ಉಗ್ರರ ದಾಳಿ ಬೆದರಿಕೆ: ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಮುಚ್ಚಿದ ಸರ್ಕಾರ

Date:

ಗುಪ್ತಚರ ಇಲಾಖೆಗಳಿಂದ ಇನ್ನು ಹೆಚ್ಚಿನ ಉಗ್ರರ ದಾಳಿಯಾಗುವ ಸಾಧ್ಯತೆಯ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ 87 ಪ್ರವಾಸಿ ತಾಣಗಳಲ್ಲಿ 48 ತಾಣಗಳನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸ್ಥಗಿತಗೊಳಿಸಿದೆ.

- Advertisement -

ಪಹಲ್ಗಾಮ್‌ ದಾಳಿಯ ನಂತರ ಕೆಲವು ಉಗ್ರ ಸಂಘಟನೆಗಳು ಕಾಶ್ಮೀರದಲ್ಲಿ ಇನ್ನೂ ಸಕ್ರಿಯವಾಗಿದ್ದು, ದಾಳಿ ನಡೆಸುವ ಸೂಚನೆ ಇದೆಯೆಂದು ಅಧಿಕೃತ ಮಾಹಿತಿಗಳು ದೃಢೀಕರಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

ಪ್ರಶಾಂತ ಕಣಿವೆಗಳು ಮತ್ತು ಸುಂದರವಾದ ಪರ್ವತಗಳಿಗೆ ಹೆಸರುವಾಸಿಯಾದ ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 48 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ. ಬುದ್ಗಾಮ್‌ನ ದೂಧಪತ್ರಿ ಮತ್ತು ಅನಂತನಾಗ್‌ನ ವೆರಿನಾಗ್‌ನಂತಹ ಹಲವಾರು ಪ್ರವಾಸಿ ತಾಣಗಳಿಗೆ ತೆರಳದಂತೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಳಮೀಸಲಾತಿ ಗಣತಿ ಚಾರಿತ್ರಿಕ ದಾಖಲೆ, ತಪ್ಪದೇ ಭಾಗಿಯಾಗಿರಿ

ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರ ಹತ್ಯೆ ಹಿನ್ನೆಲೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರು ವಾಪಸ್ಸಾಗುತ್ತಿದ್ದಾರೆ. ಅನೇಕ ಜನರು ತಮ್ಮ ನಿಗದಿಗೊಳಿಸಿದ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ. ಒಂದು ವಾರದ ಹಿಂದೆ ಪಹಲ್ಗಾಮ್ ಪಟ್ಟಣವು ಪ್ರವಾಸಿಗರಿಂದ ತುಂಬಿ ಕೊಂಡಿತ್ತು.

ಆದರೆ ಈಗ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಪ್ರವಾಸೋದ್ಯಮ ಸ್ಥಳೀಯರ ಪ್ರಮುಖ ಆದಾಯದ ಮೂಲವಾಗಿತ್ತು. ಪ್ರವಾಸಿಗರ ಕುಸಿತವು ತಮ್ಮ ಆದಾಯದ ಮೂಲ ಮತ್ತು ಜೀವನೋಪಾಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ಸ್ಥಳೀಯರಿಗೆ ಆತಂಕವಾಗಿದೆ. ಭಯೋತ್ಪಾದಕ ದಾಳಿಯನ್ನು ಖಂಡಿಸಿ ಸ್ಥಳೀಯರು ಇತ್ತೀಚಿಗಷ್ಟೆ ಬಂದ್‌ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಯಮಗಿರಿ ಗಣಿಗಾರಿಕೆ ಪುನರಾರಂಭದ ಕುಮ್ಮಕ್ಕು: ಜಲಮೂಲ, ಅಸ್ತಿತ್ವ ರಕ್ಷಣೆಗೆ ಸಿಡಿದೆದ್ದ ಪರಿಸರ ಪ್ರೇಮಿಗಳು!

ಒಡಿಶಾದ ರಾಯಗಡ ಮತ್ತು ಕಾಲಾಹಾಂಡಿ ಜಿಲ್ಲೆಗಳ ಗಡಿಭಾಗದಲ್ಲಿರುವ ಪ್ರಸಿದ್ಧ ನಿಯಮಗಿರಿ ಬೆಟ್ಟ...

₹2,700 ಬೆಲೆಯ ಕ್ಯಾನ್ಸರ್‌ ಔಷಧಿ ಮೇಲೆ ₹27,000 MRP: ಇದು ʼನರಮೇಧʼ ಎಂದ ಸುಪ್ರೀಂ ಕೋರ್ಟ್

ಕ್ಯಾನ್ಸರ್‌ ಔಷಧಿಗಳ ಬೆಲೆಯಲ್ಲಿ ಭಾರೀ ವ್ಯತ್ಯಾಸ ಕಂಡುಬರುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್‌...

​’ಕಂದಾ, ನೀನು ನ್ಯಾಯಾಲಯ ಕಂಡ ಅತಿ ಧೈರ್ಯಶಾಲಿ ಬಾಲಕಿ’: ಪೋಕ್ಸೊ ಸಂತ್ರಸ್ತೆಗೆ ನ್ಯಾಯಾಧೀಶರ ಭಾವುಕ ಪತ್ರ

ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲಿ ನ್ಯಾಯಾಲಯದ ತೀರ್ಪುಗಳು ಕೇವಲ ಶಿಕ್ಷೆ ಮತ್ತು ದಂಡಕ್ಕೆ...