ಪಶ್ಚಿಮ ಬಂಗಾಳ | ಅಗ್ನಿ ಅವಘಡ: 4,000 ಇವಿಎಂಗಳು ಭಸ್ಮ; ಪಿತೂರಿ ಶಂಕೆ ವ್ಯಕ್ತಪಡಿಸಿದ ಸಚಿವರು

Date:

ಪಶ್ಚಿಮ ಬಂಗಾಳದ ದಕ್ಷಿಣ ಕೋಲ್ಕತ್ತಾದ ಅಲಿಪೋರ್‌ನಲ್ಲಿರುವ ಬಹುಮಹಡಿ ಸರ್ಕಾರಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಬರೋಬ್ಬರಿ 4,000 ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರಗಳು ಅಥವಾ ಇವಿಎಂಗಳು ಸುಟ್ಟು ಭಸ್ಮವಾಗಿದೆ. ಜಿಲ್ಲಾ ಪರಿಷತ್‌ನ 10 ಅಂತಸ್ತಿನ ಆಡಳಿತಾತ್ಮಕ ಸರ್ಕಾರಿ ಕಟ್ಟಡ ಇದಾಗಿದೆ.

- Advertisement -

ಬುಧವಾರ ಬೆಳಗ್ಗೆ ಕಚೇರಿ ಅವಧಿ ಆರಂಭವಾಗುವ ಮುನ್ನ ಸುಮಾರು 9:50ಕ್ಕೆ) ಈ ಬೆಂಕಿ ಕಾಣಿಸಿಕೊಂಡಿದೆ. ಈ ಕಟ್ಟಡದ 8 ಮತ್ತು 9ನೇ ಮಹಡಿಗಳಲ್ಲಿ ಇರಿಸಲಾಗಿದ್ದ ಸುಮಾರು 4,000 ಇವಿಎಂ ಯಂತ್ರಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಇವುಗಳನ್ನು ಇತ್ತೀಚಿನ ಬಂಗಾಳ ಚುನಾವಣೆಯ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬಳಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಚುನಾವಣಾಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಬೆಂಕಿ, ಇವಿಎಂಗಳಿಗೆ ಹಾನಿ

ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದರ ಹಿಂದೆ ಪಿತೂರಿ ಇರುವ ಶಂಕೆಯನ್ನು ಪಶ್ಚಿಮ ಬಂಗಾಳ ಸರ್ಕಾರದ ರಾಜ್ಯ ಸಚಿವರಾಗಿ ಶಾಲಾ ಶಿಕ್ಷಣ ಮತ್ತು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗಳನ್ನು ನಿರ್ವಹಿಸುತ್ತಿರುವ ಕೌಶಿಕ್ ಚೌಧರಿ ವ್ಯಕ್ತಪಡಿಸಿದ್ದಾರೆ.

“ಸುಮಾರು 4,000 ಇವಿಎಂಗಳು ಬೆಂಕಿಯಲ್ಲಿ ನಾಶವಾಗಿವೆ. ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 10 ಕ್ಷೇತ್ರಗಳಲ್ಲಿ ಆ ಇವಿಎಂಗಳನ್ನು ಬಳಸಲಾಗಿತ್ತು. ಪ್ರಾಥಮಿಕವಾಗಿ ಇದು ಸಾಮಾನ್ಯ ಅಗ್ನಿ ಅವಘಡದಂತೆ ಕಾಣುತ್ತಿಲ್ಲ. ಪ್ರಕರಣದಲ್ಲಿ ಪಿತೂರಿಯ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಸಚಿವ ಕೌಶಿಕ್ ಹೇಳಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಚೌಧರಿ, “ಯಾವುದೇ ವಿಧ್ವಂಸಕ ಕೃತ್ಯ ನಡೆದಿದೆಯೇ ಎಂದು ನಾವು ಪರಿಶೀಲಿಸುತ್ತಿದ್ದೇವೆ. ಬೆಂಕಿ ಒಂಬತ್ತನೇ ಮತ್ತು ಹತ್ತನೇ ಮಹಡಿಗೆ ಹೇಗೆ ತಲುಪಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕಟ್ಟಡದ ಎರಡನೇ ಮತ್ತು ಮೂರನೇ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತು. ನಾಲ್ಕನೇ, ಐದನೇ ಮತ್ತು ಆರನೇ ಮಹಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿಲ್ಲ. ನೇರವಾಗಿ ಬೆಂಕಿ ಏಳನೇ ಮತ್ತು ಎಂಟನೇ ಮಹಡಿಗಳನ್ನು ತಲುಪಿದ್ದು ಹೇಗೆ” ಎಂದು ಪ್ರಶ್ನಿಸಿದ್ದಾರೆ.

ದಕ್ಷಿಣ 24 ಪರಗಣ ಜಿಲ್ಲಾಡಳಿತದ ಪರವಾಗಿ, ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ADM) ಅಲಿಪೋರ್ ಪೊಲೀಸ್ ಠಾಣೆಯಲ್ಲಿ ಬೆಂಕಿ ಅವಘಡದ ಬಗ್ಗೆ ಲಿಖಿತ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಲ್ಲಿ ಮಾತು | ಕರವಾ ಚೌತ್‌: ಪಿತೃಸತ್ತೆ, ಸಂಪ್ರದಾಯದಾಚೆಗಿನ ಪ್ರಶ್ನೆಗಳು

ಪ್ರತಿ ಕಾರ್ತಿಕ ಮಾಸದ ಕೃಷ್ಣಪಕ್ಷದ ಚೌತಿಗೆ ತಪ್ಪದೆ ಬರುವ ’ಕರವಾ ಚೌತ್’...

ರಾಯಚೂರ | SIR ಪ್ರಕ್ರಿಯೆ ಪೂರ್ಣ : ಜಿಲ್ಲೆಯಲ್ಲಿ 14,24,909 ಲಕ್ಷ ಮತದಾರರು

ರಾಯಚೂರ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...

ಗ್ಯಾನೇಶ್ ವಿರುದ್ಧದ ನ.1ರ ರ‍್ಯಾಲಿಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಬೆಂಬಲಿಸಲಿರುವ ಸಿಜೆಪಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ವಿರೋಧಿಸಿ 'ಇಂಡಿಯಾ' (I.N.D.I.A.)...