48 ಗಂಟೆಗಳ ಪೊಲೀಸ್‌ ಕಾರ್ಯಾಚರಣೆ; 280 ದರೋಡೆಕೋರರ ಬಂಧನ

Date:

ದೆಹಲಿ ಪೊಲೀಸರು ‘ಆಪರೇಷನ್ ಗ್ಯಾಂಗ್ ಬಸ್ಟ್-2026’ಅನ್ನು ಪ್ರಾರಂಭಿಸಿದ್ದಾರೆ. ಗ್ಯಾಂಗ್‌ಸ್ಟರ್‌ಗಳು ಮತ್ತು ದರೋಡೆಕೋರರ ವಿರುದ್ಧದ ಪ್ರಮುಖ ಕಾರ್ಯಾಚರಣೆ ಇದಾಗಿದೆ. 48 ಗಂಟೆಗಳ ಶೋಧದಲ್ಲಿ 280 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಕಾರ್ಯಾಚರಣೆಗಾಗಿ 9,000ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದೆಹಲಿ, ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಇತರ ಭಾಗಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಕಳೆದ 48 ಗಂಟೆಗಳಲ್ಲಿಯೇ ಪ್ರಮುಖ ಮತ್ತು ಸಣ್ಣ ಗ್ಯಾಂಗ್‌ಗಳಿಗೆ ಸೇರಿದ 280 ದರೋಡೆಕೋರರನ್ನು ಬಂಧಿಸಿದ್ದಾರೆ. ಕಳೆದ 12 ದಿನಗಳಲ್ಲಿ ಒಟ್ಟು 854 ಆರೋಪಿಗಳನ್ನು ಬಂಧಿಸಲಾಗಿದೆ. 6,400ಕ್ಕೂ ಹೆಚ್ಚು ಶಂಕಿತರನ್ನು ಪರಿಶೀಲನೆ ಮತ್ತು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ದೆಹಲಿಯ ಹೆಚ್ಚುವರಿ ಪೊಲೀಸ್ ಆಯುಕ್ತ (ಸಿಪಿ) ವಿಶೇಷ ಕೋಶ ಪ್ರಮೋದ್ ಕುಶ್ವಾಹ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

“ಕೊಲೆ, ಕೊಲೆ ಯತ್ನ, ಸುಲಿಗೆ, ದರೋಡೆ ಮತ್ತು ಶಸ್ತ್ರಾಸ್ತ್ರ ಅಪರಾಧಗಳಲ್ಲಿ ಆರೋಪಿಗಳಾಗಿರುವ ಗ್ಯಾಂಗ್‌ಸ್ಟರ್‌ಗಳು, ಅವರ ಸಹಚರರು ಹಾಗೂ ಸಂಘಟಿತ ಅಪರಾಧದ ಕೃತ್ಯದಲ್ಲಿ ಭಾಗಿಯಾಗಿರುವ ಹಲವರನ್ನು ಬಂಧಿಸಲಾಗಿದೆ. 4,299 ಅಡಗುತಾಣಗಳ ಮೇಲೆ ಪೊಲೀಸ್‌ ತಂಡಗಳು ದಾಳಿ ನಡೆಸಿವೆ. ಆರೋಪಿಗಳನ್ನು ಬಂಧಿಸಿವೆ. ಅಲ್ಲದೆ, ಕಾನೂನಿನ ವಿವಿಧ ವಿಭಾಗಗಳ ಅಡಿಯಲ್ಲಿ 690 ಹೊಸ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿವೆ” ಎಂದು ಅವರು ತಿಳಿಸಿದ್ದಾರೆ.

“ಕಾರ್ಯಾಚರಣೆಯಲ್ಲಿ ಪೊಲೀಸರು ಸುಮಾರು 300 ಅಕ್ರಮ ಶಸ್ತ್ರಾಸ್ತ್ರಗಳು, 130 ಮದ್ದುಗುಂಡುಗಳು ಹಾಗೂ ಸುಮಾರು 25 ಲಕ್ಷ ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೂನಿನ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಂತಿ ಮುಚ್ಚಳಿಕೆ ನೋಟಿಸ್‌ಗೆ ಆಕ್ಷೇಪ: ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ವಿದ್ಯಾರ್ಥಿ ನಾಯಕಿ ನೇಹಾ ಬೋರಾ

ಶಾಂತಿ ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ₹10,000 ಮೊತ್ತದ 'ಶಾಂತಿ ಮುಚ್ಚಳಿಕೆ' (Peace...

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಆಸೆ: ಕೊಲೆ ಅಪರಾಧಿಯ ಶಿಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಡೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ...

ಮುಂಬೈ | ಸಾಹಿಲ್ ವಾಕೋಡೆ ಸಾವು: ಮಗನ ತಿಥಿಯಂದೇ ಪೋಷಕರು, ವಿದ್ಯಾರ್ಥಿಗಳ ಬಂಧನ

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ನಿಧನವಾಗಿ ಒಂದು ತಿಂಗಳ...