ತಮಿಳುನಾಡಿನ ಕಲ್ಲಾಕುರಿಚಿಯ ಕರುಣಾಪುರಂನಲ್ಲಿ ಕಳ್ಳಭಟ್ಟಿ ಸಾರಾಯಿ ದುರಂತದಲ್ಲಿ ಮತ್ತೆ ಹತ್ತು ಮಂದಿ ಸಾವನ್ನಪ್ಪಿದ್ದು, ಒಟ್ಟು ಮೃತರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.
ಸುಮಾರು 115 ಜನರು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮತ್ತು ಸೇಲಂ, ವಿಲ್ಲುಪುರಂ, ಪುದುಚೇರಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 25 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಮತ್ತು ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 50 ಸಾವಿರ ರೂಪಾಯಿ ಘೋಷಣೆ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ತಮಿಳುನಾಡು| ಕಳ್ಳಭಟ್ಟಿ ಸಾರಾಯಿ ಸೇವಿಸಿ 29 ಮಂದಿ ಸಾವು
ಇನ್ನು ಗುರುವಾರ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ ಸಚಿವ ಉದಯನಿಧಿ ಸ್ಟಾಲಿನ್ ಸಹಾಯಧನದ ಚೆಕ್ ವಿತರಿಸಿದ್ದು ಕಳ್ಳಭಟ್ಟಿ ಸಾರಾಯಿ ಮಾರಾಟ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
#WATCH | Tamil Nadu Minister Udhayanidhi Stalin visits victims of hooch tragedy in Kallakurichi government hospital pic.twitter.com/OBpmpji6Np
— ANI (@ANI) June 20, 2024
ಕಳ್ಳಭಟ್ಟಿ ಸಾರಾಯಿಯಲ್ಲಿ ಮೆಥೆನಾಲ್ ಬಳಕೆ ಮಾಡಿರುವುದು ತಿಳಿದು ಬಂದಿದ್ದು, ಮೆಥೆನಾಲ್ ಮೂಲದ ಬಗ್ಗೆ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಸಿಎಂ ಸ್ಟಾಲಿನ್ ಹೇಳಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ.