದೆ. ರಾಮಲೀಲಾ ಮೈದಾನದಲ್ಲಿ ಸಂಜೆ 5 ಗಂಟೆಯವರೆಗೆ ಮುಂದುವರಿಯಲಿದೆ. ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ತೆರೆದ ಬಸ್‌ಗಳಲ್ಲಿ ಮೆರವಣಿಗೆಯೊಂದಿಗೆ ಕನ್ನಾಟ್‌ ಪ್ಲೇಸ್‌ಗೆ ಬರಲಿದ್ದಾರೆ. ಪ್ರತಿಭಟನೆಯಲ್ಲಿ ವಿವಿಧ ವಿರೋಧ ಪಕ್ಷಗಳ ನಾಯಕರು, ನಾಗರಿಕ ಸಮಾಜದ ಪ್ರತಿನಿಧಿಗಳು, ವಿದ್ಯಾರ್ಥಿ ಸಂಘಟನೆಗಳು, ಯುವಕರು, ಮಹಿಳೆಯರು ಹಾಗೂ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸೇರಿದಂತೆ ಹಲವಾರು ವಿದ್ಯಾರ್ಥಿ ಸಂಘಟನೆಗಳು ಈ ಪ್ರತಿಭಟನೆಗೆ ಬೆಂಬಲ ಸೂಚಿಸಿವೆ.

ಪ್ರತಿಭಟನೆಯ ಹಿನ್ನೆಲೆಯಲ್ಲಿ ಸುರಕ್ಷತೆ ಮತ್ತು ಜನಸಂದಣಿ ನಿರ್ವಹಣೆಗಾಗಿ ದೆಹಲಿ ಪೊಲೀಸರು ವ್ಯಾಪಕ ಭದ್ರತಾ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಮೆರವಣಿಗೆಯ ಮಾರ್ಗದಲ್ಲಿ ಮತ್ತು ಮೈದಾನದಲ್ಲಿ 4,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು (CAPF) ನಿಯೋಜಿಸಲಾಗಿದೆ. ರಾಮಲೀಲಾ ಮೈದಾನವನ್ನು 14 ಭದ್ರತಾ ವಲಯಗಳಾಗಿ ವಿಂಗಡಿಸಲಾಗಿದ್ದು, ಪ್ರತಿ ವಲಯದ ಮೇಲ್ವಿಚಾರಣೆಯನ್ನು ಸಹಾಯಕ ಪೊಲೀಸ್ ಆಯುಕ್ತ (ACP) ಮಟ್ಟದ ಅಧಿಕಾರಿಗೆ ವಹಿಸಲಾಗಿದೆ. ಕಣ್ಗಾವಲಿಗಾಗಿ 200ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳು, ಡ್ರೋನ್‌ಗಳು ಹಾಗೂ ಅಂಗಿ ಮೇಲೆ ಅಳವಡಿಸಲಾಗುವ ಕ್ಯಾಮೆರಾಗಳನ್ನು ಪೊಲೀಸರು ಬಳಸಿದ್ದಾರೆ.

ಶನಿವಾರವಷ್ಟೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಒಕ್ಕೂಟವು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ನಡೆಸಿದ ಸಾಂಕೇತಿಕ ‘ಸಾರ್ವಜನಿಕ ದೋಷಾರೋಪಣೆ’ ಪ್ರಕ್ರಿಯೆಯ ಮುಂದುವರಿದ ಭಾಗವಾಗಿ ಇಂದಿನ ಪ್ರತಿಭಟನೆ ನಡೆಯುತ್ತಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಪತ್ತೆಯಾಗಿದ್ದ ದೊಡ್ಡಬಳ್ಳಾಪುರದ ದಲಿತ ಮುಖಂಡ ಸಿ. ಗುರುರಾಜಪ್ಪ ಧರ್ಮಸ್ಥಳದಲ್ಲಿ ಶವವಾಗಿ ಪತ್ತೆ

​ದೊಡ್ಡಬಳ್ಳಾಪುರದ ಕಚೇರಿಪಾಳ್ಯದ ನಿವಾಸಿ, ದಲಿತ ಹಾಗೂ ಪ್ರಗತಿಪರ ಹೋರಾಟಗಾರ ಸಿ. ಗುರುರಾಜಪ್ಪ...

ರೈತ ಹೋರಾಟದಿಂದ ವಿಧಾನಸಭಾಧ್ಯಕ್ಷ ಸ್ಥಾನದವರೆಗೆ ಕಾಗೋಡು ತಿಮ್ಮಪ್ಪ ಹಾದಿ…

ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ಇತಿಹಾಸದಲ್ಲಿ ಕೆಲವು ವ್ಯಕ್ತಿಗಳು ತಮ್ಮ ಹೋರಾಟ,...

ನಾಲ್ಕು ಹೊಸ ಫೀಚರ್’ಗಳನ್ನು ಪರಿಚಯಿಸಿದ WHATSAPP

ಮೆಟಾ ಒಡೆತನದ ಜನಪ್ರಿಯ ಇನ್‌ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಶನ್ WhatsApp ತನ್ನ ಬಳಕೆದಾರರ...

ಮತದಾರರ ಮರುಸೇರ್ಪಡೆಗೆ ಚುನಾವಣಾ ಆಯೋಗದಿಂದಲೇ ತಡೆ; 16.10 ಲಕ್ಷ ಜನರ ಸೇರ್ಪಡೆ ವಿರೋಧಿಸಿ ಮೇಲ್ಮನವಿ!

ಪಶ್ಚಿಮ ಬಂಗಾಳದ SIR ಪ್ರಕ್ರಿಯೆ ಮುಗಿದರೂ, ಅಲ್ಲಿನ ಮತದಾರರ ಪಟ್ಟಿಯ ಸುತ್ತ...