ಬಿಹಾರ | ಸತ್ತಿದ್ದಾರೆಂದು ಮತಪಟ್ಟಿಯಿಂದ ಕಿತ್ತು ಹಾಕಲಾಗಿದ್ದವರು ಬದುಕಿ ಬಂದಿದ್ದಾರೆ!

Date:

ಬಿಹಾರ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಪಕ್ಷಗಳು ಚುನಾವಣಾ ಪ್ರಚಾರ ನಡೆಸುತ್ತಿವೆ. ಈ ನಡುವೆ, ಒಂದೇ ಗ್ರಾಮದ ಐವರು ಮತದಾರರು ತಮ್ಮನ್ನು ‘ಸತ್ತವರು’ ಎಂದು ಮತಪಟ್ಟಿಯಿಂದ ಕಿತ್ತುಹಾಕಿರುವುದನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ. ಕಳೆದ 2-3 ತಿಂಗಳಲ್ಲಿ ನಡೆದ ಮತದಾರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬದುಕಿದ್ದವರನ್ನೂ ಸತ್ತಿದ್ದಾರೆಂದು ಚುನಾವಣಾ ಆಯೋಗ ಮತಪಟ್ಟಿಯಿಂದ ಕಿತ್ತುಹಾಕಿದೆ ಎಂಬುದಕ್ಕೆ ಮತ್ತೊಂದು ಪ್ರಕರಣ ಸೇರಿಕೊಂಡಿದೆ.

- Advertisement -

ಧೋರೈಯಾ ಪ್ರದೇಶದ ಬಟ್ಸರ್ ಗ್ರಾಮದ ಐವರು ಮತದಾರರನ್ನು ಚುನಾವಣಾ ಆಯೋಗ ಮತಪಟ್ಟಿಯಿಂದ ಕಿತ್ತುಹಾಕಿದೆ. ಅವರನ್ನು ಸತ್ತಿದ್ದಾರೆಂದು ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೋಹನ್ ಸಾ (ಸೀರಿಯಲ್ ಸಂಖ್ಯೆ 2), ಸಂಜಯ್ ಯಾದವ್ (ಸೀರಿಯಲ್ ಸಂಖ್ಯೆ 175), ರಾಮರೂಪ್ ಯಾದವ್ (ಸೀರಿಯಲ್ ಸಂಖ್ಯೆ 211), ನರೇಂದ್ರ ಕುಮಾರ್ ದಾಸ್ (ಸೀರಿಯಲ್ ಸಂಖ್ಯೆ 364) ಹಾಗೂ ವಿಶ್ವವರ್ ಪ್ರಸಾದ್ (ಸೀರಿಯಲ್ ಸಂಖ್ಯೆ 380) ಮತಪಟ್ಟಿಯಿಂದ ಹೊರಗುಳಿದಿರುವ ಮತದಾರರು.

ಈ ಐವರೂ ತಮ್ಮ ಗ್ರಾಮದ ಬೂತ್ ಸಂಖ್ಯೆ 216ರ ನಿವಾಸಿಗಳು ಬಿಡಿಒ ಅರವಿಂದ್ ಕುಮಾರ್ ಅವರನ್ನು ಸಂಪರ್ಕಿಸಿ ‘ಸರ್, ನಾವು ಜೀವಂತವಾಗಿದ್ದೇವೆ’ ಎಂದು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಈ ಲೇಖನ ಓದಿದ್ದೀರಾ?: Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಬಿಡಿಒ ಕುಮಾರ್ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಫಾರ್ಮ್ -6 ಅನ್ನು ಭರ್ತಿ ಮಾಡಲು ಮತ್ತು ಹೆಸರುಗಳನ್ನು ಮರುಸ್ಥಾಪಿಸಲು ಬಿಎಲ್‌ಒಗೆ ಸೂಚಿಸಿದ್ದಾರೆ. ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುವುದಿಲ್ಲ ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...